PU ಫೇಲಾದ ಪ್ರಿಯಾಂಕ ಖರ್ಗೆ ಎಂಜಿನಿಯರ್ ಸೂಲಿಬೆಲೆಯ ಪದವಿ ಕೇಳುತ್ತಿದ್ದಾರೆ: ಭರತ್ ಶೆಟ್ಟಿ
Team Udayavani, Jun 10, 2023, 5:07 PM IST
ಸುರತ್ಕಲ್: ಎಂಜಿನಿಯರಿಂಗ್ ಮುಗಿಸಿ ಕೈ ತುಂಬಾ ವೇತನವಿದ್ದ ಕಲಸ ತ್ಯಜಿಸಿ , ದೇಶದ ಭವಿಷ್ಯಕ್ಕಾಗಿ ಯುವ ಸಮೂಹದಲ್ಲಿ ರಾಷ್ಟ್ರೀಯತೆ, ದೇಶ ಭಕ್ತಿ ಉದ್ದೀಪನ ಗೊಳಿಸುತ್ತಿರುವ ಚಕ್ರವರ್ತಿ ಸೂಲಿಬೆಲೆಯ ವಿದ್ಯಾರ್ಹತೆಯನ್ನು ಪ್ರಥಮ ಪಿಯುಸಿ ಫೇಲ್ ಆದ ಸಚಿವ ಪ್ರಿಯಾಂಕ ಖರ್ಗೆ ಪ್ರಶ್ನಿಸುತ್ತಿರುವುದು ಹಾಸ್ಯಾಸ್ಪದ ಎಂದು ಮಂಗಳೂರು ಉತ್ತರ ವಿಧಾನಸಭಾ ಕ್ಷೇತ್ರದ ಶಾಸಕ ಡಾ.ಭರತ್ ಶೆಟ್ಟಿ ವೈ ವ್ಯಂಗ್ಯವಾಡಿದ್ದಾರೆ.
ಸೂಲಿಬೆಲೆ ಯಾವ ಪಿಎಚ್‌ಡಿ ಪದವಿ ಗಳಿಸಿದ್ದಾನೆ, ಬಾಡಿಗೆ ಭಾಷಣಗಾರರನ್ನು ಲೇಖಕರು ಮಾಡಿ, ಅವನ ಪಾಠ ಮಕ್ಕಳು ಯಾಕೆ ಓದಬೇಕು ಎಂದು ಪ್ರಿಯಾಂಕ್ ಖರ್ಗೆ ಏಕವಚನದಲ್ಲಿ ಮಾತನಾಡಿರುವ ಬಗ್ಗೆ ಡಾ.ಭರತ್ ಶೆಟ್ಟಿ ವೈ ತೀವ್ರ ಆಕ್ರೋಶ ವ್ಯಕ್ತ ಪಡಿಸಿದ್ದು, ಮೊದಲು ನಿಮ್ಮ ವಿದ್ಯಾರ್ಹತೆ ನೋಡಿಕೊಂಡು ಸೂಲಿಬೆಲೆ ಬಗ್ಗೆ ಮಾತನಾಡಿ, ನಿಮಗೆ ಪ್ರಶ್ನಿಸುವ ನೈತಿಕ ಹಕ್ಕು ಇಲ್ಲ ಎಂದು ತಿರುಗೇಟು ನೀಡಿದ್ದಾರೆ.
ದೇಶದಲ್ಲಿ ರಾಷ್ಟ್ರೀಯತೆಯನ್ನು, ದೇಶ ಪ್ರೇಮವನ್ನು ಜಾಗೃತಿ ಮಾಡುವುದೇ ಅಪರಾಧವೆಂದು ಪ್ರಿಯಾಂಕ ಖರ್ಗೆ ತಿಳಿದಂತಿದೆ. ದೇಶ ಭಕ್ತಿ, ನಮ್ಮರಾಷ್ಟ್ರಎಂಬ ಭಾವನೆಯನ್ನು ನಮ್ಮ ಭವಿಷ್ಯದ ಮಕ್ಕಳಿಗೆ ಯಾವತ್ತೂ ತಿಳಿಸುವ ಗೋಜಿಗೆ ಹೋಗದ ಕಾಂಗ್ರೆಸ್ ಪಕ್ಷವು, ದೇಶದೊಳಗೆ ಭಯೋತ್ಪಾದಕನಿಗೆ ಏನಾದಾರೂ ಆದರೆ ಕಣ್ಣೀರಿಡುವ ಪಕ್ಷವಾಗಿದೆ ಎಂದರು.
ರಾಷ್ಟ್ರೀಯತೆಯ ಭಾವನೆಯಿಲ್ಲದೆ ಸೊರಗಿರುವ ಮಕ್ಕಳು ಇಂದು ರೈಲು ಓಡಾಡುವ ಹಳಿಗಳ ಮೇಲೆ ಕಲ್ಲಿಟ್ಟು, ಕಲ್ಲು ತೂರಾಟ ನಡೆಸಿ ಹಿಂಸಾ ಪ್ರವೃತ್ತಿ ತೋರಿಸುತ್ತಿದ್ದಾರೆ. ಕಾಂಗ್ರೆಸ್ ಪಕ್ಷದ ಕಪಟ ಜಾತ್ಯಾತೀತತೆಯ ಕಾರಣದಿಂದಾಗಿ ದೇಶ ಸೊರಗುತ್ತಿದೆಯೇ ಹೊರತು, ಸೂಲಿಬೆಲೆಯಂತಹ ದೇಶ ಭಕ್ತರಿಂದಲ್ಲ ಎಂದು ಕಿಡಿಕಾರಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Father of the Nation: ಬಾಂಗ್ಲಾ ರಾಷ್ಟ್ರಪಿತನಿಗೆ ಪಠ್ಯದಿಂದಲೇ ಕೊಕ್!
Shocking: ಹೆರಿಗೆ ವೇಳೆ ಹೃದಯಾಘಾತ: ಮಹಿಳೆ ಮೃತ್ಯು, ಮಗುವನ್ನು ಉಳಿಸುವ ಯತ್ನವೂ ವಿಫಲವಾಯಿತು
Rohit Sharma; ಮುಗಿಯಿತಾ ರೋಹಿತ್ ಕ್ರಿಕೆಟ್ ವೃತ್ತಿಜೀವನ? ಗಂಭೀರ ಕೋಪಕ್ಕೆ ಕಾರಣವೇನು?
Channapatna; ನ್ಯೂಇಯರ್ ಪಾರ್ಟಿ ಮಾಡಲು ಹೋದವನ ಕೊಲೆ ಮಾಡಿದ ಬಾವಿಗೆ ಎಸೆದರು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.