ಕುಕ್ಕರ್ ಸ್ಫೋಟ: ಒಡಿಶಾದಲ್ಲಿ ವ್ಯಕ್ತಿ ಸೆರೆ
Team Udayavani, Jun 14, 2023, 7:19 AM IST
ಭುವನೇಶ್ವರ: ಕಳೆದ ವರ್ಷ ಮಂಗಳೂರಿನಲ್ಲಿ ಆಟೋದಲ್ಲಿ ನಡೆದ ಕುಕ್ಕರ್ ಸ್ಫೋಟಕ್ಕೆ ಸಂಬಂಧಿಸಿದಂತೆ ವ್ಯಕ್ತಿಯೊಬ್ಬನನ್ನು ಒಡಿಶಾ ಪೊಲೀಸರು ಬಂಧಿಸಿದ್ದಾರೆ. ಪಾಕಿಸ್ತಾನದ ಗುಪ್ತಚರ ಸಂಸ್ಥೆಯೊಂದಿಗೆ ನೇರ ಸಂಪರ್ಕದಲ್ಲಿದ್ದ ಪ್ರೀತಮ್ ಕರ್‌ನನ್ನು (31) ಜೈಪುರ ಜಿಲ್ಲೆಯ ಭುರುಂಗ ಹಳ್ಳಿಯಲ್ಲಿ ಬಂಧಿಸಲಾಗಿದೆ. ಆತನನ್ನು ನ್ಯಾಯಾಲಯದೆದುರು ಹಾಜರುಪಡಿಸಲಾಗಿದೆ. ಪ್ರಕರಣದಲ್ಲಿ ಸದ್ಯ ಬಂಧಿತನಾಗಿರುವ ಶಾರಿಕ್‌ಗೆ ಸಿಮ್ ಕಾರ್ಡ್, ಮೊಬೈಲ್ ನೀಡಿದ ಆರೋಪ ಆತನ ಮೇಲಿದೆ. ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನಕ್ಕೆ ಒಳಗಾಗಿರುವ 5ನೇ ವ್ಯಕ್ತಿ ಈತ.
2017ರಿಂದಲೇ ಅಕ್ರಮ ಚಟುವಟಿಕೆಯನ್ನು ಪ್ರೀತಮ್ ಮತ್ತವನ ಸಹಚರರು ಮಾಡಿಕೊಂಡು ಬರುತ್ತಿದ್ದಾರೆ. ಕದ್ದ ಮಾಹಿತಿಗಳನ್ನು ಬಳಸಿ ಸಿದ್ಧಪಡಿಸಿದ ಬ್ಯಾಂಕ್ ಖಾತೆಗಳನ್ನು ದುರ್ಬಳಕೆ ಮಾಡಿಕೊಳ್ಳಲು ಅವಕಾಶ ನೀಡುವುದು, ಒಟಿಪಿಗಳನ್ನು ಹಂಚಿಕೊಳ್ಳುವುದು, ಸೈಬರ್ ಅಪರಾಧಿಗಳೊಂದಿಗೆ ಡಿಜಿಟಲ್ ವ್ಯಾಲೆಟ್‌ಗಳನ್ನು ಹಂಚಿಕೊಳ್ಳುವುದನ್ನು ಮಾಡುತ್ತಿದ್ದಾರೆ. ಕನಿಷ್ಠ ಪಕ್ಷ ಎರಡು ಬಾರಿ ಐಎಸ್‌ಐ ಏಜೆಂಟ್‌ಗಳನ್ನು ನೇರವಾಗಿ ಭೇಟಿ ಮಾಡಿ ಇತ್ತೀಚೆಗೆ 1.5 ಲಕ್ಷ ರೂ.ಗಳನ್ನು ಪಡೆದುಕೊಂಡಿದ್ದಾರೆ ಎಂದು ಒಡಿಶಾದ ವಿಶೇಷ ಕಾರ್ಯಪಡೆ ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Fraud Case: ಗೂಗಲ್ ಪೇ ಮಾಡಿದೆ ಎಂದು ಹೇಳಿ ಮೋಸ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.