ಪಾಕ್ಗೆ ಮರಳಲು ನವಾಜ್ ಶರೀಫ್ಗೆ ಕರೆ
-ಮಾಜಿ ಪ್ರಧಾನಿಗೆ ಹಾಲಿ ಪ್ರಧಾನಿ ಶೆಹಬಾಜ್ ಶರೀಫ್ ಮನವಿ, ಇಮ್ರಾನ್ಗೆ ಸೆಡ್ಡು?
Team Udayavani, Jun 18, 2023, 7:23 AM IST
ಇಸ್ಲಾಮಾಬಾದ್: ಆರ್ಥಿಕ ಸಂಕಷ್ಟ, ಆಹಾರ ಬಿಕ್ಕಟ್ಟಿನ ನಡುವೆಯೂ ಪಾಕಿಸ್ತಾನದಲ್ಲಿ ರಾಜಕೀಯ ಮೇಲಾಟ ದಿನಕ್ಕೊಂದು ತಿರುವು ಪಡೆಯುತ್ತಿದೆ. ಮುಂದಿನ ಚುನಾವಣೆಯಲ್ಲಿ ಮಾಜಿ ಪ್ರಧಾನಿ ಇಮ್ರಾನ್ ಖಾನ್ರನ್ನು ಮಣಿಸಲು ಪಾಕ್ ರಾಜಕಾರಣದ ಹಳೆಯ ಹುಲಿ ನವಾಜ್ ಶರೀಫ್ರನ್ನೇ ಕಣಕ್ಕಿಳಿಸಲು ಆಡಳಿತಾರೂಢ ಪಕ್ಷ ಪಿಎಂಎಲ್-ಎನ್ ನೇತೃತ್ವದ ಸರ್ಕಾರ ಸಜ್ಜುಗೊಂಡಿದೆ.
ಹೌದು, ಪಾಕಿಸ್ತಾನ ಪಿಎಂ ಶೆಹಬಾಜ್ ಶರೀಫ್ ಅವರು ಪಾಕಿಸ್ತಾನ್ ಮುಸ್ಲಿಂ ಲೀಗ್ -ನವಾಜ್ (ಪಿಎಂಎಲ್-ಎನ್) ಪಕ್ಷದ ಸಾಮಾನ್ಯ ಮಂಡಳಿ ಸಭೆ ನಡೆಸಿದ್ದಾರೆ. ಈ ವೇಳೆ ಮಾತನಾಡಿ, ಪಕ್ಷದ ಮುಂದಾಳತ್ವ ವಹಿಸಲು ನನ್ನ ಹಿರಿಯ ಸಹೋದರ ನವಾಜ್ ಶರೀಫ್ ದೇಶಕ್ಕೆ ಮರಳುವುದನ್ನೇ ಕಾಯುತ್ತಿದ್ದೇನೆ ಎಂದಿದ್ದಾರೆ.
2019ರಿಂದಲೂ ಲಂಡನ್ನಲ್ಲಿರುವ ಮಾಜಿ ಪ್ರಧಾನಿ ನವಾಜ್, ಪನಾಮಾ ಪೇಪರ್ಸ್ ಹಗರಣದ ಹಿನ್ನೆಲೆಯಲ್ಲಿ ಪಾಕ್ಗೆ ಮರಳಿದರೂ ಯಾವುದೇ ಪಕ್ಷದ ನೇತೃತ್ವ ವಹಿಸುವಂತಿಲ್ಲ. ಆದರೆ ಇದನ್ನು ಮರುಪರಿಶೀಲಿಸಲು ಶೆಹಬಾಜ್ ಶರೀಫ್ ಅನುಮತಿ ನೀಡಿದ್ದಾರೆ. ಈ ಮೂಲಕ ಸುಪ್ರೀಂಕೋರ್ಟ್ನಲ್ಲಿ ತಮ್ಮ ವಿರುದ್ಧದ ತೀರ್ಪು ಪ್ರಶ್ನಿಸಲು ನವಾಜ್ಗೆ 60 ದಿನಗಳ ಕಾಲವಕಾಶ ಸಿಕ್ಕಿದೆ.
ಪಾಕ್ಗೆ ಚೀನಾ ನೆರವು
ಇನ್ನು ರಾಜಕೀಯ ಗೊಂದಲಗಳೆಲ್ಲದರ ನಡುವೆ ಪಾಕಿಸ್ತಾನದ ವಿದೇಶಿ ಮೀಸಲು ನಿಧಿ ಕುಸಿಯುತ್ತಿದ್ದು, ಈ ವಾರ ಮೀಸಲು ನಿಧಿ 3.9 ಶತಕೋಟಿ ಡಾಲರ್ಗೆ ಇಳಿಕೆಯಾಗಿತ್ತು. ಈ ಬೆನ್ನಲ್ಲೇ, ಚೀನಾ ಪಾಕಿಸ್ತಾನಕ್ಕೆ 1 ಶತಕೋಟಿ ಡಾಲರ್ ನೀಡಿದೆ ಎಂಬುದಾಗಿ ಸರ್ಕಾರಿ ಅಧಿಕಾರಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pakistan: ಪಾಕ್ನಲ್ಲಿ ಹಿಂಸಾಚಾರ; ಒಟ್ಟು 37 ಮಂದಿ ಸಾವು
Adani; ಆಸೀಸ್ ಕಲ್ಲಿದ್ದಲು ಗಣಿಯಲ್ಲಿ ಮಾನವ ಹಕ್ಕುಗಳ ಉಲ್ಲಂಘನೆ ಆರೋಪ
London: ಶಂಕಾಸ್ಪದ ಲಗೇಜ್ ಪತ್ತೆ: ಲಂಡನ್ ಏರ್ಪೋರ್ಟ್ ಖಾಲಿ ಮಾಡಿಸಿ ತನಿಖೆ!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
Canada-India Row: ನಿಜ್ಜರ್ ಹತ್ಯೆ ಹಿಂದೆ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Gautam Adani;ಯುಎಸ್ ದೋಷಾರೋಪಣೆಯ ತನಿಖೆ ಕೋರಿ ಸುಪ್ರೀಂ ನಲ್ಲಿ ಹೊಸ ಮನವಿ
Siddakatte Kodange Kambala: ಈ ಸೀಸನ್ ನ ಮೊದಲ ಕಂಬಳದ ಫಲಿತಾಂಶ ಇಲ್ಲಿದೆ
Karkala: ನಿಟ್ಟೆಯಲ್ಲಿ ಬಾವಿಗೆ ಬಿದ್ದ ಒಂದು ವರ್ಷದ ಮರಿ ಚಿರತೆ ರಕ್ಷಣೆ
Maharashtra polls; ದೇಶ ಒಡೆಯುವ ಮಾತನಾಡುವವರಿಗೆ ತಕ್ಕ ಪಾಠ: ಕಂಗನಾ
IPL 2025 Auction: ಮೊದಲ ಎರಡು ಸುತ್ತಿನಲ್ಲಿ ಮಾರಾಟವಾದ ಆಟಗಾರರ ಸಂಪೂರ್ಣ ಪಟ್ಟಿ..
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.