ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ


Team Udayavani, Jun 13, 2023, 12:16 PM IST

ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ: ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ

ಮೈಸೂರು: ದೇಶದಲ್ಲಿ ಮಾನ್ಸೂನ್ ಬೇಗ ಆರಂಭ ಆಗಬೇಕಿತ್ತು, ತಡವಾಗಿದೆ. ಆದರೂ ರೈತರು ಬಿತ್ತನೆ ಮಾಡಲು ಎಲ್ಲಾ ತಯಾರಿ ಮಾಡಿಕೊಂಡಿದ್ದು, ದೇಶದಲ್ಲಿ ಬಿತ್ತನೆ ಬೀಜ, ರಸಗೊಬ್ಬರಕ್ಕೆ ಯಾವುದೇ ಕೊರತೆ ಇಲ್ಲ ಎಂದು ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ ತಿಳಿಸಿದರು.

ಮಂಗಳವಾರ ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮಾನ್ಸೂನ್ ತಡವಾಗಿ ಆರಂಭವಾದರೂ ಬಿತ್ತನೆ ಸಿದ್ಧತೆ ಮಾಡಿಕೊಳ್ಳಲಾಗಿದೆ. ರಬಿ, ಖಾರಿಫ್ ಬೆಳೆಗೆ ಸಂಬಂಧಿಸಿದಂತೆ ಕೇಂದ್ರದ ಕೃಷಿ‌ ಇಲಾಖೆ ಅಧಿಕಾರಿಗಳೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಸಭೆ ಮಾಡಿದೆ. ಯಾವ ರಾಜ್ಯಕ್ಕೆ ಯಾವ ಬಿತ್ತನೆ ಬೀಜ, ರಸಗೊಬ್ಬರ ಬೇಕು ಎಂಬ ಮಾಹಿತಿ ಪಡೆದು ಅದನ್ನು ಪೂರೈಸುವ ಕೆಲಸ ಮಾಡುತ್ತಿದೆ. ಈ ಬಾರಿಯೂ ಮುಂಗಾರಿಗೂ ಮೊದಲು ಎಲ್ಲಾ ರಾಜ್ಯಗಳ ಕೃಷಿ ಇಲಾಖೆಗಳೊಂದಿಗೆ ಸಂಪರ್ಕದಲ್ಲಿದ್ದು, ಸಭೆ ನಡೆಸಿ ಆಯಾ ರಾಜ್ಯಕ್ಕೆ ಬೇಕಾದ ಬಿತ್ತನೆ ಬೀಜ, ರಸಗೊಬ್ಬರ ಪೂರೈಸಲಾಗಿದೆ ಎಂದು ಮಾಹಿತಿ ನೀಡಿದರು.

ಇದನ್ನೂ ಓದಿ:ಬಿಜೆಪಿಯ ಕೆಲ ದೊಡ್ಡ ನಾಯಕರು ಮತ್ತು ಸಿದ್ದರಾಮಯ್ಯ ನಡುವೆ ಒಳ ಒಪ್ಪಂದ: ಪ್ರತಾಪ್ ಸಿಂಹ ಬಾಂಬ್

ಶಕ್ತಿ ಯೋಜನೆ ಟೀಕಿಸುವವರು ಮನುವಾದಿಗಳು ಎಂಬ ಕಾಂಗ್ರೆಸ್ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿ, ಬಿಟ್ಟಿ ಯೋಜನೆಗಳು 13 ಬಾರಿ ಬಜೆಟ್ ಮಂಡಿಸಿದ ಸಿದ್ದರಾಮಯ್ಯ ಅವರ ಘೋಷಣೆಗಳು. ಜವಾಬ್ದಾರಿಯುತವಾದ ರಾಜಕೀಯ ಪಕ್ಷ ರಾಜ್ಯದ ಆರ್ಥಿಕ ಸ್ಥಿತಿ ಹೇಗಿದೆ, ಎಷ್ಟು ಸಾಲದಲ್ಲಿದೆ, ಎಷ್ಟು ಬಡ್ಡಿ ಕಟ್ಟಬೇಕು, ಹಣಕಾಸಿನ ಸ್ಥಿತಿ ಹೇಗಿದೆ, ಎಷ್ಟು ತೆರಿಗೆ ಸಂಗ್ರಹ ಆಗುತ್ತದೆ, ಎಷ್ಟನ್ನು ಉಚಿತವಾಗಿ ಕೊಡಬಹುದು ಎಂಬ ಆಧಾರದಲ್ಲಿ ಯೋಜನೆಗಳನ್ನು ಘೋಷಣೆ ಮಾಡಬೇಕು. ಆದರೆ ಕಾಂಗ್ರೆಸ್ ಇದ್ಯಾವುದನ್ನೂ ಪರಿಗಣಿಸದೆ ಧೈರ್ಯದಿಂದ ಐದು ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ. ಚುನಾವಣೆಯಲ್ಲಿ ಗೆದ್ದ ಬಳಿಕ ಷರತ್ತುಗಳನ್ನು ವಿಧಿಸುತ್ತಿದೆ ಎಂದು ಕಿಡಿ‌ ಕಾರಿದರು.

ವಿದ್ಯುತ್ ದರ ಏರಿಕೆಯಾಗಿದ್ದು, ಒಂದು ಕೈಯಲ್ಲಿ ಕೊಟ್ಟು ಮತ್ತೊಂದು ಕೈಯಲ್ಲಿ ಕಿತ್ತುಕೊಳ್ಳುವ ಕೆಲಸ ಮಾಡುತ್ತಿದೆ. ಹಣಕಾಸು‌ ಸಚಿವರು, ಮುಖ್ಯಮಂತ್ರಿಗಳೂ ಆದ ಸಿದ್ದರಾಮಯ್ಯ ಅವರು ಹಣವನ್ನು ಎಲ್ಲಿಂದ ಹೊಂದಿಸುತ್ತಾರೆ ಎಂಬುದನ್ನು ರಾಜ್ಯದ ಜನರಿಗೆ ತಿಳಿಸಬೇಕು. ಮಹಿಳೆಯರು ಖುಷಿಯಿಂದಲೇ ಬಸ್ ಗಳಲ್ಲಿ ಓಡಾಡುತ್ತಿದ್ದಾರೆ. ಆದರೆ, ಕೆಎಸ್ಆರ್ಟಿಸಿ ಗೆ ಆಗುತ್ತಿರುವ ನಷ್ಟವನ್ನು ಯಾವ ರೀತಿ ಭರಿಸುತ್ತಾರೆ ಎಂಬುದನ್ನೂ ಸ್ಪಷ್ಟಪಡಿಸಬೇಕು ಎಂದು ಒತ್ತಾಯಿಸಿದರು.

ವಿದ್ಯುತ್ ದರ ಏರಿಕೆಗೆ ಬಿಜಪಿ ಕಾರಣ ಎಂಬ‌ ಕಾಂಗ್ರೆಸ್ ಆರೋಪಕ್ಕೆ ಪ್ರತಿಕ್ರಿಯಿಸಿ, ಕಾಂಗ್ರೆಸ್ ಗ್ಯಾರಂಟಿ ಯೋಜನೆ ಜಾರಿ ಮಾಡುವಾಗಲೇ ಇದೆಲ್ಲದರ ಮಾಹಿತಿ ಅವರಿಗಿತ್ತು. ಚುನಾವಣೆ ಮುಗಿದು ಒಂದು ತಿಂಗಳಾಗಿದೆ. ಚುನಾವಣೆ ಪ್ರಕ್ರಿಯೆ ಮುಗಿದು ಮೂರು ತಿಂಗಳಾಗಿದೆ. ಬೆಲೆ ಏರಿಕೆ ಹಗ್ಗ ತಿಳಿದು ಘೋಷಣೆ ಮಾಡಿದ್ದಾರೆ. ಚುನಾವಣೆ ನಂತರ ಇದೆಲ್ಲವನ್ನು ಬಿಜೆಪಿ ಮೇಲೆ ಹಾಕಿ‌ ಕೈ ತೊಳೆದುಕೊಳ್ಳಬಹುದು ಎಂದುಕೊಂಡಿದ್ದರೆ ಅದಕ್ಕೆ ಜನರೇ ಉತ್ತರ ನೀಡುತ್ತಾರೆ ಎಂದರು.

ಟಾಪ್ ನ್ಯೂಸ್

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ

siddanna-2

MUDA ; ಸಿಎಂ ಸಿದ್ದರಾಮಯ್ಯ ವಿರುದ್ಧ ಪ್ರಕರಣ ದಾಖಲಿಸಿಕೊಂಡ ಇಡಿ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

arre

Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.