Gruha Jyothi:15 ಅಲ್ಲ,18ರಿಂದ ನೋಂದಣಿ ಆರಂಭ
Team Udayavani, Jun 15, 2023, 7:10 AM IST
ಬೆಂಗಳೂರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ “ಗೃಹ ಜ್ಯೋತಿ’ ಯೋಜನೆಗೆ ನೋಂದಣಿ ಜೂನ್ 15ರ ಬದಲು ಜೂ.18ರಿಂದ ಪ್ರಾರಂಭವಾಗಲಿದೆ.
ಇದನ್ನು ಟೀಕಿಸಿರುವ ಬಿಜೆಪಿ “ಪುಕ್ಸಟ್ಟೆ ವಿದ್ಯುತ್ ಅಂತ ವಿದ್ಯುತ್ ದರ ಏರಿಸಿದಿರಿ, ಗೃಹ ಜ್ಯೋತಿ ಅರ್ಜಿ ದಿನಾಂಕ ಮುಂದಕ್ಕೆ ತಳ್ಳಿದ್ದೀರಿ’, ನಿಮ್ಮ ಗ್ಯಾರಂಟಿ ಹುನ್ನಾರ ನಾಡಿನ ಸಮಸ್ತ ಜನರಿಗೆ ಅರ್ಥವಾಗಿದೆ’ ಎಂದು ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ.
ಗೃಹ ಜ್ಯೋತಿ ಯೋಜನೆಯ ನೋಂದಣಿ ಕುರಿತು ಪ್ರಕಟಣೆ ಹೊರಡಿಸಿರುವ ಇಂಧನ ಇಲಾಖೆ, ನೋಂದಣಿಯನ್ನು ಜೂನ್ 18, 2023ರಿಂದ ಪ್ರಾರಂಭಿಸಲಾಗು ತ್ತದೆ. ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲಿಚ್ಛಿಸುವವರು ವಿಶೇಷವಾಗಿ ಸೃಜಿಸಲಾಗಿರುವ (ಕಸ್ಟಮ್ ಮೇಡ್) ಸೇವಾ ಸಿಂಧು ಪೋರ್ಟಲ್ನಲ್ಲಿ
https://sevasindhugs.karnataka.gov.in/gruhajyothi
ನೋಂದಾಯಿಸಬೇಕಾಗಿದೆ.
ಈ ತಂತ್ರಾಂಶವನ್ನು ಮೊಬೈಲ್ ಫೋನ್/ ಕಂಪ್ಯೂಟರ್ /ಲ್ಯಾಪ್ ಟ್ಯಾಪ್ಗಳ ಮೂಲಕವೂ ಬಳಸಬಹುದಾಗಿದೆ ಎಂದಿದೆ.
ಫಲಾನುಭವಿಗಳು ಆಧಾರ್ ಕಾರ್ಡ್, ವಿದ್ಯುತ್ ಖಾತೆ ಸಂಖ್ಯೆಗಳ ಮಾಹಿತಿಗಳನ್ನು (ವಿದ್ಯುತ್ ಬಿಲ್ನಲ್ಲಿ ಇರುವಂತೆ) ನೋಂದಣಿ ಸಮಯದಲ್ಲಿ ನೀಡಬೇಕು.
ಬೆಂಗಳೂರು ಒನ್, ಗ್ರಾಮ ಒನ್ ಮತ್ತು ಕರ್ನಾಟಕ ಒನ್ ಕೇಂದ್ರಗಳಲ್ಲಿ ಅಥವಾ ಯಾವುದೇ ವಿದ್ಯುತ್ ಕಚೇರಿಗಳಲ್ಲಿಯೂ ನೋಂದಾಯಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ ವಿದ್ಯುತ್ ಕಚೇರಿ ಸಂಪರ್ಕಿಸಬಹುದು ಅಥವಾ 24 * 7 ಸಹಾಯವಾಣಿ ಸಂಖ್ಯೆ 1912 ಕ್ಕೆ ಕರೆ ಮಾಡಬಹುದು ಎಂದು ತಿಳಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkamagaluru: ಗಾಂಜಾ ಮಾರಾಟ ಮಾಡುತ್ತಿದ್ದ ಇಬ್ಬರು ಆರೋಪಿಗಳ ಬಂಧನ
Ration Card: ಅನರ್ಹರಿಗೆ ಬಿಪಿಎಲ್ ಕಾರ್ಡ್ ಕೊಡಲ್ಲ, ಅರ್ಹರಿಗೆ ತಪ್ಪಿಸಲ್ಲ: ಸಿದ್ದರಾಮಯ್ಯ
Sagara: ಸಹಕಾರಿ ಚಳುವಳಿಯ ಭದ್ರ ಬೇರು ಕರ್ನಾಟಕದಲ್ಲಿದೆ: ಬಿ.ಎಸ್.ಯಡಿಯೂರಪ್ಪ
Liquor: ಮದ್ಯ ಬಂದ್ ಗೆ ಬೆಂಬಲವಿಲ್ಲ: ಪ್ರವಾಸೋದ್ಯಮ ಹೋಟೆಲ್ ಮಾಲೀಕರ ಸಂಘ
Bagalakote: ಅನರ್ಹರ ಬಿಪಿಎಲ್ ಕಾರ್ಡ್ ಗಳು ಮಾತ್ರ ರದ್ದು: ಸಿಎಂ ಸಿದ್ದರಾಮಯ್ಯ
MUST WATCH
ಹೊಸ ಸೇರ್ಪಡೆ
Malpe: ಕಿನ್ನಿಮೂಲ್ಕಿ; ನಿಲ್ಲಿಸಲಾಗಿದ್ದ ಬುಲೆಟ್ ಕಳವು
Maharashtra: ಬಿಜೆಪಿ ನಾಯಕಿ ನವನೀತ್ ರಾಣಾ, ಬೆಂಬಲಿಗರ ಮೇಲೆ ಹಲ್ಲೆ, ಎಫ್ಐಆರ್ ದಾಖಲು
Boeing: 400ಕ್ಕೂ ಅಧಿಕ ಉದ್ಯೋಗಿಗಳಿಗೆ ವಜಾ ನೋಟಿಸ್ ನೀಡಿದ ಬೋಯಿಂಗ್
Kharge: ನಾವು ಸಂವಿಧಾನ ರಕ್ಷಿಸದಿದ್ದರೆ ಮೋದಿ ಚಹಾ ಮಾರಿಕೊಂಡೇ ಇರಬೇಕಿರುತ್ತಿತ್ತು
Kanguva ಕುರಿತು ಭಾರೀ ನೆಗೆಟಿವ್ ವಿಮರ್ಶೆ: ನಟ ಸೂರ್ಯ ಪತ್ನಿ ಜ್ಯೋತಿಕಾ ಆಕ್ರೋಶ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.