ಹಣ ವರ್ಗಾವಣೆಗೆ ಮಾತೃಭಾಷೆ?: NPCI, AI4Bharat ನಿಂದ ಶೀಘ್ರ ಹೊಸ ವ್ಯವಸ್ಥೆ
Team Udayavani, Jun 13, 2023, 7:48 AM IST
ನವದೆಹಲಿ: ಸ್ಮಾರ್ಟ್‌ಫೋನ್ ಮತ್ತು ಮೊಬೈಲಲ್ಲೇ ಇಂಟರ್‌ನೆಟ್‌ನಿಂದಾಗಿ ಹಣ ವರ್ಗಾವಣೆ ಇತ್ತೀಚಿನ ವರ್ಷಗಳಲ್ಲು ಸುಲಭವಾಗಿದೆ. ಆ ವ್ಯವಸ್ಥೆ ನಮ್ಮ ಮಾತೃಭಾಷೆಯಲ್ಲೇ ಲಭ್ಯವಾದರೆ ಹೇಗೆ? ಈ ನಿಟ್ಟಿನಲ್ಲಿ ಹೊಸ ತಂತ್ರಜ್ಞಾನವನ್ನು ಎಐ4ಭಾರತ್ ಮತ್ತು ನ್ಯಾಷನಲ್ ಪೇಮೆಂಟ್ಸ್ ಕಾರ್ಪೊರೇಶನ್ ಆಫ್ ಇಂಡಿಯಾ(ಎನ್‌ಪಿಸಿಐ) ಅಭಿವೃದ್ಧಿಪಡಿಸುತ್ತಿದೆ. ಒಂದು ವೇಳೆ, ಈ ಸೌಲಭ್ಯ ಜಾರಿಗೆ ಬಂದರೆ ದೇಶದ ಅತ್ಯಂತ ಸಾಮಾನ್ಯ ವ್ಯಕ್ತಿಗೂ ಹಣ ವರ್ಗಾವಣೆ ವ್ಯವಸ್ಥೆ ಸುಲಭವಾಗಲಿದೆ ಮತ್ತು ಈಗಿನ ಕೆಲವು ತಾಂತ್ರಿಕ ಕಸರತ್ತುಗಳಿಗೆ ವಿದಾಯ ಸಿಗಲಿದೆ.
ಯುನಿಫೈಡ್ ಪೇಮೆಂಟ್ಸ್ ಕಾರ್ಪೊರೇಷನ್(ಯುಪಿಐ) ಸೇರಿದಂತೆ ವಿವಿಧ ಪಾವತಿ ಗೇಟ್‌ವೇಗಳನ್ನು ಬಳಸುವ ಸ್ಮಾರ್ಟ್ ಫೋನ್ ಬಳಕೆದಾರರಿಗೆ ಇದರಿಂದ ಉಪಯೋಗವಾಗಲಿದೆ. ಭಾರತೀಯ ಎಲ್ಲಾ ಪ್ರಮುಖ ಭಾಷೆಗಳನ್ನು ಗುರುತಿಸುವ ನಿಟ್ಟಿನಲ್ಲಿ ಐವಿಆರ್‌ಎಸ್ ಅನ್ನು ಚೆನ್ನೈನಲ್ಲಿರುವ ಐಐಟಿ ಮದ್ರಾಸ್‌ನ ಲ್ಯಾಂಗ್ವೇಜ್ ಆರ್ಟಿಫಿಶಿಯಲ್ ಇಂಟಲಿಜೆನ್ಸ್ ಸೆಂಟರ್ (ಭಾಷೆಗೆ ಸಂಬಂಧಿಸಿದ ಕೃತಕ ಬುದ್ಧಿಮತ್ತೆ ಕೇಂದ್ರ)ನಲ್ಲಿ ಎನ್‌ಪಿಸಿಐ ಸಹಯೋಗದಲ್ಲಿ ಎಐ4ಭಾರತ್ ಅಭಿವೃದ್ಧಿಪಡಿಸುತ್ತಿದೆ.
ಪ್ರಸ್ತುತ ಸ್ಮಾರ್ಟ್ ಫೋನ್‌ನ ಹೆಚ್ಚಿನ ಬಳಕೆದಾರರು ಕ್ಯೂಆರ್ ಕೋಡ್ ಮೂಲಕ ಹಣ ವರ್ಗಾವಣೆ ಮಾಡುತ್ತಿದ್ದಾರೆ.
ಆದರೆ ಮುಂದಿನ ದಿನಗಳಲ್ಲಿ ಐವಿಆರ್‌ಎಸ್ ತಂತ್ರಜ್ಞಾನ ಸಪೋರ್ಟ್ ಮಾಡುವ ಸ್ಮಾರ್ಟ್ ಫೋನ್‌ಗಳಲ್ಲಿ ಮಾತ್ರ ಮಾತೃಭಾಷೆಯಲ್ಲಿ ಸೂಚನೆ ನೀಡುವ ಮೂಲಕ ಹಣ ವರ್ಗಾವಣೆ ಮಾಡಬಹುದಾಗಿದೆ.
ಇದರ ಪ್ರಾಯೋಗಿಕ ಪರೀಕ್ಷೆಯನ್ನು ಭಾರತೀಯ ರಿಸರ್ವ್ ಬ್ಯಾಂಕ್(ಆರ್‌ಬಿಐ) ಮೇಲ್ವಿಚಾರಣೆಯಲ್ಲಿ ನಡೆಸಲಾಗುತ್ತದೆ ಎಂದು “ದ ಇಕನಾಮಿಕ್ ಟೈಮ್ಸ್” ವರದಿ ಮಾಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Govt Employees: 8ನೇ ವೇತನ ಆಯೋಗ ಶಿಫಾರಸು ಜಾರಿಯಾದರೆ ಕನಿಷ್ಠ ವೇತನ 51000 ರೂ.!
Winter Session: ಸಂಸತ್ ಅಧಿವೇಶನ ನಾಡಿದ್ದಿಂದ:”ವಕ್ಫ್’ ವಿಧೇಯಕ ಮಂಡನೆ?
Election Results: ಝಾರ್ಖಂಡ್, ಮಹಾರಾಷ್ಟ್ರದಲ್ಲಿ ಪಟ್ಟ ಯಾರಿಗೆ?
Adani ಗ್ರೂಪ್‌ಗೆ ಸಾಲ: ಜಾಗತಿಕ ಬ್ಯಾಂಕ್‌ಗಳಿಂದ ತಾತ್ಕಾಲಿಕ ಬ್ರೇಕ್?
India: ಕೃತಕ ಬುದ್ಧಿಮತ್ತೆ ತಜ್ಞರಿರುವ 2ನೇ ಅಗ್ರ ರಾಷ್ಟ್ರ ಭಾರತ!
MUST WATCH
ಹೊಸ ಸೇರ್ಪಡೆ
BJP Internal Politics: ಬಿಜೆಪಿಯ ಬೇಗುದಿ ಇತ್ಯರ್ಥಕ್ಕೆ ಡಿಸೆಂಬರ್‌ನಲ್ಲಿ ಮುಹೂರ್ತ?
Naxal Vikram Gowda: ನೆಟ್ಟಣದಿಂದ ಮುರ್ಡೇಶ್ವರಕ್ಕೆ ರೈಲಿನಲ್ಲಿ ಪ್ರಯಾಣಿಸಿದ್ದ ನಕ್ಸಲರು!
Vikram Gowda Encounter: ಭೀತಿಗ್ರಸ್ತ ಪೀತಬೈಲು ಪರಿಸರದಲ್ಲಿ ನೀರವ ಮೌನ
Financial Burden: ಶಾಲಾ ಶಿಕ್ಷಕರಿಗೆ ಮೊಟ್ಟೆ ತಲೆನೋವು!
Naxal Activity: ಮಲೆನಾಡಿನವರೊಂದಿಗೆ ಆತ್ಮೀಯವಾಗಿ ಬೆರೆಯುತ್ತಿದ್ದ ವಿಕ್ರಂ ಗೌಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.