Tamil Nadu ಮಾಜಿ ಡಿಜಿಪಿ ರಾಜೇಶ್ ದಾಸ್ ಗೆ 3 ವರ್ಷ ಜೈಲು ಶಿಕ್ಷೆ ವಿಧಿಸಿದ ಕೋರ್ಟ್
ಮಹಿಳಾ ಅಧಿಕಾರಿಗೆ ಲೈಂಗಿಕ ಕಿರುಕುಳ ಆರೋಪ
Team Udayavani, Jun 16, 2023, 2:03 PM IST
ಚೆನ್ನೈ: ತಮಿಳುನಾಡಿನ ಮಾಜಿ ಪೊಲೀಸ್ ಮಹಾನಿರ್ದೇಶಕ ರಾಜೇಶ್ ದಾಸ್ ಅವರು ಮಹಿಳಾ ಅಧಿಕಾರಿ ಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ 3 ವರ್ಷಗಳ ಜೈಲು ಶಿಕ್ಷೆಯನ್ನು ನ್ಯಾಯಾಲಯ ಶುಕ್ರವಾರ ವಿಧಿಸಿದೆ.
ಮಹಿಳಾ ಅಧಿಕಾರಿಯೊಬ್ಬರಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದಲ್ಲಿ ರಾಜೇಶ್ ದಾಸ್ ಅವರನ್ನು ತಮಿಳುನಾಡಿನ ವಿಲ್ಲುಪುರಂ ನ್ಯಾಯಾಲಯ ಅಪರಾಧಿ ಎಂದು ಪರಿಗಣಿಸಿದ್ದು, 3 ವರ್ಷಗಳ ಜೈಲು ಶಿಕ್ಷೆ ವಿಧಿಸಿದೆ.
ಫೆ. 2021ರಲ್ಲಿ ಮಹಿಳಾ ಐಪಿಎಸ್ ಅಧಿಕಾರಿಯೊಬ್ಬರು ರಾಜೇಶ್ ದಾಸ್ ವಿರುದ್ಧ ದೂರು ದಾಖಲಿಸಿದ್ದರು.
ಅಂದಿನ ಮುಖ್ಯಮಂತ್ರಿ ಪಳನಿಸ್ವಾಮಿ ಅವರ ಭದ್ರತಾ ಕರ್ತವ್ಯಕ್ಕೆ ತೆರಳುವಾಗ ರಾಜೇಶ್ ದಾಸ್ ಅವರು ಲೈಂಗಿಕ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿದ್ದರು. ಬಳಿಕ ಅಂದಿನ ಸರ್ಕಾರ ದಾಸ್ ಅವರನ್ನು ಅಮಾನತು ಮಾಡಿತ್ತು ಮತ್ತು ಪ್ರಕರಣದ ತನಿಖೆಗೆ ಆರು ಸದಸ್ಯರ ಸಮಿತಿ ರಚನೆ ಮಾಡಿತ್ತು.
ಪ್ರಾಸಿಕ್ಯೂಷನ್ ಪೊಲೀಸ್ ಸಿಬ್ಬಂದಿ ಸೇರಿದಂತೆ 68 ಜನರ ಹೇಳಿಕೆಗಳನ್ನು ದಾಖಲಿಸಿದೆ. ರಾಜೇಶ್ ದಾಸ್ ಅವರು ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋರ್ಟ್ಗೆ ಮೇಲ್ಮನವಿ ಸಲ್ಲಿಸಬಹುದು, ತಕ್ಷಣದ ಜಾಮೀನು ಪಡೆಯಬಹುದು ಎಂದು ಪ್ರಾಸಿಕ್ಯೂಷನ್ ತಂಡದ ಸದಸ್ಯರೊಬ್ಬರು ಹೇಳಿದರು.
ಈ ಘಟನೆ 2021ರಲ್ಲಿ ಚುನಾವಣಾ ವಿಷಯವಾಗಿ ಬದಲಾಗಿತ್ತು ಮತ್ತು ಆಗಿನ ಪ್ರತಿಪಕ್ಷದ ನಾಯಕರಾಗಿದ್ದ ಎಂಕೆ ಸ್ಟಾಲಿನ್ ಅವರು ಅಧಿಕಾರಕ್ಕೆ ಬಂದರೆ, ಸರಿಯಾದ ಕಾನೂನು ಪ್ರಕ್ರಿಯೆ ನಡೆಸಿ, ಶಿಕ್ಷೆ ಕೊಡಿಸುವುದಾಗಿ ಭರವಸೆ ನೀಡಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Choreographer ರೆಮೋ ಡಿಸೋಜಾ ವಿರುದ್ಧದ ಪ್ರಕರಣ ದೆಹಲಿ ಕೋರ್ಟ್ ಗೆ ವರ್ಗಾಯಿಸಿದ ಸುಪ್ರೀಂ
Parliament; ಪ್ರಿಯಾಂಕಾ ಗಾಂಧಿ- ರಾಹುಲ್ ಜತೆ ಸೇರಿ ಬಿಜೆಪಿ ನಿದ್ದೆಗೆಡಿಸುತ್ತಾರೆ :ಪೈಲಟ್
Goa ಕರಾವಳಿಯಲ್ಲಿ ನೌಕಾಪಡೆಯ ಸಬ್ ಮರೈನ್ ಗೆ ಡಿಕ್ಕಿ ಹೊಡೆದ ಬೋಟ್-ಇಬ್ಬರು ನಾಪತ್ತೆ!
Chhattisgarh: ಭದ್ರತಾ ಪಡೆ ದಾಳಿಗೆ 10 ನಕ್ಸಲರು ಹತ… ಅಪಾರ ಪ್ರಮಾಣದ ಶಸ್ತ್ರಾಸ್ತ್ರ ವಶ
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
MUST WATCH
ಹೊಸ ಸೇರ್ಪಡೆ
Karnataka HC; ನಾಲ್ಕನೇ ಪ್ರಕರಣದಲ್ಲೂ ಪ್ರಜ್ವಲ್ ರೇವಣ್ಣ ನಿರೀಕ್ಷಣಾ ಜಾಮೀನು ಅರ್ಜಿ ವಜಾ
Sagara: ಟ್ರಾಫಿಕ್ ಜಾಮ್ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Siruguppa: ತೆಕ್ಕಲಕೋಟೆಯಲ್ಲಿ ಅಕ್ರಮ ಪಡಿತರ ಅಕ್ಕಿ ವಶ
Mangaluru Airport; ಕೆ 9 ಹೀರೋ ಜಾಕ್ ಇನ್ನಿಲ್ಲ: ಭಾವನಾತ್ಮಕ ವಿದಾಯ
Kottigehara: ಅಪಘಾತದಿಂದ ಗಾಯಗೊಂಡ ನಾಗರಹಾವಿಗೆ ಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.