ಬಸ್ ಸೌಕರ್ಯಕ್ಕಾಗಿ ರಸ್ತೆಯಲ್ಲೇ ವಿದ್ಯಾರ್ಥಿಗಳ ಧರಣಿ
Team Udayavani, Jun 15, 2023, 3:54 PM IST
ಚಿಕ್ಕಬಳ್ಳಾಪುರ: ಶಾಲಾ, ಕಾಲೇಜುಗಳು ಶುರುವಾಗುತ್ತಿದ್ದಂತೆ ಜಿಲ್ಲೆಯಲ್ಲಿ ವಿದ್ಯಾರ್ಥಿಗಳಿಗೆ ಬಸ್ ಸಂಕಷ್ಟ ಎದುರಾಗಿದೆ. ಸಕಾಲಕ್ಕೆ ಶಾಲಾ, ಕಾಲೇಜುಗಳಿಗೆ ತೆರಳಲು ತಮಗೆ ಬಸ್ ಸೌಕರ್ಯ ಇಲ್ಲ ಎಂದು ಆರೋಪಿಸಿ ಚಿಕ್ಕಬಳ್ಳಾಪುರ ತಾಲೂಕಿನ ಜಾತವಾರ ಬಳಿ ವಿದ್ಯಾರ್ಥಿಗಳು ರಸ್ತೆಯಲ್ಲಿ ಧರಣಿ ನಡೆಸಿ ಬಸ್ ಸೌಲಭ್ಯಕ್ಕೆ ಪ್ರತಿಭಟನೆ ನಡೆಸಿದ್ದಾರೆ.
ಸಮಯಕ್ಕೆ ಸರಿಯಾಗಿ ಕೆಎಸ್‌ಆರ್‌ಟಿಸಿ ಬಸ್‌ಗಳ ವ್ಯವಸ್ಥೆ ಇಲ್ಲ, ಬರುವ ಬಸ್‌ಗಳೂ ನಿಲುಗಡೆ ಮಾಡುವುದಿಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿ ಬುಧವಾರ ಜಾತವಾರ ಗ್ರಾಮದ ಬಳಿ ಶಾಲಾ, ಕಾಲೇಜುಗೆ ಬರುವ ವಿದ್ಯಾರ್ಥಿಗಳು ಪ್ರತಿಭಟಿಸಿದರು.
ಒಂದು ದಿನ ಕಥೆಯಲ್ಲ: ಒಂದು ಗಂಟೆಯಿಂದ ಚಿಕ್ಕಬಳ್ಳಾಪುರಕ್ಕೆ ತೆರಳಲು ಬಸ್‌ಗಾಗಿ ಕಾಯುತ್ತಿದ್ದೇವೆ. ಆದರೆ ಬಸ್ ಇನ್ನೂ ಬಂದಿಲ್ಲ. ಇದು ಒಂದು ದಿನ ಕಥೆಯಲ್ಲ, ನಿತ್ಯವೂ ಇದೇ ರೀತಿ ಇರುತ್ತದೆ. ಚಿಂತಾಮಣಿ, ಶಿಡ್ಲಘಟ್ಟದಿಂದ ಬಸ್‌ಗಳು ಸಹ ಇಲ್ಲಿ ನಿಲ್ಲಿಸುವುದಿಲ್ಲ ಎಂದು ಪ್ರತಿಭಟನ ನಿರತ ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ದೂರಿದರು.
ಬಸ್‌ಗಳೂ ಬಂದರೂ ನಿಲ್ಲಿಸುವುದಿಲ್ಲ: 9 ಗಂಟೆಗೆ ಕೆಲವು ಶಾಲಾ, ಕಾಲೇಜುಗಳು ಆರಂಭವಾಗುತ್ತವೆ. ಬಸ್‌ಗಳು ಬರುವುದೇ ಇಲ್ಲ. ಇದರಿಂದ ಮೊದಲ ತರಗತಿಗಳಿಗೆ ಸಮಯಕ್ಕೆ ಸರಿಯಾಗಿ ಹೋಗಲು ಸಾಧ್ಯವಾಗುವುದಿಲ್ಲ. ಚಿಂತಾಮಣಿ ಕಡೆಯಿಂದ ಬಸ್ ಗಳೂ ಬಂದರೂ ಚಾಲಕರು ನಿಲ್ಲಿಸುವುದಿಲ್ಲ. ಅವರ ಮನೆಗಳಲ್ಲಿಯೂ ಸಹ ವಿದ್ಯಾರ್ಥಿಗಳು ಇಲ್ಲವೇ ಎಂದು ಪ್ರತಿಭಟನ ನಿರತ ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿದರು. ಪೊಲೀಸರೊಂದಿಗೆ ಮಾತಿನಚಕಮಕಿ: ಪ್ರತಿಭಟನೆ ವೇಳೆ ವಿದ್ಯಾರ್ಥಿ ಪೋಷಕರು ಪೊಲೀಸರೊಂದಿಗೆ ಮಾತಿನಚಕಮಕಿ ನಡೆಸಿದರು. ಪೊಲೀಸರು ಕಾನೂನು ಸುವ್ಯವಸ್ಥೆ ದೃಷ್ಠಿಯಿಂದ ಪ್ರತಿಭಟನಕಾರರನ್ನು ಸಮಾಧಾನಪಡಿಸಿ ರಸ್ತೆ ತಡೆ ತೆರವುಗೊಳಿಸುವ ಪ್ರಯತ್ನ ನಡೆಸಿದರು. ಆದರೆ ಇದಕ್ಕೆ ಒಪ್ಪದ ವಿದ್ಯಾರ್ಥಿಗಳು ತಮಗೆ ಸೂಕ್ತ ಸಾರಿಗೆ ವ್ಯವಸ್ಥೆ ಬೇಕೆಂದು ಹಠ ಹಿಡಿದು ಧರಣಿ ನಡೆಸಿದರು.
ಶಿಡ್ಲಘಟ್ಟ-ಚಿಂತಾಮಣಿ ರಸ್ತೆಯಲ್ಲಿ ಸಂಚಾರ ಅಸ್ತವ್ಯಸ್ತ! : ಚಿಕ್ಕಬಳ್ಳಾಪುರ-ಶಿಡ್ಲಘಟ್ಟ ಹಾಗೂ ಚಿಂತಾಮಣಿ ಮಾರ್ಗವಾಗಿ ಜಾತವಾರ ಬಳಿ ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ಕುಳಿತು ಕೆಎಸ್‌ಆರ್‌ಟಿಸಿ ಬಸ್ ಸೌಲಭ್ಯಕ್ಕೆ ಪ್ರತಿಭಟಿಸಿದ್ದರಿಂದ ಕೆಲ ಕಾಲ ಈ ಮಾರ್ಗದಲ್ಲಿ ವಾಹನ ಸಮಚಾರದಲ್ಲಿ ಅಸ್ತವ್ಯಸ್ತವಾಯಿತು. ಇದರಿಂದ ಪ್ರಯಾಣಿಕರು, ವಾಹನ ಸವಾರರು ಪರದಾಡಬೇಕಾಯಿತು.
ಶಾಸಕರು ಗಮನ ಹರಿಸಬೇಕೆಂದ ಪೋಷಕರು: ಶಾಸಕ ಪ್ರದೀಪ್ ಈಶ್ವರ್ ಈ ಬಗ್ಗೆ ಗಮನ ಹರಿಸಬೇಕು, ಮಕ್ಕಳಿಗೆ ಸೂಕ್ತ ಬಸ್ ಸೌಕರ್ಯ ಮಾಡಬೇಕು, ಶಾಲಾ, ಕಾಲೇಜುಗಳು ಆರಂಭವಾಗಿರುವುದರಿಂದ ಶಾಲೆಗೆ ಸರಿಯಾದ ಸಮಯಕ್ಕೆ ಹೋಗಬೇಕು. ಆದ್ದರಿಂದ ಈ ಮಾರ್ಗದಲ್ಲಿ ಶಾಲೆ ಸಮಯಕ್ಕೆ ಅನುಕೂಲವಾಗುವಂತೆ ಹೆಚ್ಚುವರಿ ಬಸ್ ಸಂಚಾರಕ್ಕೆ ಅನುವು ಮಾಡಿಕೊಡಬೇಕೆಂದು ವಿದ್ಯಾರ್ಥಿ ಪೋಷಕರು ಶಾಸಕ ಪ್ರದೀಪ್ ಈಶ್ವರ್‌ರಲ್ಲಿ ಮನವಿ ಮಾಡಿದರು.
ಒಂದು ದಿನವಲ್ಲ, ನಿತ್ಯವೂ ಇದೇ ಕರ್ಮ : ಶಾಲೆಗೆ ತಡವಾಗಿ ಹೋದರೆ ಶಿಕ್ಷಕರು ನಮ್ಮನ್ನು ಹೊರಗೆ ನಿಲ್ಲಿಸುತ್ತಾರೆ. ಒಂದು ದಿನ ಆದರೆ ಪರವಾಗಿಲ್ಲ, ನಿತ್ಯವೂ ಇದೇ ಕರ್ಮ ಆಗಿದೆ. ಕೆಲವೊಮ್ಮೆ ನಿಲುಗಡೆ ಇಲ್ಲ ಅಂತ ವೇಗದೂತ ಬಸ್‌ಗಳು ನಿಲ್ಲಿಸದೇ ಸಂಚರಿಸುತ್ತಿವೆ. ಹಲವು ಬಾರಿ ನಾವು ಅಧಿಕಾರಿಗಳ ಗಮನಕ್ಕೆ ತಂದರೂ ಪರಿಸ್ಥಿತಿ ಸುಧಾರಿಸಿಲ್ಲ ಎಂದು ವಿದ್ಯಾರ್ಥಿಗಳು ಅಸಮಾಧಾನ ಹೊರ ಹಾಕಿದರು.
ಅಧಿಕಾರಿಗಳು ತಕ್ಷಣವೇ ಬಸ್ ವ್ಯವಸ್ಥೆ ಕಲ್ಪಿಸಬೇಕು. ಈ ಹಿಂದಿನಿಂದಲೂ ಇರುವ ಸಮಸ್ಯೆಯನ್ನು ಪರಿಹರಿಸಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Scheme: ದಿಲ್ಲಿಯಲ್ಲಿ ಆಮ್ ಆದ್ಮಿ ಸರಕಾರ-ಬಿಜೆಪಿ ಮಧ್ಯೆ ವೃದ್ಧಾಪ್ಯ ವೇತನ ಕದನ!
Election: ರಾಜ್ ಠಾಕ್ರೆ ಎಂಎನ್‌ಎಸ್ ಶೂನ್ಯ ಸಾಧನೆ: ಚಿಹ್ನೆ, ಮಾನ್ಯತೆ ನಷ್ಟದ ಭೀತಿ!
Air Quality: ದಿಲ್ಲಿಯಲ್ಲಿ ಭೌತಿಕ ತರಗತಿ ಪುನಾರಂಭದ ಬಗ್ಗೆ ಗಮನ ಹರಿಸಿ: ಸುಪ್ರೀಂ ಕೋರ್ಟ್
Indian Constitution: ಸಂವಿಧಾನ ಅಂಗೀಕರಿಸಿ 75 ವರ್ಷ: ಸದನದಲ್ಲಿಂದು ರಾಷ್ಟ್ರಪತಿ ಭಾಷಣ
Judgement: ಸಂವಿಧಾನ ಪೀಠಿಕೆಯ ಜಾತ್ಯತೀತ ಪದ ಪ್ರಶ್ನಿಸಿದ್ದ ಅರ್ಜಿ ಸುಪ್ರೀಂನಿಂದ ವಜಾ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.