ಕರ್ನಾಟಕ ನಾಮಕರಣ ಸುವರ್ಣ ಸಂಭ್ರಮ: ಅರ್ಥಪೂರ್ಣ ಆಚರಣೆ
Team Udayavani, Jun 10, 2023, 6:10 AM IST
ಬೆಂಗಳೂರು: ಮೈಸೂರು ರಾಜ್ಯವು “ಕರ್ನಾಟಕ ‘ಎಂದು ನಾಮಕರಣಗೊಂಡು 50 ವರ್ಷ ಪೂರ್ಣಗೊಳ್ಳುತ್ತಿರುವ ಸಂದರ್ಭದಲ್ಲಿ ವಿಶೇಷ ಕಾರ್ಯಕ್ರಮಗಳನ್ನು ಕನ್ನಡ ಮತ್ತು ಸಂಸ್ಕೃತಿ ಇಲಾಖೆಯಿಂದ ಆಯೋಜಿಸಲು ಸೂಚಿಸಲಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹೇಳಿದ್ದಾರೆ.
ಕನ್ನಡ ಭವನದಲ್ಲಿ ಇಲಾಖೆಯ ಆಯವ್ಯಯ ಸಭೆಯಲ್ಲಿ ಮಾತನಾಡಿದ ಅವರು, ಮೈಸೂರು ರಾಜ್ಯ 1973ರ ಅ.20ರಂದು ಕರ್ನಾಟಕ ಎಂದು ಮರುನಾಮಕರಣಗೊಂಡಿದ್ದು, ಈಗ 50 ವರ್ಷ ಪೂರೈಸುತ್ತಿದೆ. ಈ ಐತಿಹಾಸಿಕ ಸಂದರ್ಭದಲ್ಲಿ ಕನ್ನಡ ನಾಡು, ನುಡಿ, ಸಂಸ್ಕೃತಿಯನ್ನು ಸಾರುವಂತಹ ವಿಶೇಷ ಕಾರ್ಯಕ್ರಮಗಳನ್ನು ರೂಪಿಸಿ ವರ್ಷವಿಡೀ ಆಯೋಜಿಸಲು ಸೂಕ್ತ ರೂಪುರೇಷೆಗಳನ್ನು ಸಿದ್ಧಪಡಿಸಿ ಸಲ್ಲಿಸಬೇಕೆಂದು ಅಧಿಕಾರಿಗಳಿಗೆ ಸೂಚಿಸಿದರು.
ಈ ಬಾರಿ ಬಜೆಟ್‌ನಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳಿಗೆ ಹೆಚ್ಚಿನ ಅನುದಾನ ಕೋರಲಾಗುವುದು. ಆ ಮೂಲಕ ಸಂಸ್ಕೃತಿ ಇಲಾಖೆಯ ಕಾರ್ಯಕ್ರಮಗಳು ವ್ಯಾಪಕವಾಗಿ ಮತ್ತು ಹೆಚ್ಚು ಆಕರ್ಷಣೀಯವಾಗಿ ಯೋಜಿಸಲು ಉದ್ದೇಶಿಸಲಾಗಿದೆ. ರವೀಂದ್ರ ಕಲಾ ಕ್ಷೇತ್ರವನ್ನು ನವೀಕರಿಸಿ ಅಲ್ಲಿನ ಆಸನ ವ್ಯವಸ್ಥೆ, ಧ್ವನಿ ಮತ್ತು ಬೆಳಕುಗಳ ಸುಧಾರಣೆ ಮಾಡಲು ಕ್ರಮ ಕೈಗೊಳ್ಳುವಂತೆಯೂ ಅಧಿಕಾರಿಗಳು ಸಚಿವರಿಗೆ ಸೂಚಿಸಿದರು.
ಕರ್ನಾಟಕದ ಪರಂಪರೆ ಬಿಂಬಿಸುವ ಚಾಲುಕ್ಯ ಉತ್ಸವ, ಆನೆಗುಂದಿ ಉತ್ಸವ, ಲಕ್ಕುಂಡಿ ಉತ್ಸವ, ಹಂಪಿ ಉತ್ಸವ, ನವರಸಪುರ ಉತ್ಸವ, ಕದಂಬ ಉತ್ಸವ, ಇಟಗಿ ಉತ್ಸವ ಹಾಗೂ ಕನಕಗಿರಿ ಉತ್ಸವ ಮುಂತಾದ ಉತ್ಸವಗಳನ್ನು ಇನ್ನು ಮುಂದೆ ನಿಗದಿತ ದಿನಾಂಕಗಳಂದು ಪ್ರವಾಸಿಗರ ಅನುಕೂಲವನ್ನು ದೃಷ್ಟಿಯಲ್ಲಿಟ್ಟುಕೊಂಡು ಆಯೋಜಿಸಬೇಕು. ವೇಳಾಪಟ್ಟಿ ಸಿದ್ಧಪಡಿಸಬೇಕೆಂದು ಅವರು ಹೇಳಿದರು.
ಉತ್ತರ ಕರ್ನಾಟಕ ಮತ್ತು ಹೈದರಾಬಾದ್ ಕರ್ನಾಟಕ ಭಾಗಗಳಲ್ಲಿ ಜಾನಪದ ಲೋಕ ಸ್ಥಾಪನೆಗೆ ಸೂಕ್ತ ಯೋಜನೆ ರೂಪಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಸಭೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಡಾ| ಎನ್. ಮಂಜುಳಾ, ನಿರ್ದೇಶಕ ವಿಶ್ವನಾಥ ಪಿ. ಹಿರೇಮಠ ಹಾಗೂ ಇತರ ಅಧಿಕಾರಿಗಳು ಹಾಜರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Karnataka: ಒಳ ಮೀಸಲು ಜಾರಿವರೆಗೆ ಸರಕಾರಿ ನೇಮಕಾತಿಗೆ ತಡೆ
Bengaluru: ಬಾಳೆಕುದ್ರು ಶ್ರೀಮಠದ ಶಿಷ್ಯ ಸ್ವೀಕಾರ
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.