Udayavani ಕಚೇರಿಯಲ್ಲಿ ಸುಳ್ಯ, ಬಂಟ್ವಾಳ ಶಾಸಕರೊಂದಿಗೆ ಅಭ್ಯುದಯ ಸಂವಾದ
Team Udayavani, Jun 15, 2023, 6:55 AM IST
ಮಂಗಳೂರು: ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯ ಹಾಗೂ ಬಂಟ್ವಾಳ ಶಾಸಕರೊಂದಿಗೆ ಕ್ಷೇತ್ರದ ಅಭ್ಯುದಯಕ್ಕೆ ಸಂಬಂಧಿಸಿದ ಸಂವಾದ ಬುಧವಾರ ಉದಯವಾಣಿ ಮಂಗಳೂರು ಕಚೇರಿಯಲ್ಲಿ ನಡೆಯಿತು.
ಸುಳ್ಯ ಶಾಸಕಿ ಭಾಗೀರಥಿ ಮುರುಳ್ಯ ಹಾಗೂ ಬಂಟ್ವಾಳದ ಶಾಸಕ ರಾಜೇಶ್ ನಾೖಕ್ ಉಳಿಪ್ಪಾಡಿ ಭಾಗವಹಿಸಿದರು.
ಭಾಗೀರಥಿ ಮುರುಳ್ಯ ಮಾತನಾಡಿ, ಸುಳ್ಯ ತಾಲೂಕಿನ ವಿವಿಧ ಹೊಳೆಗಳಿಗೆ ಜಾಕ್‌ವೆಲ್ ನಿರ್ಮಿಸುವ ಮೂಲಕ ಆಯಾ ಊರಿಗೆ ಕುಡಿಯುವ ನೀರಿನ ವ್ಯವಸ್ಥೆ ಕಲ್ಪಿಸುವ ಬಗ್ಗೆ, ಪ್ರಮುಖವಾಗಿ ರಸ್ತೆ, ಸೇತುವೆ ನಿರ್ಮಾಣ, ಮೂಲಸೌಕರ್ಯ ಕಲ್ಪಿಸುವುದು, ಸುಳ್ಯ ನಗರವನ್ನು ದಟ್ಟಣೆಮುಕ್ತ ಮಾಡಲು ಉಬರಡ್ಕ ಮೂಲಕ ಬೈಪಾಸ್ ಕಲ್ಪಿಸುವ ಬಗ್ಗೆ ತಮ್ಮ ಯೋಚನೆಗಳನ್ನು ಅವರು ಉದಯವಾಣಿ ಜತೆ ಹಂಚಿಕೊಂಡರು.
ಹಳದಿ ಎಲೆ ರೋಗ, ಎಲೆಚುಕ್ಕಿ ರೋಗದಿಂದ ತಮ್ಮ ಭಾಗದ ಅಡಿಕೆ ಬೆಳೆಗಾರರು ಕಂಗೆಟ್ಟಿರುವ ಹಿನ್ನೆಲೆಯಲ್ಲಿ ಆ ಪ್ರದೇಶದ ಮಣ್ಣಿನ ಗುಣವನ್ನು ಅಧ್ಯಯನ ಮಾಡಿ, ಪರ್ಯಾಯ ಬೆಳೆಗಳನ್ನು ಬೆಳೆಸುವ ಬಗ್ಗೆ ತಮಗಿರುವ ಒಲವು ವ್ಯಕ್ತಪಡಿಸಿದ ಅವರು, ಅನೇಕ ದುರ್ಗಮ ಪ್ರದೇಶಗಳು ತಮ್ಮ ವ್ಯಾಪ್ತಿಯಲ್ಲಿದ್ದು, ಅಲ್ಲಿ ಮೊಬೈಲ್ ನೆಟ್‌ವರ್ಕ್ ಜಾಲ ಬಲಪಡಿಸುವ ನಿಟ್ಟಿನಲ್ಲಿ ಮೊಬೈಲ್ ಕಂಪೆನಿ ಗಳೊಂದಿಗೆ ಮಾತುಕತೆ ನಡೆಸಿರುವುದಾಗಿ ತಿಳಿಸಿದರು.
ರಾಜೇಶ್ ನಾೖಕ್ ಉಳಿಪ್ಪಾಡಿ ಮಾತನಾಡಿ, ಕ್ಷೇತ್ರದಲ್ಲಿ ಮುಖ್ಯವಾಗಿ ಮೂಲಸೌಕರ್ಯ, ಕುಡಿಯುವ ನೀರು, ಪ್ರವಾಸೋದ್ಯಮ, ಕೃಷಿಯನ್ನು ಅಭಿವೃದ್ಧಿ ಪಡಿಸಲು ತಮ್ಮಲ್ಲಿರುವ ಯೋಚನೆಗಳನ್ನು ತೆರೆದಿಟ್ಟರು.
ಬಂಟ್ವಾಳದ ಜಕ್ರಿಬೆಟ್ಟು ಅಣೆಕಟ್ಟು ಪೂರ್ಣಗೊಳ್ಳುತ್ತಿದ್ದು, ಅದರಿಂದ ಬಂಟ್ವಾಳ ಹಾಗೂ ಮಂಗಳೂರಿನ ಕುಡಿಯುವ ನೀರಿನ ಬೇಡಿಕೆ ಪೂರೈಕೆಗೆ ಮತ್ತಷ್ಟು ಬಲ ಸಿಗಲಿರುವ ಸಾಧ್ಯತೆಗಳನ್ನು ತಿಳಿಸಿದ ಅವರು, ಬಂಟ್ವಾಳ, ಬಿ.ಸಿ ರೋಡ್ ಪಟ್ಟಣಗಳ ಅಭಿವೃದ್ಧಿಗೆ ಯೋಜನೆ ರೂಪಿಸುವ ಬಗ್ಗೆ, ಕಾರಿಂಜ, ನರಹರಿ ಪರ್ವತ, ಪೊಳಲಿ ಕ್ಷೇತ್ರಗಳು ತಮ್ಮ ವ್ಯಾಪ್ತಿಯಲ್ಲಿ ಬರುತ್ತಿದ್ದು, ಅವುಗಳನ್ನು ಸೇರಿಸಿಕೊಂಡು “ಟೆಂಪಲ್ ಟೂರಿಸಂ’ ಯೋಜನೆ ಹಮ್ಮಿಕೊಂಡಿರುವುದಾಗಿ ವಿವರಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Mangaluru: ಕಾರು ಢಿಕ್ಕಿ; ಕಾರ್ಮಿಕ ಮೃತ್ಯು
Gujjar Kere: ಕೆರೆ ಪರಿಸರದ ರಕ್ಷಣೆಗೆ ಆದ್ಯತೆ ಅಗತ್ಯ; ತಹಶೀಲ್ದಾರ್‌ಗೆ ಮರು ಮನವಿ
Mangaluru: ಬೊಂದೇಲ್-ಕಾವೂರು ರಸ್ತೆಯಲ್ಲಿಲ್ಲ ಫುಟ್‌ಪಾತ್
Ullal: ನ್ಯೂಪಡ್ಪುವಿನಲ್ಲಿ ಸರಕಾರಿ ಪದವಿ ಪೂರ್ವ ಕಾಲೇಜು ಉದ್ಘಾಟನೆ
MUST WATCH
ಹೊಸ ಸೇರ್ಪಡೆ
Mangaluru: ಅಕಾಡೆಮಿ ಯಕ್ಷಗಾನ ಕಲಾವಿದರಿಗೆ ಶಕ್ತಿ ತುಂಬುವ ಕೆಲಸ ಮಾಡಲಿ: ಡಾ.ಶಿವರಾಮ ಶೆಟ್ಟಿ
Kaup: ಉದ್ಯಾವರ: ಮಹಿಳೆ ಮಲಗಿದ ಸ್ಥಿತಿಯಲ್ಲೇ ಸಾವು
Udupi: ಗೀತಾರ್ಥ ಚಿಂತನೆ-99: ತಿಳಿದುಕೊಂಡವರ ಹಾಗಿದ್ದ ಅರ್ಜುನ
Puttur: ಕಾಸರಗೋಡು ಮೂಲದ ಅಪ್ರಾಪ್ತೆಗೆ ಲೈಂಗಿಕ ಕಿರುಕುಳ; ಪೋಕ್ಸೊ ಕೇಸು
Bengaluru: ಇವಿ ಬೈಕ್ ಶೋ ರೂಮ್‌ನಲ್ಲಿ ಬೆಂಕಿ: ಯುವತಿ ದಾರುಣ ಸಾ*ವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.