ಕಳವುಗೈದ ಆರೋಪಿಗೆ ಶಿಕ್ಷೆ
Team Udayavani, Jun 14, 2023, 5:32 AM IST
ಉಡುಪಿ: ಚಿನ್ನಾಭರಣಗಳನ್ನು ಕಳವುಗೈದ ಆರೋಪಿಗೆ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯವು ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದೆ.
2022ರ ಜ. 21ರಂದು 1 ಗಂಟೆಯ ಸುಮಾರಿಗೆ ಸಂತೋಷ ಪೂಜಾರಿ ಅಂಬಾಗಿಲು ಕಕ್ಕುಂಜೆಯ ಪ್ರಮಿಳಾ ಬಂಗೇರ ಅವರ ಮನೆಯ ಒಳಗೆ ಪ್ರವೇಶಿಸಿ ಚಿನ್ನಾಭರಣಗಳನ್ನು ಕಳವು ಮಾಡಿರುವ ಹಿನ್ನೆಲೆಯಲ್ಲಿ ನಗರ ಠಾಣೆಯ ಪೊಲೀಸ್ ನಿರೀಕ್ಷಕರು ಪ್ರಕರಣ ದಾಖಲಿಸಿಕೊಂಡು, ಆರೋಪಿಯ ವಿರುದ್ಧ ನ್ಯಾಯಾಲಯಕ್ಕೆ ದೋಷಾರೋಪಣೆ ಪತ್ರ ಸಲ್ಲಿಸಿದ್ದರು.
ಪ್ರಕರಣದ ವಿಚಾರಣೆ ನಡೆದು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ನಗರದ ಪ್ರಧಾನ ಸಿ.ಜೆ. ಮತ್ತು ಸಿ.ಜೆ.ಎಂ. ನ್ಯಾಯಾಲಯದ ನ್ಯಾಯಾಧೀಶ ವಿಘ್ನೇಶ್ ಕುಮಾರ್ ಅವರು ಆರೋಪಿ ಸಂತೋಷ ಪೂಜಾರಿಗೆ ಒಟ್ಟು 4 ವರ್ಷ ಕಠಿನ ಸಜೆ ಮತ್ತು 2,000 ರೂ. ದಂಡ ವಿಧಿಸಿದ್ದಾರೆ. ದಂಡ ಪಾವತಿಸಲು ತಪ್ಪಿದಲ್ಲಿ 2 ತಿಂಗಳ ಸಾದಾ ಶಿಕ್ಷೆ ವಿಧಿಸಿ, ತೀರ್ಪು ನೀಡಿದ್ದಾರೆ.
ಸರಕಾರದ ಪರವಾಗಿ ಹಿರಿಯ ಸಹಾಯಕ ಸರಕಾರಿ ಅಭಿಯೋಜಕಿ ಜಯಂತಿ ಕೆ. ವಾದ ಮಂಡಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.