Mangalore: ಮನೆ ಕಳ್ಳತನ ಪ್ರಕರಣ; ಇಬ್ಬರನ್ನು ಬಂಧಿಸಿದ ಸಿಸಿಬಿ
Team Udayavani, Jun 15, 2023, 12:53 PM IST
ಮಂಗಳೂರು: ಮಂಗಳೂರು ನಗರದ ಮುಲ್ಕಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದ ಮನೆ ಕಳ್ಳತನ ಪ್ರಕರಣದಲ್ಲಿ ಭಾಗಿಯಾದ ಇಬ್ಬರನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ.
ಕಾರ್ಕಳದ ಗಣೇಶ ನಾಯ್ಕ್(26), ಕೊಡಗಿನ ರಂಜಿತ್ ಕೆ.ಆರ್(26) ಬಂಧಿತ ಆರೋಪಿಗಳು. ಬಂಧಿತರಿಂದ 1 ಕೆಜಿ ಚಿನ್ನಾಭರಣವನ್ನು ವಶಪಡಿಸಿಕೊಂಡಿದ್ದಾರೆ.
ಪ್ರಕರಣದ ವಿವರ: ದಿನಾಂಕ: 15-01-2023 ರಂದು ಮಂಗಳೂರು ತಾಲೂಕು ತಾಳಿಪ್ಪಾಡಿ ಗ್ರಾಮದ ಗುತ್ತಕಾಡು ಎಂಬಲ್ಲಿರುವ ಶ್ರೀ ಐಕಳ ಹರೀಶ್ ಶೆಟ್ಟಿ ಎಂಬವರ ಮನೆಯ ಎದುರಿನ ಬಾಗಿಲಿನ ಲಾಕನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣ, ಬೆಳ್ಳಿಯ ಆಭರಣ ಹಾಗೂ ನಗದು ಹಣವನ್ನು ಕಳವುಗೈದಿದ್ದರು. ಈ ಬಗ್ಗೆ ಮುಲ್ಕಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಈ ಪ್ರಕರಣವನ್ನು ಸಿಸಿಬಿಗೆ ಹಸ್ತಾಂತರಿಸಲಾಗಿತ್ತು. ಮಂಗಳೂರು ಸಿಸಿಬಿ ಪೊಲೀಸರು ವಿವಿಧ ಆಯಾಮಗಳಲ್ಲಿ ತನಿಖೆಯನ್ನು ಕೈಗೊಂಡು ಮಾಹಿತಿಯನ್ನು ಸಂಗ್ರಹಿಸಿ ಚಾಣಕ್ಷತನದಿಂದ ಪ್ರಕರಣವನ್ನು ಭೇದಿಸಿದ್ದಾರೆ.
ಗಣೇಶ ನಾಯ್ಕ್, ರಂಜಿತ್ ಕೆ.ಆರ್ ಎಂಬುವವರನ್ನು ಬಂಧಿಸಿದ್ದಾರೆ. ಬಂಧಿತರಿಂದ ಅಂದಾಜು 55 ಲಕ್ಷ ರೂ.ಮೌಲ್ಯದ 1 ಕೆಜಿ ವಿವಿಧ ನಮೂನೆಯ ಚಿನ್ನಾಭರಣ, 2 ಮೊಬೈಲ್ ಫೋನ್ ಗಳು, ಕೃತ್ಯಕ್ಕೆ ಬಳಸಿದ ಕಬ್ಬಿಣದ ರಾಡ್ ನ್ನು ವಶಕ್ಕೆ ಪಡೆದುಕೊಳ್ಳಲಾಗಿದೆ.
ಇದನ್ನೂ ಓದಿ: ಸಿಂಗಾಪುರದಲ್ಲಿ ಹನಿಮೂನ್: ಪತ್ನಿಯೊಂದಿಗಿನ ಸುಂದರ ಫೋಟೋ ಹಂಚಿಕೊಂಡ ನಟ ಆಶಿಶ್ ವಿದ್ಯಾರ್ಥಿ
ಈ ಪ್ರಕರಣದಲ್ಲಿ ಇನ್ನೂ ಹಲವಾರು ಮಂದಿ ಆರೋಪಿಗಳು ಭಾಗಿಯಾಗಿದ್ದು, ಆರೋಪಿಗಳ ಪತ್ತೆ ಕಾರ್ಯ ಮುಂದುವರೆದಿದೆ.
ಈ ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಹಾಗೂ ಇತರ ಇಬ್ಬರು ಆರೋಪಿಗಳು ಈ ಹಿಂದೆ ಮಂಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕೆಳರಾಯಿ ಚರ್ಚ್ ರಸ್ತೆಯಲ್ಲಿನ ಮನೆಯೊಂದರ ಬಾಗಿಲಿನ ಬೀಗವನ್ನು ಒಡೆದು ಮನೆಯಲ್ಲಿನ ಬೆಲೆಬಾಳುವ ಸೊತ್ತುಗಳನ್ನು ಹಾಗೂ ಮಾರುತಿ ಬ್ರೀಝಾ ಕಾರನ್ನು ಕಳವುಗೈದ ಪ್ರಕರಣದಲ್ಲಿ ಭಾಗಿಯಾಗಿದ್ದು, ಈ ಪ್ರಕರಣವು ಕೂಡಾ ಪತ್ತೆಯಾಗಿರುತ್ತದೆ.
ಆರೋಪಿಗಳ ಪೈಕಿ ಗಣೇಶ್ ನಾಯ್ಕ್ ಎಂಬಾತನ ವಿರುದ್ಧ ಈ ಹಿಂದೆ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ಪೋಕ್ಸೋ ಪ್ರಕರಣ ದಾಖಲಾಗಿರುತ್ತದೆ.
ಇದನ್ನೂ ಓದಿ:Gruha Lakshmi ನಾಳೆಯಿಂದ ಗೃಹಲಕ್ಷ್ಮಿ ಯೋಜನೆ: ವರ್ಷವಿಡೀ ಅರ್ಜಿ ಸಲ್ಲಿಕೆ ಮಾಡಬಹುದು
ಈ ಕಳವು ಪ್ರಕರಣವನ್ನು ಭೇದಿಸುವಲ್ಲಿ ಮಂಗಳೂರು ನಗರ ಸಿಸಿಬಿ ಘಟಕದ ಎಸಿಪಿ ಪಿ ಎ ಹೆಗಡೆ, ಪೊಲೀಸ್ ನಿರೀಕ್ಷಕರಾದ ಶ್ಯಾಮ್ ಸುಂದರ್ ಹೆಚ್ ಎಂ, ಪಿಎಸ್ಐಯವರಾದ ರಾಜೇಂದ್ರ ಬಿ,ಸುದೀಪ್ ಎಂ ವಿ, ಶರಣಪ್ಪ ಭಂಡಾರಿ, ಎಎಸ್ಐಯವರಾದ ಶಶಿಧರ ಶೆಟ್ಟಿ, ಹರೀಶ್,ಮೋಹನ್ ಕೆ ವಿ ಹಾಗೂ ಸಿಸಿಬಿ ಸಿಬ್ಬಂದಿಯವರು ಪಾಲ್ಗೊಂಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ
ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ
Dinesh Gundu Rao: ಅನರ್ಹರ ಕಾರ್ಡ್ ರದ್ದು ತಪ್ಪಲ್ಲ, ಅರ್ಹರಿಗೆ ಅನ್ಯಾಯ ಆಗುವುದಿಲ್ಲ
MUST WATCH
ಹೊಸ ಸೇರ್ಪಡೆ
Naxal Encounter Case: ಜಯಂತ್ ಗೌಡ ವಿಚಾರಣೆ, ಠಾಣೆಗೆ ಮುತ್ತಿಗೆ ಹಾಕಿದ ಗ್ರಾಮಸ್ಥರು
Waqf Protest: ರಾಜ್ಯ ಸರ್ಕಾರವನ್ನು ಜನರೇ ಕಿತ್ತೊಗೆಯಲಿದ್ದಾರೆ: ದಾವಣಗೆರೆಯಲ್ಲಿ ಪ್ರತಿಭಟನೆ
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.