Jammu And Kashmir 5.4 ತೀವ್ರತೆಯ ಭೂಕಂಪ, ದೆಹಲಿಯಲ್ಲಿ ಕಂಪನದ ಅನುಭವ
Team Udayavani, Jun 13, 2023, 4:33 PM IST
ನವದೆಹಲಿ: ಜಮ್ಮು ಮತ್ತು ಕಾಶ್ಮೀರದ ದೋಡಾದಲ್ಲಿ ಮಂಗಳವಾರ 1.30ರ ಸುಮಾರಿಗೆ ಭೂಕಂಪ ಸಂಭವಿಸಿದೆ ಎಂದು ಭಾರತದ ಭೂಕಂಪಶಾಸ್ತ್ರದ ರಾಷ್ಟ್ರೀಯ ಕೇಂದ್ರ ತಿಳಿಸಿದೆ.
ಪ್ರಾಥಮಿಕ ವರದಿಗಳ ಪ್ರಕಾರ, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯ ಗಂಡೋ ಭಾಲೆಸ್ಸಾ ಗ್ರಾಮದ ಬಳಿ 5.4 ತೀವ್ರತೆಯ ಭೂಕಂಪ ಸಂಭವಿಸಿದೆ.
ದೆಹಲಿ ಸೇರಿದಂತೆ ಉತ್ತರ ಭಾರತದ ಹಲವೆಡೆ ಭೂಮಿ ಕಂಪಿಸಿದ ಅನುಭವವಾಗಿದೆ. ಜಮ್ಮು ಕಾಶ್ಮೀರ ಹಾಗೂ ಚಂಢೀಗಢದಲ್ಲೂ ಕೂಡ ಭೂಕಂಪ ಸಂಭವಿಸಿದೆ.
ಈ ಭೂಕಂಪದಿಂದ ಯಾವುದೇ ಹಾನಿಯಾಗಿರುವ ಕುರಿತು ವರದಿಯಾಗಿಲ್ಲ.
Earthquake of Magnitude:5.4, Occurred on 13-06-2023, 13:33:42 IST, Lat: 33.15 & Long: 75.82, Depth: 6 Km ,Location: Doda, Jammu and Kashmir, India for more information Download the BhooKamp App https://t.co/OyJTMLYeSm@ndmaindia @Dr_Mishra1966 @Indiametdept @KirenRijiju pic.twitter.com/6Ezq3dbyNE
— National Center for Seismology (@NCS_Earthquake) June 13, 2023
ಭೂಕಂಪನದ ತೀವ್ರತೆ 5.4 ರಷ್ಟಿದ್ದು, ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಭೂಮಿಯ 6 ಕಿಮೀ ಆಳದಲ್ಲಿ ಕೇಂದ್ರ ಬಿಂದು ಪತ್ತೆಯಾಗಿದೆ ಎಂದು ರಾಷ್ಟ್ರೀಯ ಭೂಕಂಪ ಕೇಂದ್ರದ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.