‘ಆಡೇ ನಮ್ ಗಾಡ್’ ಅಂತಿದ್ದಾರೆ ನಟರಾಜ್ ಆ್ಯಂಡ್ ಗ್ಯಾಂಗ್!
Team Udayavani, Jun 13, 2023, 4:31 PM IST
“ಪಂಚಮ ವೇದ’, “ಶ್ರೀಗಂಧ’, “ಅರಗಿಣಿ’, “ಅರುಣೋದಯ’, “ರಂಗೋಲಿ’, “ಅಂಡಮಾನ್’, “ಮುಂಜಾನೆ ಮಂಜು’, “ಮುಸುಕು’ ಸಿನಿಮಾಗಳ ಖ್ಯಾತಿಯ ಹಿರಿಯ ನಿರ್ದೇಶಕ ಪಿ. ಹೆಚ್ ವಿಶ್ವನಾಥ್ ಈ ಬಾರಿ ಔಟ್ ಆ್ಯಂಡ್ ಔಟ್ ಕಾಮಿಡಿ ಕಥಾಹಂದರವನ್ನು ಪ್ರೇಕ್ಷಕರ ಮುಂದೆ ತರಲು ತಯಾರಿ ಮಾಡಿಕೊಂಡಿದ್ದಾರೆ. ಅಂದಹಾಗೆ, ಪಿ.ಹೆಚ್ ವಿಶ್ವನಾಥ್ ಆ್ಯಕ್ಷನ್-ಕಟ್ ಹೇಳುತ್ತಿರುವ ಈ ಹೊಸ ಸಿನಿಮಾಕ್ಕೆ “ಆಡೇ ನಮ್ ಗಾಡ್’ ಎಂಬ ಶೀರ್ಷಿಕೆ ಇಡಲಾಗಿದೆ.
“ಬಿ. ಬಿ. ಆರ್ ಫಿಲಂಸ್’ ಹಾಗೂ “ಎವರೆಸ್ಟ್ ಇಂಡಿಯಾ ಎಂಟರ್ ಟೈನರ್’ ಬ್ಯಾನರ್‌ನಡಿ ಪ್ರೊ. ಬಿ. ಬಸವರಾಜ್ ಹಾಗೂ ರೇಣುಕಾ ಬಸವರಾಜ್ ಚೊಚ್ಚಲ ಬಾರಿಗೆ ನಿರ್ಮಿಸುತ್ತಿರುವ “ಆಡೇ ನಮ್ ಗಾಡ್’ ಸಿನಿಮಾದಲ್ಲಿ “ಮ್ಯಾನ್ ಆಫ್ ದಿ ಮ್ಯಾಚ್’, “ರಾಮ ರಾಮ ರೇ’ ಸಿನಿಮಾಗಳ ಖ್ಯಾತಿಯ ನಟರಾಜ್ ಮುಖ್ಯಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.
ಉಳಿದಂತೆ ಮಂಜುನಾಥ್ ಜಂಬೆ, ಅಜಿತ್ ಬೊಪ್ಪನಹಳ್ಳಿ, ಅನೂಪ್ ಶೂನ್ಯ, ಸಾರಿಕ ರಾವ್, ಬಿ. ಸುರೇಶ್ ಮೊದಲಾದವರು ಸಿನಿಮಾದ ಇತರ ಪ್ರಮುಖ ಪಾತ್ರಗಳಲ್ಲಿ ಅಭಿನಯಿಸಿದ್ದಾರೆ.
ಹಳೇ ಮೈಸೂರಿನ ಗ್ರಾಮೀಣ ಹಿನ್ನೆಲೆಯಲ್ಲಿ ಮತ್ತು ಮೂಡನಂಬಿಕೆಯ ಸುತ್ತ “ಆಡೇ ನಮ್ ಗಾಡ್’ ಸಿನಿಮಾದ ಕಥಾಹಂದರ ಸಾಗುತ್ತದೆ. ಚಿತ್ರಕ್ಕೆ ಪಿ.ಕೆ.ಹೆಚ್ ದಾಸ್ ಛಾಯಾಗ್ರಹಣ, ಬಿ. ಎಸ್ ಕೆಂಪರಾಜು ಸಂಕಲನವಿದೆ. ಸಿನಿಮಾದ ಹಾಡುಗಳಿಗೆ ಸ್ವಾಮಿನಾಥನ್ ಸಂಗೀತ ಸಂಯೋಜನೆಯಿದೆ.
ಈಗಾಗಲೇ ಸದ್ದಿಲ್ಲದೆ ಪೋಸ್ಟ್ ಪ್ರೊಡಕ್ಷನ್ ಕೆಲಸಗಳನ್ನು ಪೂರ್ಣಗೊಳಿಸಿ ಸೆನ್ಸಾರ್‌ನಿಂದಲೂ ಬಿಡುಗಡೆಗೆ ಅನುಮತಿ ಪಡೆದುಕೊಂಡಿರುವ “ಆಡೇ ನಮ್ ಗಾಡ್’ ಚಿತ್ರತಂಡ, ಸದ್ಯ ಸಿನಿ ಮಾದ ಟೈಟಲ್ ಬಿಡುಗಡೆ ಮಾಡುವ ಮೂಲಕ ಸಿನಿಮಾದ ಪ್ರಚಾರ ಕಾರ್ಯಗಳಿಗೆ ಚಾಲನೆ ನೀಡಿದೆ. ಎಲ್ಲ ಅಂದುಕೊಂಡಂತೆ ನಡೆದರೆ, ಸೆಪ್ಟೆಂಬರ್ ಅಥವಾ ಅಕ್ಟೋಬರ್ ವೇಳೆಗೆ “ಆಡೇ ನಮ್ ಗಾಡ್’ ಸಿನಿಮಾ ತೆರೆಗೆ ಬರುವ ಸಾಧ್ಯತೆಯಿದೆ ಎನ್ನಲಾಗಿದೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Maharashtra BJP ಗೃಹಲಕ್ಷ್ಮಿ ನಕಲು ಮಾಡಿ ಗೆದ್ದಿದೆ: ಡಿ.ಕೆ.ಶಿವಕುಮಾರ್
New Scheme: ಶೀಘ್ರವೇ ಗೃಹಲಕ್ಷ್ಮೀ ಸಂಘ ಸ್ಥಾಪನೆ: ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್
Ola Scooter; ರಿಪೇರಿಗೆ 90000 ರೂ.ಬಿಲ್: ಸ್ಕೂಟರ್ ಒಡೆದು ಹಾಕಿದ ಗ್ರಾಹಕ
Karkala: ಎಸ್‌ಪಿ ಕಚೇರಿ ಮುತ್ತಿಗೆ ಹೇಳಿಕೆ ಆರೋಪ: ಪ್ರಕರಣ ದಾಖಲು
Hindutva; ಧರ್ಮದ ವಿರುದ್ಧ ಬಂದರೆ ಸುಮ್ಮನಿರೆವು: ಯದುವೀರ ಕೃಷ್ಣದತ್ತ ಒಡೆಯರ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.