‘ದೇವರ ಆಟ ಬಲ್ಲವರಾರು…’; 30 ದಿನಗಳಲ್ಲಿ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಪ್ಲ್ರಾನ್


Team Udayavani, Jun 17, 2023, 2:41 PM IST

devara aata ballavararu movie

ನಟಿ ಸಿಂಧು ಲೋಕನಾಥ್‌ ಒಂದು ಗ್ಯಾಪ್‌ನ ನಂತರ ಮತ್ತೆ ಬಂದಿದ್ದಾರೆ. “ದೇವರ ಆಟ ಬಲ್ಲವರಾರು’ ಎಂಬ ಸಿನಿಮಾದಲ್ಲಿ ನಾಯಕಿಯಾಗಿ ನಟಿಸುತ್ತಿದ್ದಾರೆ. ಈ ಹಿಂದೆ ಸಂಚಾರಿ ವಿಜಯ್‌ ಅವರ ಫಿರಂಗಿ ಪುರ ಚಿತ್ರವನ್ನು ಕೈಗೆತ್ತಿಕೊಂಡಿದ್ದ ಜನಾರ್ದನ್‌ ಪಿ ಜಾನಿ ಈ ಚಿತ್ರವನ್ನು ನಿರ್ದೇಶನ ಮಾಡುತ್ತಿದ್ದಾರೆ. ಮೂವತ್ತು ದಿನಗಳಲ್ಲಿ ಚಿತ್ರದ ಎಲ್ಲಾ ಪ್ರಕ್ರಿಯೆ ಮುಗಿಸಿ ಬಿಡುಗಡೆ ಮಾಡಿ ಗಿನ್ನೆಸ್‌ ರೆಕಾರ್ಡ್‌ ಮಾಡಲು ಹೊರಟಿದ್ದಾರೆ.

ಚಿತ್ರದ ಬಗ್ಗೆ ಮಾತನಾಡುವ ಜನಾರ್ದನ್‌, “ದೇವರ ಆಟ ಬಲ್ಲವರಾರು 1975 ರ ಕಾಲಘಟ್ಟದಲ್ಲಿ ನಡೆಯುವ ಕಥೆ. ಆ್ಯಕ್ಷನ್‌ ಥ್ರಿಲ್ಲರ್‌ ಕಥಾಹಂದರ ಹೊಂದಿರುವ ಈ ಚಿತ್ರದ ಎಲ್ಲಾ ಕೆಲಸಗಳನ್ನು ಒಂದು ತಿಂಗಳೊಳಗೆ ಮುಗಿಸಿ, ಸರಿಯಾಗಿ ಒಂದು ತಿಂಗಳಿಗೆ ಚಿತ್ರವನ್ನು ತೆರೆಗೆ ತರಬೇಕು. ನಮ್ಮ ಚಿತ್ರ ಗಿನ್ನೆಸ್‌ ರೆಕಾರ್ಡ್‌ ಆಗಬೇಕು ಎಂಬುದು ನನ್ನ ಅಸೆ. ಈ ಕುರಿತು ನಾನು, ನನ್ನ ತಂಡ ಸುಮಾರು ಆರು ತಿಂಗಳಿನಿಂದ ಶ್ರಮ ಪಡುತ್ತಿದ್ದೇವೆ. ಇಡೀ ಚಿತ್ರದ ಚಿತ್ರೀಕರಣ ಮಡಿಕೇರಿಯಲ್ಲಿ ನಡೆಯಲಿದೆ. ಅಲ್ಲಿನ ವಿಶಾಲವಾದ ಜಾಗದಲ್ಲಿ ಸೆಟ್‌ ಗಳನ್ನು ನಿರ್ಮಿಸಿ ಅದೇ ಸ್ಥಳದಲ್ಲಿ ಚಿತ್ರೀಕರಣ ಮಾಡಲಿದ್ದೇವೆ. ದಿನ ಸುಮಾರು 160 ಕ್ಕೂ ಹೆಚ್ಚು ಜನ ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ಜೂನ್‌ 16 ರಿಂದ ಐದು ದಿನಗಳ ಕಾಲ ಚಿತ್ರೀಕರಣ ನಡೆಯುವ ಸ್ಥಳದಲ್ಲಿಯೇ ತಾಲೀಮು ನಡೆಸಲಿದ್ದೇವೆ. ಆನಂತರ ಚಿತ್ರೀಕರಣ ಪ್ರಾರಂಭಿಸಲಿದ್ದೇವೆ. ಹದಿನಾರು ದಿನದೊಳಗೆ ಚಿತ್ರೀಕರಣ ಮುಕ್ತಾಯವಾಗಲಿದೆ. ಚಿತ್ರೀಕರಣವಾದ ನಂತರ ಎಲ್ಲಾ ಕಾರ್ಯಗಳನ್ನು ಪೂರೈಸಿ ಜುಲೈ 20ರಂದು ಚಿತ್ರವನ್ನು ತೆರೆಗೆ ತರುತ್ತಿದ್ದೇವೆ. ನಮ್ಮ ಕಾರ್ಯವೈಖರಿ ವೀಕ್ಷಿಸಲು ಆರು ಜನ ತೀರ್ಪುಗಾರರು ಆ ಸ್ಥಳದಲ್ಲೇ ಇರುತ್ತಾರೆ’ ಎಂದು ವಿವರ ನೀಡಿದರು.

ಚಿತ್ರದಲ್ಲಿ ಅರ್ಜುನ್‌ ರಮೇಶ್‌, ಸಿಂಧು ಲೋಕನಾಥ್‌, ವರ್ಷ ವಿಶ್ವನಾಥ್‌, ಸಂಪತ್‌ ರಾಮ್, ಅರ್ಜುನ್‌, ಮೇದಿನಿ ಕೇಳಮನೆ ಮುಂತಾದವರು ಈ ಚಿತ್ರದಲ್ಲಿ ಅಭಿನಯಿಸುತ್ತಿದ್ದಾರೆ.

“ನಾನು ಈ ಹಿಂದೆ ನಾಲ್ಕು ಚಿತ್ರಗಳಲ್ಲಿ ಅಭಿನಯಿಸಿದ್ದೇನೆ. ಆದರೆ ಈ ಚಿತ್ರದ ನಿರ್ದೇಶಕರ ಕಾರ್ಯವೈಖರಿ ಕಂಡು ಆಶ್ಚರ್ಯವಾಯಿತು. ಈ ಚಿತ್ರಕ್ಕಾಗಿ ಎರಡು ತಿಂಗಳಲ್ಲಿ ಹದಿನಾಲ್ಕು ಕೆಜಿ ತೂಕ ಇಳಿಸಿದ್ದೇನೆ. ನೋಡಿದವರು ಕಂಡು ಹಿಡಿಯದಷ್ಟು ಸಣ್ಣ ಆಗಿದ್ದೇನೆ. ನಿರ್ದೇಶಕರು ಒಳ್ಳೆಯ ಕಥೆ ಆಯ್ಕೆ ಮಾಡಿಕೊಂಡಿದ್ದಾರೆ. ಸೂರಿ ನನ್ನ ಪಾತ್ರದ ಹೆಸರು’ ಎನ್ನುವುದು ನಾಯಕ ಅರ್ಜುನ್‌ ರಮೇಶ್‌ ಮಾತು.

“ಮೂರು ವರ್ಷಗಳ ನಂತರ ನಾನು ನಟಿಸುತ್ತಿರುವ ಚಿತ್ರವಿದು. ರಚನ ನನ್ನ ಪಾತ್ರದ ಹೆಸರು. ನಾನು ಈವರೆಗೂ ಮಾಡಿರದ ಪಾತ್ರ ಈ ಚಿತ್ರದಲ್ಲಿ ಮಾಡುತ್ತಿದ್ದೇನೆ’ ಎಂದರು ನಾಯಕಿ ಸಿಂಧು ಲೋಕನಾಥ್‌.

ಹನುಮಂತರಾಜು, ಲತಾ ರಾಗ ಹಾಗೂ ಅನಿಲ್‌ ಜೈನ್‌ ಈ ಚಿತ್ರವನ್ನು ನಿರ್ಮಿಸುತ್ತಿದ್ದಾರೆ. ದೇವರ ಆಟ ಬಲ್ಲವರಾರು ಚಿತ್ರಕ್ಕೆ ಪ್ರತಿಯೊಬ್ಬ ಮನುಷ್ಯನ ಒಳಗೆ ಒಂದು ಕ್ರೂರ ಮೃಗ ಇದ್ದೆ ಇರುತ್ತದೆ ಎಂಬ ಅಡಿಬರಹವಿದೆ

ಟಾಪ್ ನ್ಯೂಸ್

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Election-Bond

Election Bond:ನಿರ್ಮಲಾ, ನಡ್ಡಾ, ಬಿವೈವಿ, ನಳಿನ್‌ ಸೇರಿ ಹಲವರ ವಿರುದ್ಧದ ಎಫ್‌ಐಆರ್‌ಗೆ ತಡೆ

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

arrested

Belgavi: ಹೊಟೇಲ್‌ನಲ್ಲಿ ಯುವಕನಿಗೆ ಚಾಕು ಇ*ರಿದ ಬಿಎಸ್‌ಎಫ್ ಯೋಧ ಅರೆಸ್ಟ್

DK SHI NEW

Kumaraswamy ರಾಜಕೀಯ ಮಾಡುವುದಕ್ಕಿಂತ 1 ಲಕ್ಷ ಉದ್ಯೋಗ ಸೃಷ್ಟಿಗೆ ಒತ್ತು ನೀಡಲಿ:ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ddd

Heartfelt gesture; ಪಾಕಿಸ್ಥಾನ ಮೂಲದ ಅಭಿಮಾನಿಗೆ ಶೂ ಗಿಫ್ಟ್ ನೀಡಿದ ಭಾರತದ ಖ್ಯಾತ ಗಾಯಕ

janaka kannada movie

Sandalwood: ತಂದೆ-ಮಗನ ಕಥಾಹಂದರ ʼಜನಕʼ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Renukaswamy Case: ಜಾಮೀನಿಗೆ ಕಾದು ಕುಳಿತ ʼದಾಸʼನಿಗೆ ಮತ್ತೆ ನಿರಾಸೆ; ವಿಚಾರಣೆ ಮುಂದೂಡಿಕೆ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

Toxic Movie: ಯಶ್‌ ʼಟಾಕ್ಸಿಕ್‌ʼ ಅಖಾಡಕ್ಕೆ ಖಡಕ್ ಬ್ರಿಟೀಷ್‌ ನಟ‌ ಎಂಟ್ರಿ

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರ್‌ 45 ಬಗ್ಗೆ ಶಿವಣ್ಣ ಮಾತು

45 Kannada movie: ನಾವು ಮೂವರೂ ಸಮಾನರು…; ಮಲ್ಟಿಸ್ಟಾರರ್‌ 45 ಬಗ್ಗೆ ಶಿವಣ್ಣ ಮಾತು

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

modi (4)

PM Modi ಯಿಂದ ನೆತನ್ಯಾಹುಗೆ ಕರೆ:ನಮ್ಮ ಜಗತ್ತಿನಲ್ಲಿ ಭಯೋತ್ಪಾದನೆಗೆ ಸ್ಥಾನವಿಲ್ಲ..

arre

Kumble: ಮಾವನ ಕೊಲೆಗೆ ಯತ್ನ: ಆರೋಪಿ ಬಂಧನ

1-asas

Belagavi; ಮಹಾನಗರ ಪಾಲಿಕೆ ಸೂಪರ್ ಸೀಡ್ ಮಾಡುವಂತೆ ಬೃಹತ್ ಪ್ರತಿಭಟನೆ

5

Malpe: ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

1-qwewqe

Varanasi; ಇದೇನಾ ‘ಸ್ವಚ್ಛ ಭಾರತ’?: ಫೋಟೋ ಮೂಲಕ ಪ್ರಧಾನಿಗೆ ಟಾಂಗ್ ನೀಡಿದ ಅಖಿಲೇಶ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.