35 ಸಾವಿರ ರೈತರಿಗೆ ಪಿಎಂ ಕಿಸಾನ್ ನಿಧಿ ಇಲ್ಲ
Team Udayavani, Jun 8, 2023, 5:05 PM IST
ರಾಮನಗರ: ಕೇಂದ್ರ ಸರ್ಕಾರದ ಮಹತ್ವದ ಯೋಜನೆಯಾಗಿರುವ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ(ಪಿಎಂ ಕಿಸಾನ್) ಯೋಜನೆಯ ಸವಲತ್ತು ಪಡೆಯಲು ಇ ಕೆವೈಸಿ ಕಡ್ಡಾಯವಾಗಿದ್ದು, ಜಿಲ್ಲೆಯಲ್ಲಿ 35,925 ಮಂದಿ ಇದುವರೆಗೆ ಇ-ಕೆವೈಸಿ ಮಾಡಿಸದ ಪರಿಣಾಮ ಅವರಿಗೆ ಯೋಜನೆ ದೊರೆಯದಾಗಿದೆ.
ಜಿಲ್ಲೆಯಲ್ಲಿ 1,10,355 ಮಂದಿ ಫಲಾನುಭವಿಗಳಿದ್ದು, ಇವರಲ್ಲಿ ಕೇವಲ 74,430 ಮಂದಿ ಮಾತ್ರ ಇ-ಕೆವೈಸಿ ಮಾಡಿಸಿಕೊಂಡಿದ್ದಾರೆ. ಉಳಿದವರು ಇ-ಕೆವೈಸಿ ಮಾಡಿಸಿಕೊಂಡಿಲ್ಲ. ಇ-ಕೆವೈಸಿ ಮಾಡಿಸಿಕೊಳ್ಳದ ರೈತರಿಗೆ ಹಣ ಪಾವತಿಯಾಗದ ಕಾರಣ ಜಿಲ್ಲೆಯಲ್ಲಿ ಶೇ.33ರಷ್ಟು ರೈತರು ಈ ಯೋಜನೆಯಿಂದ ವಂಚಿತರಾಗುವ ಸಾಧ್ಯತೆ ಇದೆ.
ರಾಮನಗರ ತಾಲೂಕಿನಲ್ಲಿ 7,079, ಚನ್ನಪಟ್ಟಣ ತಾಲೂಕಿನಲ್ಲಿ 6,682, ಕನಕಪುರ ತಾಲೂಕಿನಲ್ಲಿ 11,699 ಹಾಗೂ ಮಾಗಡಿ ತಾಲೂಕಿನಲ್ಲಿ 10,465 ಫಲಾನುಭವಿಗಳು ಇ-ಕೆವೈಸಿ ಮಾಡಿರುವುದಿಲ್ಲ. ಈಗಾಗಲೇ 13 ಕಂತು ಹಣಪಾವತಿ ಮಾಡಲಾಗಿದ್ದು, ಇ-ಕೆವೈಸಿ ಇಲ್ಲದ ರೈತರಿಗೆ ಹಣ ಪಾವತಿ ಮಾಡಿಲ್ಲ. ಇದೀಗ 14ನೇ ಸುತ್ತಿನ ಹಣವನ್ನು ಬಿಡುಗಡೆ ಮಾಡಲು ಇ-ಕೆವೈಸಿ ಅತ್ಯಗತ್ಯವಾಗಿದ್ದು, ಇ-ಕೆವೈಸಿ ಮಾಡಿಸದಿದ್ದರೆ ಹಣ ಪಾವತಿಯಾಗುವುದಿಲ್ಲ ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.
ಕೂಡಲೇ ಇ-ಕೆವೈಸಿ ಮಾಡಿಸಿ: ಇದುವರೆಗೆ ಇ-ಕೆವೈಸಿ ಮಾಡಿಸಿಕೊಳ್ಳದ ರೈತರು ಹತ್ತಿರದ ರೈತ ಸಂಪರ್ಕ ಕೇಂದ್ರ, ಗ್ರಾಮ ಒನ್ ಕೇಂದ್ರ, ನಾಗರೀಕ ಸೇವಾ ಕೇಂದ್ರ ಅಥವಾ ಸೈಬರ್ ಸೆಂಟರ್‌ಗಳಲ್ಲಿ ಆಧಾರ್ ಆಧಾರಿತ ಓಟಿಪಿ ಮೂಲಕ ಅಥವಾ ಹೆಬ್ಬೆಟ್ಟಿನ ಗುರುತು ನೀಡುವ ಮೂಲಕ ಇ-ಕೆವೈಸಿ ಮಾಡಿಸುವ ಅವಕಾಶವಿದ್ದು ಕೂಡಲೇ ಇ-ಕೆವೈಸಿ ಮಾಡಿಸಬೇಕು ಎಂದು ಕೃಷಿ ಇಲಾಖೆ ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
30 ಇ-ಕೆವೈಸಿಗೆ ಕಡೆ ದಿನ: ಕೃಷಿ ಆಯುಕ್ತರು ಜೂ.3ರಂದು ನಡೆದ ಗೂಗಲ್ ಸಭೆಯಲ್ಲಿ ಜೂ.30ರೊಳಗೆ ಎಲ್ಲಾ ಅರ್ಹ ರೈತರ ಇ-ಕೆವೈಸಿ ಮಾಡಿಸಲು ಸೂಚನೆ ನೀಡಿದ್ದಾರೆ. ವಿಶೇಷ ಆಂದೋಲನ ರೂಪದಲ್ಲಿ ರೈತರಿಗೆ ಇ-ಕೆವೈಸಿ ಮಾಡಿಸಲು ಸೂಕ್ತ ಕ್ರಮ ಕೈಗೊಳ್ಳಲು ತಮ್ಮ ಎಲ್ಲಾ ಜಿಲ್ಲಾಮಟ್ಟದ ಹಾಗೂ ತಾಲೂಕುಮಟ್ಟದ ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಿದ್ದು, ನಿಗದಿತ ದಿನಾಂಕದೊಳಗೆ ಎಲ್ಲಾ ರೈತರು ಇ-ಕೆವೈಸಿ ಪೂರ್ಣಗೊಳಿಸಿ ಈ ಯೋಜನೆಯ ಲಾಭವನ್ನು ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಮನವಿ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.