![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
![Arebashe-Academy](https://www.udayavani.com/wp-content/uploads/2025/02/Arebashe-Academy-415x249.jpg)
Team Udayavani, Jun 11, 2023, 5:25 PM IST
ದೆಹಲಿ ನಿರ್ಭಯ ಹತ್ಯೆ, ಹೈದರಾಬಾದ್ ರೇಪ್ ಆ್ಯಂಡ್ ಮರ್ಡರ್ ಮತ್ತು ಇತ್ತೀಚೆಗೆ ದೆಹಲಿಯಲ್ಲಿ ನಡೆದ ದೇಹವನ್ನು ತುಂಡು ತುಂಡಾಗಿ ಕತ್ತರಿಸಿ ಫ್ರಿಡ್ಜ್ನಲ್ಲಿಟ್ಟಿದ ಘಟನೆ ಅನೇಕ ನೈಜ ಘಟನೆಗಳ ಬಗ್ಗೆ ಕೇಳಿರುತ್ತೀರಿ. ಈಗ ಅಂಥದ್ದೇ ವಿಷಯವನ್ನು ಇಟ್ಟುಕೊಂಡು ಇಲ್ಲೊಂದು ತಂಡ “ಹತ್ಯ’ ಎಂಬ ಹೆಸರಿನಲ್ಲಿ ಸಿನಿಮಾವೊಂದನ್ನು ತೆರೆಗೆ ತರಲು ಹೊರಟಿದೆ.
“ಸಾಗರಂ ವರ್ಲ್ಡ್ ಸಿನಿಮಾ’ ಬ್ಯಾನರಿನಲ್ಲಿ ರಾಮಲಿಂಗಂ, ಶ್ಯಾಮ್ ಹಾಗೂ ಗಂಗಾಧರ್ ಜಂಟಿಯಾಗಿ ನಿರ್ಮಿಸಿರುವ ಈ ಸಿನಿಮಾಕ್ಕೆ ಕಥೆ ಹಾಗೂ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ಗಂಗಾಧರ್ (ಗಂಗು). ವರುಣ್. ಜಿ ಮೊದಲ ಬಾರಿಗೆ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಈಗಾಗಲೇ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿರುವ ಚಿತ್ರತಂಡ ಇತ್ತೀಚೆಗೆ “ಹತ್ಯ’ ಸಿನಿಮಾದ ಟೀಸರ್ ಅನ್ನು ಬಿಡುಗಡೆ ಮಾಡಿದೆ.
ಇದೇ ವೇಳೆ ಮಾತನಾಡಿದ ನಿರ್ಮಾಪಕ ಗಂಗಾಧರ್, “ಈ ಚಿತ್ರದ ನಾಯಕಿ ಮಾಡಲ್. ತನ್ನ ಸ್ನೇಹಿತರಿಂದಲೇ ಅತ್ಯಾಚಾರಕ್ಕೆ ಒಳಗಾಗುತ್ತಾಳೆ. ಆ ನೋವನ್ನು ಯಾರ ಬಳಿ ಹೇಳಿಕೊಳ್ಳಲಾಗದೆ ಮನಸ್ಸಿನಲ್ಲೇ ನೋವು ಅನುಭವಿಸುತ್ತಾಳೆ. ಈ ಘಟನೆಯಿಂದ ಆಕೆಯ ಮನಸ್ಥಿತಿ ಬದಲಾಗುತ್ತದೆ. ಆನಂತರ ಸೇಡು ತೀರಿಸಿಕೊಳ್ಳಲು ಮುಂದಾಗುತ್ತಾಳೆ ಇದೇ ಚಿತ್ರದ ಕಥಾಹಂದರ. ಇದೊಂದು ಮಹಿಳಾ ಪ್ರಧಾನ ಚಿತ್ರ’ ಎಂದು ಕಥಾಹಂದರದ ಬಗ್ಗೆ ವಿವರಣೆ ನೀಡಿದರು.
“ಹತ್ಯ’ ಸಿನಿಮಾಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಸಂಜೀವ್ ರೆಡ್ಡಿ ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಅಲೆನ್ ಕ್ರಿಸ್ಟ ಸಂಗೀತ ಸಂಯೋಜಿಸಿದ್ದಾರೆ. ಮಾಸ್ ಮಾದ ಸಾಹಸ ನಿರ್ದೇಶನ ಚಿತ್ರಕ್ಕಿದೆ.
ಚಿತ್ರದಲ್ಲಿ ನಟಿಸಿರುವ ವಿಕಾಸ್ ಗೌಡ, ಸಂತೋಷ್ ಮೇದಪ್ಪ, ನಾಯಕಿ ಕೊಮಿಕಾ ಅಂಚಲ್, ಸೋಮನ್ ಸೇರಿದಂತೆ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರು ಪತ್ರಿಕಾಗೋಷ್ಠಿಯಲ್ಲಿ ಹಾಜರಿದ್ದು ಸಿನಿಮಾದ ಬಗ್ಗೆ ಮಾತನಾಡಿದರು.
ಅಂದಹಾಗೆ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಈ ಚಿತ್ರ ನಿರ್ಮಾಣವಾಗಿದ್ದು, ಶೀಘ್ರದಲ್ಲಿಯೇ ಸಿನಿಮಾವನ್ನು ಪ್ರೇಕ್ಷಕರ ಮುಂದೆ ತರುವ ಯೋಚನೆಯಲ್ಲಿದೆ ಚಿತ್ರತಂಡ.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Madikeri: ಆರು ಮಂದಿಗೆ ಅರೆಭಾಷೆ ಅಕಾಡೆಮಿ ಗೌರವ ಪ್ರಶಸ್ತಿ ಪ್ರಕಟ; ಫೆ.28ಕ್ಕೆ ಪ್ರದಾನ
Manipal: ಕಡೇ ದಿನವೂ ಉತ್ತಮ ಸ್ಪಂದನೆ; ಹಾಡು, ನೃತ್ಯದೊಂದಿಗೆ ʼನಮ್ಮ ಸಂತೆʼಗೆ ತೆರೆ
Kambala: ದಾಖಲೆ ಬರೆದ ವಾಮಂಜೂರು ತಿರುವೈಲುಗುತ್ತು ಕಂಬಳ
Sulya: ಪಯಸ್ವಿನಿ ನದಿಯಲ್ಲಿ ಯುವಕನ ಶವ ಪತ್ತೆ
Davanagere: ಪೂಜೆಯಿಂದ ಕಷ್ಟ ಪರಿಹರಿಸುವ ನೆಪದಲ್ಲಿ ಮನೆಯಿಂದ ಕಳವು: ಇಬ್ಬರ ಬಂಧನ
You seem to have an Ad Blocker on.
To continue reading, please turn it off or whitelist Udayavani.