ಪುಣಚ: ಆಟೋರಿಕ್ಷಾ ಪಲ್ಟಿ: ಚಾಲಕ ಸಾವು
Team Udayavani, Jun 14, 2023, 5:28 AM IST
ವಿಟ್ಲ: ಚಲಿಸುತ್ತಿದ್ದ ಆಟೋರಿಕ್ಷಾಕ್ಕೆ ಅಡ್ಡ ಬಂದ ದನವನ್ನು ತಪ್ಪಿಸುವ ವೇಳೆ ನಿಯಂತ್ರಣ ತಪ್ಪಿ ಆಟೋರಿಕ್ಷಾದಿಂದ ರಸ್ತೆಗೆ ಎಸೆಯಲ್ಪಟ್ಟ ಚಾಲಕ ಗಂಭೀರವಾಗಿ ಗಾಯಗೊಂಡು ಮೃತಪಟ್ಟ ಘಟನೆ ಪುಣಚದಲ್ಲಿ ಮಂಗಳವಾರ ನಡೆದಿದೆ. ಜಗನ್ನಾಥ ಪೈಸಾರಿ (57) ಮೃತಪಟ್ಟ ಚಾಲಕ.
ಮಂಗಳವಾರ ಮಧ್ಯಾಹ್ನ ಊಟ ಮುಗಿಸಿದ ಬಳಿಕ ಪುಣಚದ ಆಟೋರಿಕ್ಷಾ ಪಾರ್ಕಿಂಗ್ ಸ್ಥಳಕ್ಕೆ ಬರುತ್ತಿದ್ದ ಸಂದರ್ಭದಲ್ಲಿ ಮಣಿಲ ಎಂಬಲ್ಲಿ ದುರ್ಘಟನೆ ಸಂಭವಿಸಿದ್ದು, ಆಟೋರಿಕ್ಷಾ ರಸ್ತೆಗೆ ಪಲ್ಟಿಯಾಗಿ ಬಿದ್ದ ಕಾರಣ, ತಲೆಗೆ ಗಂಭೀರ ಗಾಯವಾಗಿದ್ದು, ಪುತ್ತೂರು ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಆ ವೇಳೆಗಾಗಲೇ ಅವರು ಮೃತಪಟ್ಟಿದ್ದರೆನ್ನಲಾಗಿದೆ.
ತುಳು ನಾಟಕ ರಂಗದಲ್ಲಿ ಹಾಸ್ಯ ಅಭಿನಯದ ಮೂಲಕ ಮಿಂಚಿದ್ದ ಅವರು, ಕಳೆದ ಮೂವತ್ತು ವರ್ಷಗಳಿಂದ ಆಟೋರಿಕ್ಷಾ ಚಾಲಕರಾಗಿ ‘ರಿಕ್ಷಾ ಜಗ್ಗಣ್ಣ’ ಎಂದೇ ಗುರುತಿಸಲ್ಪಟ್ಟಿದ್ದರು. ಅವರು ಪತ್ನಿ, ಪುತ್ರಿ, ಪುತ್ರನನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Kavoor: ಎಡನೀರು ಮಠದ ಶ್ರೀಗಳ ಮೇಲೆ ಹಲ್ಲೆ… ಶಾಸಕ ಡಾ.ಭರತ್ ಶೆಟ್ಟಿ ವೈ. ಖಂಡನೆ
ಅಕ್ರಮ ಮರಳುಗಾರಿಕೆ ಕುರಿತು ಮಾಹಿತಿ ನೀಡಿದ ಆರೋಪ… ವ್ಯಕ್ತಿಗೆ ಹಲ್ಲೆ ನಡೆಸಿ ಇರಿಯಲು ಯತ್ನ
ಮಂಗಳೂರಿಗೆ ವಾಟರ್ ವೆುಟ್ರೋ; ಎಂಡಬ್ಲ್ಯುಎಂಪಿ ನಿರ್ಮಾಣಕ್ಕೆ ಮುಂದಾಗಿರುವ ಕೆಎಂಬಿ
Puttur: ಮಾದಕ ವಸ್ತು ಎಂಡಿಎಂಎ ಸಾಗಾಟ ಪ್ರಕರಣ; ಆರೋಪಿಗೆ ಜಾಮೀನು
MUST WATCH
ಹೊಸ ಸೇರ್ಪಡೆ
MUDA Case: ಸಿಬಿಐ ತನಿಖೆ ಕೋರಿದ್ದ ಅರ್ಜಿ ವಿಚಾರಣೆ ನ.26ಕ್ಕೆ ಮುಂದೂಡಿದ ಹೈಕೋರ್ಟ್
Belagavi: ತಹಶೀಲ್ದಾರ್ ಕೊಠಡಿಯಲ್ಲೇ ಸಿಬ್ಬಂದಿ ನೇಣಿಗೆ ಶರಣು, ಸ್ಥಳದಲ್ಲಿ ಡೆತ್ ನೋಟ್ ಪತ್ತೆ
MUDA Case: ಲೋಕಾಯುಕ್ತ ನೋಟಿಸ್ ಕುರಿತು ಮಾಧ್ಯಮಗಳಿಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಸಿಎಂ
Mangaluru: ಪರಿಶಿಷ್ಟ ಜಾತಿ ಪಟ್ಟಿಗೆ ಮರುಸೇರ್ಪಡೆ ಆಗ್ರಹಿಸಿ ಕುಡುಬಿ ಸಮಾಜದವರಿಂದ ಜಾಥಾ
Canada: ಹಿಂದೂ ದೇಗುಲದ ಮೇಲೆ ದಾಳಿ-ಖಲಿಸ್ತಾನಿಗಳ ವಿರುದ್ಧ ಸಾವಿರಾರು ಭಾರತೀಯರ ಪ್ರತಿಭಟನೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.