ಮೂರು ತಿಂಗಳೊಳಗೆ `108′ ಆರೋಗ್ಯ ಸೇವೆಗೆ ಹೊಸ ರೂಪ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್
Team Udayavani, Jun 18, 2023, 7:11 AM IST
ಬೆಂಗಳೂರು: ಮುಂದಿನ ಮೂರು ತಿಂಗಳೊಳಗಾಗಿ 108 ಆರೋಗ್ಯ ಸೇವೆಯನ್ನು ರಾಜ್ಯಾದ್ಯಂತ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಅಗತ್ಯವಿರುವ ಕ್ರಮಕೈಗೊಳ್ಳುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅಧಿಕಾರಿಗಳಿಗೆ ಸೂಚಿಸಿದರು.
ಶನಿವಾರ ಮಾಗಡಿ ಆರೋಗ್ಯಸೌಧದಲ್ಲಿ ನಡೆದ 108 ಆರೋಗ್ಯ ಸೇವೆಯ ಕುರಿತು ಆಯೋಜಿಸಿದ್ದ ಸಭೆಯಲ್ಲಿ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಮಾತನಾಡಿದರು. 90 ದಿನಗಳೊಳಗೆ ಆ್ಯಂಬುಲೆನ್ಸ್ ಸೇವೆಯಲ್ಲಿ ಉತ್ತಮ ಫಲಿತಾಂಶ ಬೇಕು. ಸಾರ್ವಜನಿಕರು ತುರ್ತು ಪರಿಸ್ಥಿತಿ ಸಂದರ್ಭದಲ್ಲಿ ವಾಹನ ಸೇವೆ ಪಡೆಯಲು ಪರಿತಪಿಸಿದರೆ ಸಹಿಸಲು ಸಾಧ್ಯವಿಲ್ಲ ಎಂದು ಎಚ್ಚರಿಕೆ ನೀಡಿದರು.
108 ಆರೋಗ್ಯ ಸೇವೆಯ ಕಾಲ್ ಸೆಂಟರ್ನ ತಂತ್ರಜ್ಞಾನ ಮಾಹಿತಿ ಪಡೆದುಕೊಂಡು, ತಂತ್ರಜ್ಞಾನದಲ್ಲಿ ಅಗತ್ಯ ಬದಲಾವಣೆ ತರಲು ಸೂಚಿಸಿದರು. ಸೇವೆ ಪಡೆಯಲು ಸಾರ್ವಜನಿಕರ ಕರೆಗಳಿಗೆ ಸೂಕ್ತ ಸ್ಪಂದನೆ ಸಿಗುತ್ತಿಲ್ಲ. ಇದಕ್ಕೆ ಕಾರಣವಾಗುವ ಅಂಶ ಹಾಗೂ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
2017ರ ಬಳಿಕ 108 ಆರೋಗ್ಯ ವಾಹಿನಿ ಹೊಸ ಟೆಂಡರ್ ಕರೆದಿಲ್ಲ. ಹಿಂದೆ ಗುತ್ತಿಗೆ ಪಡೆದವರು ಮನಸೋ ಇಚ್ಛೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಸಚಿವರು ಅಸಮಾಧಾನ ವ್ಯಕ್ತಪಡಿಸಿದರು. ಸಮರ್ಪಕವಾಗಿ 108 ಆರೋಗ್ಯ ವಾಹಿನಿ ಸೇವೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹೆಚ್ಚು ಗಮನ ವಹಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crocodile: ನಿಟ್ಟೂರಲ್ಲಿ ಕಾಣಿಸಿಕೊಂಡ ಮೊಸಳೆ ಸೆರೆ… ನಿಟ್ಟುಸಿರು ಬಿಟ್ಟ ಗ್ರಾಮಸ್ಥರು
Mudigere: ಕಾಫಿ ಬೆಳೆಗಾರರ ಸಂಘಟನೆಗಳ ಪದಾಧಿಕಾರಿಗಳ ಜೊತೆ ಪೊಲೀಸ್ ಅಧಿಕಾರಿಗಳ ಸಭೆ
Waqf Protest: 1974ರಿಂದ ಇದುವರೆಗೆ ಬಿಜೆಪಿ ಯಾಕೆ ಹೋರಾಟ ಮಾಡಿಲ್ಲ: ಎಂ.ಬಿ.ಪಾಟೀಲ್
AI world: ಕ್ರಿಮಿನಲ್ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
Ramanagara: ಹೃದಯಾಘಾತದಿಂದ ಕಾವೇರಿ ನೀರಾವರಿ ನಿಗಮದ ಮಾಜಿ ಎಂಜಿನಿಯರ್ ನಿಧನ
MUST WATCH
ಹೊಸ ಸೇರ್ಪಡೆ
ಅಂಬಾಗಿಲು: ಚಾಲಕನ ನಿಯಂತ್ರಣ ತಪ್ಪಿ ಸಿಮೆಂಟ್ ರೆಡಿಮಿಕ್ಸ್ ವಾಹನ ಪಲ್ಟಿ… ತಪ್ಪಿದ ಅವಘಡ
BGT 24: ಕೆಎಲ್ ರಾಹುಲ್ ಔಟ್ ಅಥವಾ ನಾಟೌಟ್: ಏನಿದು ವಿವಾದ? ಇಲ್ಲಿದೆ ಅಂಪೈರ್ ಉತ್ತರ
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Chikkamagaluru: ನಾವು ನಡೆದಿದ್ದೇ ದಾರಿ, ನಡಿ ಮಗಾ….ಮರಿ ಆನೆಗೆ ನಡೆಯಲು ಕಲಿಸಿದ ತಾಯಿ ಆನೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.