BJP ಕಾರ್ಯಕರ್ತರ ನೆರವಿಗೆ ಸಹಾಯವಾಣಿ ಆರಂಭ
Team Udayavani, Jun 11, 2023, 7:47 AM IST
ಬೆಂಗಳೂರು: ಹೊಸದಾಗಿ ಸರಕಾರ ರಚಿಸಿರುವ ಕಾಂಗ್ರೆಸ್ ದಬ್ಟಾಳಿಕೆಯ ನೀತಿ ಅನುಸರಿಸಿ ಬಿಜೆಪಿ ಕಾರ್ಯಕರ್ತರ ಮೇಲೆ ಸುಳ್ಳು ಕೇಸ್, ರೌಡಿ ಶೀಟ್ ಸೇರ್ಪಡೆ, ದೌರ್ಜನ್ಯ ಸಹಿತ ಪೊಲೀಸ್ ಠಾಣೆಯ ಒಳಗೆ ಮತ್ತು ಹೊರಗೆ ತೊಂದರೆ ಮಾಡಿದರೆ ಅದನ್ನು ಎದುರಿಸಲು ಕಾರ್ಯಕರ್ತರಿಗೆ ನೆರವಾಗಲು ಬಿಜೆಪಿ ಕಾನೂನು ಸಹಾಯವಾಣಿ’ (18003091907) ಪ್ರಾರಂಭಿಸಿದೆ.
ಮಲ್ಲೇಶ್ವರದ ಬಿಜೆಪಿ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಬಿಜೆಪಿ ಯುವಾ ಮೋರ್ಚಾ ರಾಷ್ಟ್ರೀಯ ಅಧ್ಯಕ್ಷ ತೇಜಸ್ವಿ ಸೂರ್ಯ ಅವರು ಹೆಲ್ಪ್ಲೈನ್ ಅನ್ನು ಉದ್ಘಾಟಿಸಿದರು.
ಬಳಿಕ ಮಾತನಾಡಿದ ಅವರು ಕರ್ನಾಟಕದಲ್ಲಿ ಮುಂದಿನ ದಿನಗಳಲ್ಲಿ ನಮ್ಮ ಕಾರ್ಯಕರ್ತರ ಮೇಲೆ ಹಾಗೂ ನಮ್ಮ ಪರವಾಗಿ ಕೆಲಸ ಮಾಡುವವರ ಮೇಲೆ ದ್ವೇಷದ ರಾಜಕೀಯ ಮಾಡುವ ಮುನ್ಸೂಚನೆಗಳು ಸಿಕ್ಕಿವೆ. ಈ ಹಿನ್ನೆಲೆಯಲ್ಲಿ 100 ವಕೀಲರ ತಂಡವು ಸಹಾಯವಾಣಿ ರಚಿಸಿದೆ. ಸದನದ ಒಳಗೆ ಮತ್ತು ಹೊರಗೆ ಸರಕಾರ ನಡೆಸುವ ದೌರ್ಜನ್ಯದ ವಿರುದ್ಧ ಹೋರಾಟ ಸಂಘಟಿಸಲು ಸಿದ್ಧತೆ ಮಾಡಿಕೊಂಡಿದ್ದೇವೆ ಎಂದರು.
ರಾಜ್ಯದ ಎಲ್ಲ ಜಿಲ್ಲೆಗಳು ಹಾಗೂ ಹೈಕೋರ್ಟ್ ಪೀಠವಿರುವ ಎಲ್ಲ ಜಾಗಗಳಲ್ಲಿ ಕಾನೂನು ಪ್ರಕೋಷ್ಠದ ಕಾರ್ಯಕರ್ತರು ಮತ್ತು ವಕೀಲರ ತಂಡದ ರಚನೆಯಾಗಿದೆ. ರಾಜ್ಯದ ನೂರಕ್ಕೂ ಹೆಚ್ಚು ವಕೀಲರು ಈ ಸಹಾಯವಾಣಿಯನ್ನು ನಿರ್ವಹಿಸಲು ಸಹಕರಿಸುತ್ತಾರೆ ಎಂದು ತಿಳಿಸಿದರು.
ಕಾನೂನು ಪ್ರಕೋಷ್ಠದ ಸಂಚಾಲಕ ಯೋಗೇಂದ್ರ ಹೂಡಾಘಟ್ಟ ಮಾತನಾಡಿ, ರಾಜ್ಯದ ಕಾಂಗ್ರೆಸ್ ಅಧಿಕಾರಕ್ಕೆ ಬಂದ ಬಳಿಕ ಕಾನೂನಾತ್ಮಕವಾಗಿ ನಮ್ಮ ಕಾರ್ಯಕರ್ತರನ್ನು ಕಟ್ಟಿ ಹಾಕುವ ಕೆಲಸಕ್ಕೆ ಮುಂದಾಗಿದೆ. ಮಂತ್ರಿ ಸಹಿತವಾಗಿ ಕಾಂಗ್ರೆಸ್ ಕಾರ್ಯಕರ್ತರು ನಮ್ಮ ಕಾರ್ಯಕರ್ತರಿಗೆ ಧಮ್ಕಿ ಹಾಕುತ್ತಿದ್ದಾರೆ. ನಮ್ಮ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವ ದೃಷ್ಟಿಯಿಂದ ಸಹಾಯವಾಣಿ ಪ್ರಾರಂಭಿಸಲಾಗುತ್ತಿದೆ ಎಂದು ಹೇಳಿದರು.
ಬೆಂಗಳೂರು ವಕೀಲರ ಸಂಘದ ಅಧ್ಯಕ್ಷ ವಿವೇಕ್ ರೆಡ್ಡಿ ಮಾತನಾಡಿ, ಈ ಹೆಲ್ಪ್ಲೈನ್ ಮೂಲಕ ಬಿಜೆಪಿ ಕಾರ್ಯಕರ್ತರ ಸುರಕ್ಷೆ ಮತ್ತು ಅನೇಕ ಸಂಕಷ್ಟದ ಪರಿಸ್ಥಿತಿಗೆ ನೆರವು ಲಭಿಸಲಿದೆ. ಹೆಲ್ಪ್ಲೈನ್ ದಿನದ 24 ಗಂಟೆಯೂ ಕೆಲಸ ಮಾಡಲಿದೆ ಎಂದು ತಿಳಿಸಿದರು.
ರಾಜ್ಯ ಸಮಿತಿ ಸದಸ್ಯ ವಸಂತಕುಮಾರ್, ಹೆಲ್ಲೈನ್ ಸಮನ್ವಯಕಾರ ಸಂದೀಪ್ ರವಿ ಉಪಸ್ಥಿತರಿದ್ದರು.
ಹಬ್ಬಗಳ ಮೆರವಣಿಗೆಗೂ ಅವಕಾಶ ಇಲ್ಲ: ಕಾಂಗ್ರೆಸ್ ಸರ್ಕಾರದ ಹಿಂದಿನ ಅವಧಿಯಲ್ಲಿ ಸಂವಿಧಾನದಲ್ಲಿ ರಾಜಕೀಯ ಪಕ್ಷಕ್ಕೆ ಕೊಟ್ಟ ಅವಕಾಶದಂತೆ ನಡೆದುಕೊಂಡರೂ ಸುಳ್ಳು ಕೇಸು ಹಾಕಿದ್ದರು. ಗಣಪತಿ ಹಬ್ಬ, ಯುಗಾದಿ, ರಾಮನವಮಿ, ಹನುಮ ಜಯಂತಿಯ ಸಂದರ್ಭದಲ್ಲೂ ಕೋರ್ಟಿಗೆ ಹೋಗಿ ಅನುಮತಿ ಪಡೆದು ರ್ಯಾಲಿ, ಮೆರವಣಿಗೆ, ಶೋಭಾಯಾತ್ರೆ ಮಾಡಬೇಕಾದ ಪರಿಸ್ಥಿತಿ ಬಂದಿತ್ತು. ಫೇಸ್‌ಬುಕ್‌ನಲ್ಲಿ ಮುಖ್ಯಮಂತ್ರಿಗಳ ಕಾರ್ಯವೈಖರಿಯನ್ನು ಟೀಕಿಸಿ ಪೋಸ್ಟ್ ಹಾಕಿದ ಕಾರಣಕ್ಕೆ ಕೇಸು ಹಾಕಿಸಿ ಅವರನ್ನು ಬಂಧಿಸಲಾಗುತ್ತಿತ್ತು. ವಾಟ್ಸಾಪ್, ಕಾಟೂìನ್, ಮೀಮ್ ಹಂಚಿಕೊಂಡಾಗ ಬಂಧಿಸಲಾಗಿತ್ತು ಎಂದು ತೇಜಸ್ವಿ ಸೂರ್ಯ ಆರೋಪಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Vijaypura: ಕೋರ್ಟ್ ನಲ್ಲೆ ಕತ್ತು ಕೊ*ಯ್ದುಕೊಂಡ ಆರೋಪಿ!!
C.T.Ravi; ಬಿಡುಗಡೆ ಬಳಿಕ ಬಿಜೆಪಿ ಕಿಡಿ ಕಿಡಿ: ನಾವೇನು ಬಳೆ ತೊಟ್ಟು ಕುಳಿತಿಲ್ಲ…!
C.T. Ravi; ಅವಾಚ್ಯ ಶಬ್ದಗಳಿಂದ ನಿಂದಿಸಿದ ದಾಖಲೆ ಇಲ್ಲ: ಮಹತ್ವ ಪಡೆದ ಸಭಾಪತಿ ಹೇಳಿಕೆ
C.T. Ravi ಅವರನ್ನು ತತ್ ಕ್ಷಣ ಬಿಡುಗಡೆ ಮಾಡಿ: ಹೈಕೋರ್ಟ್ ಆದೇಶ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
24 ಕಂಬಳ ಕೂಟಕ್ಕೆ ತಲಾ 5 ಲಕ್ಷದಂತೆ ಅನುದಾನ: ಸಚಿವ ಎಚ್.ಕೆ. ಪಾಟೀಲ್
Mandya; ಕನ್ನಡ ಸಾಹಿತ್ಯ ಸಮ್ಮೇಳನ: “ಉದಯವಾಣಿ’ ವಿಶೇಷ ಪುರವಣಿ ಬಿಡುಗಡೆ
H. D. Kumaraswamy: ರಾಜ್ಯದಲ್ಲಿ ಪ್ರಜಾಪ್ರಭುತ್ವ ಕೊನೆಯುಸಿರೆಳೆಯುತ್ತಿದೆಯೇ?
Belagavi: ನ್ಯಾಯಾಧೀಶರ ಮುಂದೆ ಪೊಲೀಸ್ ದೌರ್ಜನ್ಯ ಬಿಚ್ಚಿಟ್ಟ ಸಿ.ಟಿ. ರವಿ
Chintamani: ರಸ್ತೆ ಅಪಘಾ*ತದಲ್ಲಿ ಯುವಕ ಸಾ*ವು,ಇಬ್ಬರಿಗೆ ಗಂಭೀರ ಗಾಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.