2024ರ ಲೋಕಸಭಾ ಚುನಾವಣೆಯಲ್ಲೂ ಗೆಲುವು: ಸಿದ್ದರಾಮಯ್ಯ
-ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ, ರಸಗೊಬ್ಬರ ಬೆಲೆಗಳನ್ನು ಇಳಿಸುತ್ತೇವೆ
Team Udayavani, Jun 11, 2023, 7:08 AM IST
ಮೈಸೂರು: 2024ರ ಲೋಕಸಭಾ ಚುನಾವಣೆಯಲ್ಲೂ ನಾವು ಗೆಲ್ಲುತ್ತೇವೆ. ಕೇಂದ್ರದಲ್ಲೂ ಅಧಿಕಾರಕ್ಕೆ ಬರುತ್ತೇವೆ. ಆಗ ಪೆಟ್ರೋಲ್ ಡೀಸೆಲ್ ಅಡುಗೆ ಅನಿಲ, ರಸಗೊಬ್ಬರ ಬೆಲೆಗಳನ್ನು ಇಳಿಸುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ವರುಣಾ ವಿಧಾನಸಭಾ ಕ್ಷೇತ್ರದ ನಂಜನಗೂಡು ತಾಲೂಕಿನ ಬಿಳಿಗೆರೆಯಲ್ಲಿ ಶನಿವಾರ ನಡೆದ ಬೃಹತ್ ಕೃತಜ್ಞತಾ ಸಮರ್ಪಣಾ ಸಭೆಯನ್ನುದ್ದೇಶಿಸಿ ಮಾತನಾಡಿ, ಬಡವರ, ಮಧ್ಯಮವರ್ಗದವರ ಸಂಕಷ್ಟ ಕಡಿಮೆ ಮಾಡಲು ನಾವು ಜಾರಿಗೆ ತಂದ ಯೋಜನೆಗಳನ್ನು, ಅವರಿಗಾ-ಇವರಿಗಾ ಎನ್ನುವ ಗೊಂದಲ ಸೃಷ್ಟಿಸುತ್ತಾರೆ. ನೀವು ಗೊಂದಲಕ್ಕೆ ಒಳಗಾಗಬೇಡಿ. ಯೋಜನೆಗಳ ಅನುಕೂಲ ಪಡೆಯಿರಿ ಎಂದು ಹೇಳಿದರು.
ಇದು ನನ್ನ ಕೊನೇ ಚುನಾವಣೆ ಆಗಿದೆ. ಆದರೆ ನಾನು ಉಸಿರು ಇರುವವರೆಗೂ ಸಕ್ರಿಯ ರಾಜಕಾರಣದಲ್ಲಿದ್ದು ಜನರ ಸೇವೆಯನ್ನು ಮುಂದುವರಿಸುತ್ತೇನೆ ಎಂದರು. ಗಗನಕ್ಕೇರಿರುವ ರಸಗೊಬ್ಬರ ಬೆಲೆಯನ್ನು ಕಡಿಮೆ ಮಾಡಿ ಎಂದು ಸಭೆಯಲ್ಲಿದ್ದ ರೈತರು ಕೂಗಿದರು. ಇದಕ್ಕೆ ಸ್ಪಂದಿಸಿದ ಮುಖ್ಯಮಂತ್ರಿಗಳು, ರಸಗೊಬ್ಬರ ಬೆಲೆ ಏರಿಸಿರುವುದು ಪ್ರಧಾನಿ ನರೇಂದ್ರ ಮೋದಿ ಸರ್ಕಾರ. ಬೆಲೆ ಇಳಿಸಬೇಕಾಗಿರುವುದೂ ಮೋದಿ ಸರ್ಕಾರವೇ. ಆದರೆ ಅವರು ಬೆಲೆ ಇಳಿಸಲ್ಲ. ನಾವು 2024 ರ ಲೋಕಸಭಾ ಚುನಾವಣೆಯಲ್ಲೂ ಗೆಲ್ಲುತ್ತೇವೆ. ಆಗ ಬೆಲೆಗಳನ್ನು ಇಳಿಸುತ್ತೇವೆ ಎಂದರು. ಆಗ ನೆರೆದಿದ್ದ ಜನ, ನೀವು ಪ್ರಧಾನಿ ಆಗಬೇಕು ಎಂದು ಮುಗಿಲು ಮುಟ್ಟುವಂತೆ ಕೂಗಿದರು.
ವರುಣ ತಾಲೂಕು ಕೇಂದ್ರವಾಗಬೇಕೆಂದು ಜನರು ಕೇಳಿಲ್ಲ
ಮೈಸೂರು: ಮೈಸೂರು ಜಿಲ್ಲೆಯಲ್ಲಿ ವರುಣ ತಾಲೂಕು ಕೇಂದ್ರವಾಗಬೇಕೆಂದು ಜನರು ಕೇಳಿಲ್ಲ ಎಂದು ವರುಣ ವಿಧಾನಸಭಾ ಕ್ಷೇತ್ರದ ಶಾಸಕರೂ ಆಗಿರುವ ಸಿಎಂ ಸಿದ್ದರಾಮಯ್ಯ ತಿಳಿಸಿದರು. ಸುತ್ತೂರಿನ ಹೆಲಿಪ್ಯಾಡ್‌ನಲ್ಲಿ ಶನಿವಾರ ಸುದ್ದಿಗಾರರ ಜೊತೆ ಮಾತನಾಡಿದ ಅವರು, ಬಸವರಾಜ ಬೊಮ್ಮಾಯಿ ನಾವು ಅಧಿಕಾರಕ್ಕೆ ಬಂದರೆ ವರುಣ ಕ್ಷೇತ್ರವನ್ನು ತಾಲೂಕು ಮಾಡುತ್ತೇವೆ ಎಂದು ಹೇಳಿದ್ದರು. ಇದನ್ನು ಜನ ಕೇಳಿಲ್ಲ. ವರುಣ ಕ್ಷೇತ್ರದಲ್ಲಿ ನಾನು ಮೂರು ದಿನ ಪ್ರಚಾರ ಮಾಡಿದ್ದೇನೆ. ಎಲ್ಲಿಯೂ ಜನ ಕೇಳಿಲ್ಲ. ಬೊಮ್ಮಾಯಿ ಕೇಳಿದ ತಕ್ಷಣ ಇದನ್ನು ಮಾಡುವುದಿಲ್ಲ. ವರುಣ ಕ್ಷೇತ್ರದ ಜನರು ಕೇಳಿದರೆ ಮಾಡುತ್ತೇವೆ ಎಂದರು.
ಬಿಜೆಪಿ ಅಧಿಕಾರದಲ್ಲಿದ್ಧಾಗ ತಮಗೆ ಬೇಕಾದವರಿಗೆ ಭೂಮಿ ನೀಡಿರುವ ಬಗ್ಗೆ ಕಂದಾಯ ಸಚಿವ ಕೃಷ್ಣ ಬೈರೇಗೌಡರಿಗೆ ಮಾಹಿತಿ ಸಂಗ್ರಹಿಸಲು ತಿಳಿಸಲಾಗಿದೆ ಎಂದು ಸುದ್ದಿಗಾರರ ಪ್ರಶ್ನೆಯೊಂದಕ್ಕೆ ಮುಖ್ಯಮಂತ್ರಿಗಳು ಉತ್ತರಿಸಿದರು.
200 ಯೂನಿಟ್ ವಿದ್ಯುತ್‌ನ್ನು ಎಲ್ಲರೂ ತೆಗೆದುಕೊಳ್ಳಲೇಬೇಕು ಎಂದು ಕಡ್ಡಾಯವಿಲ್ಲ. ತೆಗೆದುಕೊಳ್ಳುವವರು ಪಡೆಯಬಹುದು. ಬೇಡ ಎನ್ನುವವರು ಬಿಲ್ ಹಣ ಕಟ್ಟಬಹುದು. ಒಂದು ವರ್ಷದಲ್ಲಿ ಬಳಕೆ ಮಾಡುವ ಯೂನಿಟ್‌ಗಳ ಸರಾಸರಿ ಆಧರಿಸಿ ಶೇ.10 ವಿದ್ಯುತ್ ಉಚಿತವಾಗಿ ನೀಡಲಾಗುವುದು. ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ನ್ಯಾಯಯುತವಾಗಿ ಬರಬೇಕಿರುವ ಎಲ್ಲವನ್ನೂ ಒತ್ತಾಯಪೂರ್ವಕವಾಗಿ ಪಡೆದುಕೊಳ್ಳುವ ಪ್ರಯತ್ನ ಮಾಡಲಾಗುವುದು. -ಸಿದ್ದರಾಮಯ್ಯ, ಮುಖ್ಯಮಂತ್ರಿ
ಜೀರೋ ಟ್ರಾಫಿಕ್ ಕೊಟ್ಟಿದ್ದಕ್ಕೆ ಸಿದ್ದು ಗರಂ
ಮೈಸೂರು: ಮುಖ್ಯಮಂತ್ರಿಯಾಗಿರುವ ನನಗೆ ಜೀರೋ ಟ್ರಾಫಿಕ್ ಬೇಡ ಎಂದಿದ್ದೆ. ಆದರೂ, ಜೀರೋ ಟ್ರಾಫಿಕ್ ಏಕೆ ಕೊಟ್ಟಿದ್ದೀರಿ? ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಶನಿವಾರ ಮೈಸೂರು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರ ವಿರುದ್ಧ ಗರಂ ಆದರು. ಮುಖ್ಯಮಂತ್ರಿಯಾದ ನಂತರ ಮೈಸೂರಿಗೆ ಆಗಮಿಸಿದ ಸಿದ್ದರಾಮಯ್ಯ ಅವರಿಗೆ ಶಿಷ್ಟಾಚಾರದಂತೆ ಪೊಲೀಸರು ಜೀರೋ ಟ್ರಾಫಿಕ್ ನೀಡಿದ್ದರು. ಮೈಸೂರಿನ ಮಂಡಕಳ್ಳಿ ವಿಮಾನನಿಲ್ದಾಣದಿಂದ ಜಿಲ್ಲಾ ಪಂಚಾಯಿತಿ ಆವರಣದವರೆಗೂ ಜೀರೋ ಟ್ರಾಫಿಕ್ ನೀಡಲಾಗಿತ್ತು. ಇದರಿಂದ ಸಿದ್ದರಾಮಯ್ಯ ಗರಂ ಆದರು. ನಾನು ಜೀರೋ ಟ್ರಾಫಿಕ್ ಬೇಡ ಎಂದಿದ್ದೆ. ಆದರೂ, ಏಕೆ ಮಾಡಿದ್ದೀರಿ? ಎಂದು ನಗರ ಪೊಲೀಸ್ ಆಯುಕ್ತ ರಮೇಶ್ ಬಾನೋತ್ ಅವರನ್ನು ಸಿದ್ದರಾಮಯ್ಯ ಪ್ರಶ್ನಿಸಿದರು. ಆಗ ಪೊಲೀಸ್ ಆಯುಕ್ತರು ಮೌನಕ್ಕೆ ಶರಣಾದರು. ಜೀರೋ ಟ್ರಾಫಿಕ್ ಮಾಡಬೇಡಿ ಎಂದು ಸಿದ್ದರಾಮಯ್ಯ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
HIGH COURT: ಬಿಎಸ್‌ವೈ ವಿರುದ್ಧದ ಪೋಕ್ಸೋ ಪ್ರಕರಣ: ವಿಚಾರಣೆ ಮುಂದಕ್ಕೆ
BSY ಸಿಎಂ ಸ್ಥಾನ ಕಳೆದುಕೊಳ್ಳಲು ರೇವಣ್ಣ ಕಾರಣ: ಜಿಟಿಡಿ ಆರೋಪ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
R. B. Timmapur: ಮದ್ಯದಂಗಡಿ ಮಂಜೂರಿಗೆ ಲಂಚ ಕೇಳಿದ್ದ ಇಬ್ಬರ ಅಮಾನತು
8 ಮಸೂದೆ ಮಂಡನೆಗೆ ಸಂಪುಟ ಒಪ್ಪಿಗೆ; ವಿಧಾನಮಂಡಲದ ಅಧಿವೇಶನದಲ್ಲಿ ಮಂಡನೆ
Elephant: ಬಂಡೀಪುರದಲ್ಲಿ ಆನೆ ಮೃತದೇಹ ಪತ್ತೆ: ಆಂಥ್ರಾಕ್ಸ್ ಸೋಂಕು ಶಂಕೆ
Ballari District Hospital: ಬಾಣಂತಿಯರ ಸಾವಿಗೆ ವೈದ್ಯರಲ್ಲ, ದ್ರಾವಣ ಕಾರಣ’
ನಕ್ಸಲರ ಪತ್ತೆಗೆ ಶಿವಮೊಗ್ಗ ಪೊಲೀಸರು ಸಜ್ಜು : ಎಎನ್‌ಎಫ್ ಮಾದರಿಯಲ್ಲಿ ವಿಶೇಷ ಪೊಲೀಸ್ ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.