![Gun-Fire](https://www.udayavani.com/wp-content/uploads/2025/02/Gun-Fire-415x249.jpg)
![Gun-Fire](https://www.udayavani.com/wp-content/uploads/2025/02/Gun-Fire-415x249.jpg)
Team Udayavani, Jun 14, 2023, 3:18 PM IST
ಕನ್ನಡ ಚಿತ್ರರಂಗದಲ್ಲಿ ಹಲವು ಸೂಪರ್ ಹಿಟ್ ಸಿನಿಮಾಗಳಿಗೆ ಹಾಡುಗಳನ್ನು ಬರೆದಿರುವ ಗೀತ ಸಾಹಿತಿ ಹೃದಯ ಶಿವ ನಿರ್ದೇಶನದ “ಬಿಸಿಲು ಕುದುರೆ’ ಸಿನಿಮಾ ಇದೇ ಏಪ್ರಿಲ್ 21ರಂದು ಬಿಡುಗಡೆಯಾಗಿತ್ತು. ಇದೀಗ “ಬಿಸಿಲು ಕುದುರೆ’ ಸಿನಿಮಾ ಐವತ್ತು ದಿನಗಳನ್ನು ಪೂರೈಸಿದ್ದು, ಚಿತ್ರತಂಡ ಈ ಸಂತಸವನ್ನು ಇತ್ತೀಚೆಗೆ ಮಾಧ್ಯಮದ ಮುಂದೆ ಹಂಚಿಕೊಂಡಿತು.
ಇದೇ ವೇಳೆ ಮಾತನಾಡಿದ ನಿರ್ದೇಶಕ ಹೃದಯಶಿವ, “ಅರಣ್ಯದಂಚಿನಲ್ಲಿ ತುಂಡುಭೂಮಿ ಹೊಂದಿರುವ ರೈತನ ಬವಣೆಯ ಕುರಿತಾದ ಈ ಚಿತ್ರವನ್ನು ಜನರು ನೋಡಿ ಮೆಚ್ಚಿಕೊಂಡಿದ್ದಾರೆ. ಚಿತ್ರ ಒಂದೇ ಚಿತ್ರಮಂದಿರದಲ್ಲಿ ಐವತ್ತು ದಿನ ಪೂರೈಸಿಲ್ಲ. ರಾಜ್ಯದ ವಿವಿಧ ಕಡೆ ಬಿಡುಗಡೆಯಾಗಿ ಪ್ರದರ್ಶನ ಕಂಡು ಈಗ ಐವತ್ತನೇ ದಿನ ಪೂರೈಸಿದೆ. ಸದ್ಯದಲ್ಲೇ “ಬಿಸಿಲು ಕುದುರೆ’ ಸಿನಿಮಾ ಓಟಿಟಿಯಲ್ಲೂ ಬರಲಿದೆ. ಇದಕ್ಕೆ ಕಾರಣರಾದ ಪ್ರತಿಯೊಬ್ಬರಿಗೂ ಧನ್ಯವಾದ ತಿಳಿಸುತ್ತೇನೆ. ಸದ್ಯದಲ್ಲೇ ನನ್ನ ನಿರ್ದೇಶನದಲ್ಲಿ ಎರಡು ಹೊಸ ಚಿತ್ರಗಳು ಆರಂಭವಾಗಲಿದೆ. ಅದರಲ್ಲಿ ಒಂದು ಬಿಗ್ ಬಜೆಟ್‌ನ ಚಿತ್ರವಾಗಿರಲಿದೆ’ ಎಂದು ಮಾಹಿತಿ ನೀಡಿದರು.
ಚಿತ್ರದ ಪ್ರಮುಖ ಪಾತ್ರಧಾರಿ ನಟ ಸಂಪತ್ ಮೈತ್ರೇಯ ಮಾತನಾಡಿ, “ನಾನು ಚಿತ್ರದ ಕುರಿತು ಬಿಡುಗಡೆ ಪೂರ್ವದಲ್ಲೇ ಸಾಕಷ್ಟು ಮಾತನಾಡಿದ್ದೇನೆ. ಈಗ ಸಿನಿಮಾ ಐವತ್ತನೇ ದಿನಕ್ಕೆ ಬಂದಿದೆ. ಒಂದು ಒಳ್ಳೆಯ ಸಿನಿಮಾ ಐವತ್ತು ದಿನ ಪೂರೈಸುತ್ತಿರುವುದನ್ನು ಸಂಭ್ರಮಿಸುತ್ತಿದ್ದೇನೆ’ ಎಂದರು.
ಚಿತ್ರದಲ್ಲಿ ನಟಿಸಿರುವ ಸುನೀತಾ, ಕರಿಸುಬ್ಬು, ವಿಕ್ಚರಿ ವಾಸು, ಸಂಗೀತ ನಿರ್ದೇಶಕ ಇಮ್ತಿಯಾಜ್ ಸುಲ್ತಾನ್, ಛಾಯಾಗ್ರಹಕ ನಾಗಾರ್ಜುನ, ಸಂಕಲನಕಾರ ಕೆಂಪರಾಜ್ ಸೇರಿದಂತೆ ಚಿತ್ರತಂಡದ ಅನೇಕ ಸದಸ್ಯರು “ಬಿಸಿಲು ಕುದರೆ’ ಯಶಸ್ಸಿನ ಬಗ್ಗೆ ಮಾತನಾಡಿದರು. ಇದೇ ಸಂದರ್ಭದಲ್ಲಿ ಸಿನಿಮಾದ ಗೆಲುವಿಗೆ ಕಾರಣರಾದ ಚಿತ್ರದ ಕಲಾವಿದರು ಮತ್ತು ತಂತ್ರಜ್ಞರಿಗೆ ನಿರ್ದೇಶಕ ಹೃದಯ ಶಿವ ನೆನಪಿನ ಕಾಣಿಕೆ ನೀಡಿ ಗೌರವಿಸಿದರು.
Actor Darshan: ಪ್ರೇಮ್ – ದರ್ಶನ್ ಸಿನಿಮಾ ಬರುವುದು ಪಕ್ಕಾ.. ಸ್ಪೆಷೆಲ್ ಪೋಸ್ಟರ್ ಔಟ್
Mallu Jamkhandi: ʼವಿದ್ಯಾ ಗಣೇಶʼ ನಂಬಿ ಬಂದವರು
Sandalwood: ʼನಾಗವಲ್ಲಿ ಬಂಗಲೆ’ಯಿಂದ ಹಾಡು ಬಂತು
ದಾಂಪತ್ಯ ಜೀವನಕ್ಕೆ ಕಾಲಿಟ್ಟ ಧನಂಜಯ – ಧನ್ಯತಾ: ಮದುವೆ ಬಳಿಕ ನವ ಜೋಡಿ ಹೇಳಿದ್ದೇನು?
Devil Teaser: ಚಾಲೆಂಜ್.. ಹೂಂ.. ಟೀಸರ್‌ನಲ್ಲೇ ʼಡೆವಿಲ್’ ಲುಕ್ ಕೊಟ್ಟ ʼದಾಸʼ
Mandya: ನಾಗಮಂಗಲದಲ್ಲಿ ಆಕಸ್ಮಿಕ ಫೈರಿಂಗ್: 3 ವರ್ಷದ ಮಗು ಮೃತ್ಯು!
Kaup: ಸ್ಕೂಟಿ, ಕಾರಿಗೆ ಬಸ್ ಢಿಕ್ಕಿ; ಸವಾರನಿಗೆ ಗಾಯ
Thirthahalli: ಸಾಲ ಕಟ್ಟದ್ದಕ್ಕೆ ಕಿವಿಯೋಲೆ ಕಿತ್ತ ಬ್ಯಾಂಕ್ ಸಿಬ್ಬಂದಿ!
Padubidri: ಕಬ್ಬಿಣದ ತುಂಡು ಹೆಕ್ಕಿದ ಬಾಲಕರಿಗೆ ರೈಲ್ವೇ ಗ್ಯಾಂಗ್‌ಮನ್ ಹಲ್ಲೆ; ದೂರು
Restriction: ನಿಷೇಧವಿದ್ದರೂ ಗೂಡ್ಸ್ ವಾಹನಗಳಲ್ಲಿ ಜನರು ಬಿಳಿಗಿರಿ ರಂಗನ ಬೆಟ್ಟಕ್ಕೆ ಪಯಣ!
You seem to have an Ad Blocker on.
To continue reading, please turn it off or whitelist Udayavani.