ಅಕ್ಕಿಗಾಗಿ ಕೇಂದ್ರದ ವಿರುದ್ಧ ಪ್ರತಿಭಟನೆ ಹಾಸ್ಯಾಸ್ಪದ: ಅಶ್ವತ್ಥನಾರಾಯಣ
Team Udayavani, Jun 18, 2023, 7:18 AM IST
ಮಂಡ್ಯ: ಕೇಂದ್ರದ ಅಕ್ಕಿಗಾಗಿ ಆಗ್ರಹಿಸಿ ಕಾಂಗ್ರೆಸ್ಸಿಗರು ಜೂ.20ರಂದು ಪ್ರತಿಭಟನೆಗೆ ಕರೆ ನೀಡಿರುವುದು ಹಾಸ್ಯಾಸ್ಪದ ಎಂದು ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಅಶ್ವತ್ಥ ನಾರಾಯಣ ಹೇಳಿದರು.
ನಗರದಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವುದು ಕಾಂಗ್ರೆಸ್ ಸರಕಾರ ಅಲ್ಲ. ಇದೊಂದು ದೋಖಾ ಸರಕಾರ. ಜನತೆಗೆ 5 ಗ್ಯಾರಂಟಿ ನೀಡುತ್ತೇವೆ ಎಂದು ಹೇಳಿಕೊಂಡು ಅಧಿ ಕಾರಕ್ಕೆ ಬಂದ ಇವರು, ಇವತ್ತು ವಿದ್ಯುತ್ ಬಿಲ್ ಜಾಸ್ತಿಯಾಗಿದೆ. ರಾಜ್ಯದಲ್ಲಿರುವ ಸಣ್ಣ ಕೈಗಾರಿಕೆಗಳು ಬೇರೆ ರಾಜ್ಯಕ್ಕೆ ವಲಸೆ ಹೋಗುವಂತೆ ಮಾಡಿದ್ದಾರೆ ಎಂದು ಕಿಡಿಕಾರಿದರು.
ಸಾರಿಗೆ ಬಸ್‌ನಲ್ಲಿ ಮಹಿಳೆಯರಿಗೆ ಪ್ರಯಾಣ ಉಚಿತವಾಗಿದೆ. ಪುರುಷ ಪ್ರಯಾಣಿಕರಿಗೆ ಬಸ್ ಸಿಗದೆ ಇರುವುದು ಖಚಿತವಾಗಿದೆ. ವಿದ್ಯುತ್ ಬಿಲ್, ಗೃಹಲಕ್ಷ್ಮಿ ಯೋಜನೆ, ನಿರುದ್ಯೋಗ ಭತ್ತೆ ನೀಡುವ ಗೊಂದಲ ನಿವಾರಣೆ ಮಾಡದೆ ಕೇಂದ್ರ ಸರಕಾರ ಅಕ್ಕಿ ಕೊಡುತ್ತಿಲ್ಲ ಎಂದು ಕಥೆ ಹೇಳಲು ಹೋರಾಟ ಮಾಡಲು ಕರೆ ಕೊಟ್ಟಿರುವುದು ಹಾಸ್ಯಾಸ್ಪದ ಎಂದರು.
ಸರಕಾರಕ್ಕೆ ಅಕ್ಕಿ ಬೇಕಿದ್ದರೆ ನಮ್ಮ ರಾಜ್ಯದಲ್ಲೇ ಭತ್ತದ ಕಣಜವಾಗಿರುವ ಗಂಗಾವತಿಯಲ್ಲಿದೆ. ಸರಕಾರದ ದರಕ್ಕೆ ಇಲ್ಲೇ ಭತ್ತ, ಅಕ್ಕಿ ಸಿಗುತ್ತದೆ. ರೈಸ್‌ಮಿಲ್ ಮಾಲಕರ ಬಳಿ ಮಾತನಾಡಿ ಅಕ್ಕಿ ತರಿಸಿಕೊಳ್ಳಬಹುದು. ಮಂಡ್ಯದ ರೈಸ್‌ಮಿಲ್ ಮಾಲಕರನ್ನು ಭೇಟಿ ಮಾಡಿ ಪಡೆಯಬಹುದು ಎಂದು ಸಲಹೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Mysuru: ‘ಕೋಲು ಮಂಡೆ ಜಂಗಮ’ ಹಾಡು ನೃತ್ಯ ಸಂಯೋಜಕ ಕಂಸಾಳೆ ಕಲಾವಿದ ಕುಮಾರಸ್ವಾಮಿ ನಿಧನ
Bengaluru: ಹಿಂದೂ ದೇವತೆಗಳ ಬಗ್ಗೆ ಅಶ್ಲೀಲ ಪದ ಬಳಕೆ: ಕಿಡಿಗೇಡಿ ವಿರುದ್ಧ ದೂರು
Gift: ಶಿಗ್ಗಾವಿಯಲ್ಲಿ ನಾಮಪತ್ರ ವಾಪಸ್ ಪಡೆದ ಖಾದ್ರಿಗೆ ಹೆಸ್ಕಾಂ ಅಧ್ಯಕ್ಷಗಿರಿ ಹುದ್ದೆ!
Mysuru; ಚಾಮುಂಡೇಶ್ವರಿ ದೇವಿಗೆ ಚಿನ್ನದ ರಥ: ಪ್ರಸ್ತಾವನೆ ಸಲ್ಲಿಸುವಂತೆ ಸಿದ್ದರಾಮಯ್ಯ ಸೂಚನೆ
ಒಕ್ಕಲಿಗ ಸಂಘದ ಕಾರ್ಯಕ್ರಮದಲ್ಲಿ ಕೆ.ಜೆ.ಜಾರ್ಜ್ ಭಾಷಣಕ್ಕೆ ಆಕ್ಷೇಪ: ಕ್ಷಮೆಯಾಚಿಸಿದ ಸಚಿವರು
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.