Manipal ಮಾದಕ ದ್ರವ್ಯ ಸಹಿತ ಇಬ್ಬರು ಕಾನೂನು ವಿದ್ಯಾರ್ಥಿಗಳ ಬಂಧನ
Team Udayavani, Jun 16, 2023, 8:33 PM IST
ಉಡುಪಿ: ಜಿಲ್ಲಾ ಎಸ್.ಪಿ ಅಕ್ಷಯ್ ಮಚಿಂದ್ರ ಹಾಕೆ ಅವರ ಮಾರ್ಗದರ್ಶನದಲ್ಲಿ ಮಣಿಪಾಲ ಪಿಐ ದೇವರಾಜ್ ಟಿ.ವಿ ನೇತೃತ್ವದ ವಿಶೇಷ ತಂಡ ಡ್ರಗ್ಸ್ ವಿರುದ್ಧದ ಕಾರ್ಯಾಚರಣೆ ಮುಂದುವರೆಸಿದ್ದು ಜೂನ್ 16 ರಂದು ಮಣಿಪಾಲ ಠಾಣಾ ವ್ಯಾಪ್ತಿಯ ಹೆರ್ಗ ಗ್ರಾಮದ ಈಶ್ವರ ನಗರದ ಅಪಾರ್ಟ್ಮೆಂಟ್ ಒಂದರ ಬಳಿ ಸಾರ್ವಜನಿಕ ರಸ್ತೆಯಲ್ಲಿ ನಿಷೇಧಿತ ಮಾದಕ ದ್ರವ್ಯ ಮೆಥಾಂಪೆಟಮೆನ್ ನನ್ನು ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಕಾನೂನು ವಿದ್ಯಾರ್ಥಿಗಳನ್ನು ಬಂಧಿಸಿದ್ದಾರೆ.
ಬಂಧಿತರು ಕೇರಳ ಮೂಲದ ನಿಭೀಷ್ (23) ಮತ್ತು ಅಮಲ್(22) ಎನ್ನುವವರಾಗಿದ್ದು,ಇಬ್ಬರೂ ಕಾನೂನು ಕಾಲೇಜಿನ ವಿದ್ಯಾರ್ಥಿಗಳಾಗಿದ್ದಾರೆ. ಇನ್ನೊಬ್ಬ ಆರೋಪಿ ಅಪ್ಸಿನ್ ತಲೆಮರೆಸಿಕೊಂಡಿದ್ದು, ಆತನ ಪತ್ತೆಗೆ ಬಲೆ ಬೀಸಲಾಗಿದೆ.
ಬಂಧಿತ ವಿದ್ಯಾರ್ಥಿಗಳ ಬಳಿ 35 ಸಾವಿರ ರೂ. ಮೌಲ್ಯದ 7.3 ಗ್ರಾಂ ಮೆಥಾಂಪೆಟಮೆನ್ (MDMA) ಮಾದಕ ದ್ರವ್ಯ ಪತ್ತೆಯಾಗಿದ್ದು, ಜತೆಗೆ 1.25 ಲಕ್ಷ ಮೌಲ್ಯದ ಡ್ಯೂಕ್ ಬೈಕ್ ಹಾಗೂ 1 ಲಕ್ಷ ಮೌಲ್ಯದ 2 ಮೊಬೈಲ್ ಫೋನ್ಗಳನ್ನು ವಶ ಪಡಿಸಿಕೊಳ್ಳಲಾಗಿದೆ.
ಮಣಿಪಾಲದಲ್ಲಿ ಬುಧವಾರ ವಿದ್ಯಾರ್ಥಿ ಸೇರಿದಂತೆ ಮೂರು ಜನ ಗಾಂಜಾ ಪೆಡ್ಲರ್ಗಳನ್ನು ಬಂಧಿಸಿ ಸುಮಾರು 75,000 ರೂ.ಮೌಲ್ಯದ 1.5 ಕೆ.ಜಿ. ಗಾಂಜಾ ವಶಪಡಿಸಿಕೊಳ್ಳಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Kolkata: ಸೆ. 21 ರಿಂದ ತುರ್ತು ಸೇವೆ ಪುನರಾರಂಭಿಸಲು ಕಿರಿಯ ವೈದ್ಯರ ನಿರ್ಧಾರ
ತಿಮ್ಮಾಪುರ ಮಾತಿಗೆ ಯತ್ನಾಳ ಪರೋಕ್ಷ ಟಾಂಗ್;ನಾನು ಕಾನೂನಿಗೆ ಗೌರವ ನೀಡುವ ನಿಯತ್ತಿನ ನಾಯಿ
Tragedy: ಜ್ಯೂಸ್ ಕುಡಿದು ಅನಾರೋಗ್ಯಕ್ಕೆ ಒಳಗಾಗಿದ್ದ ಜನಪ್ರಿಯ ಗಾಯಕಿ ನಿಧನ… ಕೊಲೆ ಶಂಕೆ
Private ವಿಶ್ವವಿದ್ಯಾನಿಲಯ ಪ್ರತ್ಯೇಕ ಪ್ರವೇಶ ಪರೀಕ್ಷೆ ಇಲ್ಲ
Belagavi: ಕೊಳಲು ನುಡಿಸುತ್ತಿರುವಾಗಲೇ ಮಿದುಳಿನ ಯಶಸ್ವಿ ಶಸ್ತ್ರಚಿಕಿತ್ಸೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.