Davangere ಅನೈತಿಕ ಸಂಬಂಧಕ್ಕೆ ಅಡ್ಡಿ: ಪ್ರಿಯಕರನ ಜತೆಗೂಡಿ ಪತಿಯ ಕೊಲೆಗೈದ ಪತ್ನಿ
Team Udayavani, Jun 14, 2023, 8:18 AM IST
ದಾವಣಗೆರೆ: ಅನೈತಿಕ ಸಂಬಂಧಕ್ಕೆ ಅಡ್ಡಿ ಆಗುತ್ತಿದ್ದಾನೆ ಎಂದು ಪ್ರಿಯಕರನೊಡಗೂಡಿ ಗಂಡನನ್ನೇ ಕೊಲೆ ಮಾಡಿದ್ದ ಪತ್ನಿ ಮತ್ತು ಆಕೆಯ ಪ್ರಿಯಕರನನ್ನು ಹದಡಿ ಪೊಲೀಸರು ಬಂಧಿಸಿದ್ದಾರೆ.
ದಾವಣಗೆರೆ ತಾಲೂಕಿನ ದುರ್ಗಾಂಬಿಕಾ ಕ್ಯಾಂಪ್ ನಿವಾಸಿ ಕಾವ್ಯ ಮತ್ತು ಆಕೆಯ ಪ್ರಿಯಕರ ದಾವಣಗೆರೆಯ ವಿನೋಬ ನಗರದ ನಾಲ್ಕನೇ ಮುಖ್ಯ ರಸ್ತೆ ಏಳನೇ ಕ್ರಾಸ್ ನಿವಾಸಿ ಬೀರೇಶ್ (24) ಬಂಧಿತರು.
ಜೂ. 9 ರಂದು ಹಳೆ ಬಿಸಲೇರಿ ಗ್ರಾಮದಲ್ಲಿ ಲಿಂಗರಾಜ್ ಎಂಬಾತ ಗೋಡೆ ಮೇಲಿನಿಂದ ಬಿದ್ದು ಸಾವನ್ನಪ್ಪಿದ್ದು, ಅವನ ಸಾವಿನ ಬಗ್ಗೆ ಪೋಷಕರು ಅನುಮಾನ ವ್ಯಕ್ತಪಡಿಸಿದ್ದರು. ಲಿಂಗರಾಜ್ ನನ್ನು ಕೊಲೆ ಮಾಡಲಾಗಿದೆ ಎಂದು ದೂರು ಸಲ್ಲಿಸಿದ್ದರು.
ಪ್ರಕರಣ ದಾಖಲಿಸಿಕೊಂಡ ಪೊಲೀಸರು ಬೀರೇಶ್ ನನ್ನು ವಶಕ್ಕೆ ತೆಗೆದುಕೊಂಡು ವಿಚಾರಣೆಗೆ ಒಳಪಡಿಸಿದಾಗ ಕೊಲೆ ಮಾಡಿರುವುದನ್ನು ಒಪ್ಪಿಕೊಂಡಿದ್ದಾನೆ. ಅವನು ನೀಡಿದ ಸುಳಿವಿನ ಆಧಾರದಲ್ಲಿ ಕೊಲೆಗೀಡಾದ ಲಿಂಗರಾಜ್ ಪತ್ನಿ ಕಾವ್ಯಳನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಳಪಡಿಸಿದ್ದಾರೆ.
ಕಾವ್ಯ ಮತ್ತು ಬೀರೇಶ್ ಅನೈತಿಕ ಸಂಬಂಧ ಹೊಂದಿದ್ದರು. ಕೆಲ ದಿನಗಳ ಹಿಂದೆ ಇಬ್ಬರೂ ಮಂಗಳೂರಿಗೆ ಹೋಗಿದ್ದರು. ನಂತರ ಕಾವ್ಯ ಪತಿಯೊಡನೆ ಜೀವನ ನಡೆಸುತ್ತಿದ್ದಳು. ಆ ನಡುವೆಯೂ ಬೀರೇಶ್ ಜೊತೆಗೆ ಸಂಬಂಧ ಮುಂದುವರೆಸಿದ್ದಳು.
ತಮ್ಮ ಸಂಬಂಧಕ್ಕೆ ಗಂಡನೇ ಅಡ್ಡಿ ಆಗುತ್ತಿದ್ದಾನೆ ಎಂದು ಪ್ರಿಯಕರ ಜೊತೆಗೂಡಿ ಕೊಲೆ ಮಾಡಿದ್ದಳು. ಗೋಡೆ ಮೇಲಿನಿಂದ ಬಿದ್ದು ಸಾವನ್ನಪ್ಪಿದಾನೆ ಎಂಬ ನಾಟಕವಾಡಿದ್ದಳು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Govt Hospital: ಡಿ ಗ್ರೂಪ್ ಸಿಬ್ಬಂದಿಗೆ ಶೀಘ್ರನೇರ ಪಾವತಿ: ಸಚಿವ ದಿನೇಶ್ ಗುಂಡೂರಾವ್
ರಾಜ್ಯದ ರೈತರಿಗೆ ಕೇಂದ್ರ ಸರ್ಕಾರದಿಂದ ಭಾರಿ ಅನ್ಯಾಯವಾಗಿದೆ: ದಿನೇಶ್ ಗುಂಡೂರಾವ್
Davanagere: ಶಾಸಕರ ಖರೀದಿ ಆರೋಪ; ತನಿಖೆಗೆ ಎಸ್‌ಐಟಿ ರಚಿಸಿ: ಎಂ.ಪಿ.ರೇಣುಕಾಚಾರ್ಯ
Market: ಇಳುವರಿ ಕೊರತೆ: ತೆಂಗಿನಕಾಯಿ ಬೆಲೆ 58ರಿಂದ 60 ರೂಪಾಯಿ!
MUST WATCH
ಹೊಸ ಸೇರ್ಪಡೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.