Hampi-ಆನೆಗೊಂದಿ:ಹೋಂಸ್ಟೇ ರಕ್ಷಣೆಗೆ ಸಚಿವ ಎಚ್.ಕೆ.ಪಾಟೀಲ್‌ಗೆ ಶಾಸಕ ರೆಡ್ಡಿ ಮನವಿ
Team Udayavani, Jun 17, 2023, 10:48 PM IST
ಗಂಗಾವತಿ:ಹಂಪಿ ಆನೆಗೊಂದಿ ಭಾಗಕ್ಕೆ ಆಗಮಿಸುವ ದೇಶ ವಿದೇಶದ ಪ್ರವಾಸಿಗರಿಗೆ ಊಟ ವಸತಿ ಕಲ್ಪಿಸಲು ಸ್ಥಳೀಯರು ಸ್ವಂತ ಹೊಲದಲ್ಲಿ ರೈತರು ನಿರ್ಮಿಸಿಕೊಂಡಿರುವ ಹೋಂಸ್ಟೇಗಳನ್ನು ಸಕ್ರಮಗೊಳಿಸಲು ಹಂಪಿ ಅಭಿವೃದ್ಧಿ ಪ್ರಾಧಿಕಾರದ2021 ರ ಮಾಸ್ಟರ್ ಪ್ಲಾನ್(ಮಹಾಯೋಜನೆ)ಯ ಗೆಜೆಟ್‌ನ್ನು ಶೀಘ್ರ ಪ್ರಕಟಿಸಿ ಪ್ರಸ್ತುತ ಇರುವ ಹೋಂಸ್ಟೇಗಳನ್ನು ನಿಗದಿ ಶುಲ್ಕ ಭರಿಸಿಕೊಂಡು ಕಾನೂನು ಬದ್ಧಗೊಳಿಸಲು ಕ್ರಮ ಕೈಗೊಳ್ಳಲು ಅಧಿಕಾರಿಗಳ ಸಭೆ ಕರೆಯುವಂತೆ ಕಾನೂನು ಮತ್ತು ಸಂಸದೀಯ ಸಚಿವ ಎಚ್.ಕೆ.ಪಾಟೀಲ್ ಅವರನ್ನು ಶಾಸಕ ಗಾಲಿ ಜನಾರ್ದನ ರೆಡ್ಡಿ ಬೆಂಗಳೂರಿನಲ್ಲಿ ಶನಿವಾರ ಭೇಟಿಯಾಗಿ ಮನವಿ ಮಾಡಿದರು.
ಈ ಕುರಿತು ಸಾಮಾಜಿಕ ಜಾಲತಾಣಗಳಲ್ಲಿ ಪೋಟೋ ಹಾಕಿ ಮಾಹಿತಿಯನ್ನು ಶಾಸಕ ಗಾಲಿ ಜನಾರ್ದನರೆಡ್ಡಿ ಹಂಚಿಕೊಂಡಿದ್ದಾರೆ. ಹಂಪಿ ಅಭಿವೃದ್ಧಿ ಪ್ರಾಧಿಕಾರದ ವ್ಯಾಪ್ತಿಗೆ ಒಳಪಡುವ ಹಂಪಿ ಮತ್ತು ಆನೆಗೊಂದಿ ಭಾಗದ ಹೋಂ ಸ್ಟೇ ಗಳಿಂದ ಸಾವಿರಾರು ಕುಟುಂಬಗಳು ನೇರ ಮತ್ತು ಪರೋಕ್ಷ ಉದ್ಯೋಗ ಪಡೆದುಕೊಂಡಿದ್ದು ವಿಶೇಷವಾಗಿ ಆನೆಗೊಂದಿ ಸುತ್ತಮುತ್ತಲಿನ ಹಳ್ಳಿಗಳಲ್ಲಿ ಅವರದ್ದೇ ಸ್ವಂತ ಭೂಮಿಯಲ್ಲಿ ಹೋಂಸ್ಟೇ ಗಳನ್ನು ಶಾಶ್ವತ ಅಲ್ಲದ ರೀತಿಯಲ್ಲಿ ತಾತ್ಕಾಲಿಕವಾಗಿ ನೈಸರ್ಗಿಕ ವ್ಯವಸ್ಥೆಯನ್ನು ಮಾಡಿಕೊಂಡು ದೇಶವಿದೇಶಗಳಿಂದ ಬರುವ ಪ್ರವಾಸಿಗರಿಗೆ ಊಟ ವಸತಿ ಕೊಟ್ಟು ಪ್ರವಾಸಿಗರಿಗೆ ತುಂಬಾ ಸ್ನೇಹಪೂರ್ವಕವಾಗಿ ಇದು ನಮ್ಮ ದೇಶ, ನಮ್ಮ ಮನೆ ಎನ್ನುವ ರೀತಿಯಲ್ಲಿ ಆತಿಥ್ಯ ವನ್ನು ನಡೆಸುತ್ತಿರುವ ಹೋಂಸ್ಟೇ ಗಳ ಮಾಲಕರು ಮತ್ತು ಕಾರ್ಮಿಕರು ಅತಂತ್ರ ಪರಿಸ್ಥಿತಿಯಲ್ಲಿರುವುದು ನನ್ನ ಗಮನಕ್ಕೆ ಬಂದಿದೆ. ಕಾನೂನು ಸಂಸದೀಯ ಹಾಗೂ ಪ್ರವಾಸೋದ್ಯಮ ಸಚಿವರಾದ ಎಚ್ ಕೆ ಪಾಟೀಲ್ ಅವರನ್ನು ಭೇಟಿ ಮಾಡಿ ಹೋಂಸ್ಟೇ ಮಾಲಕರಿಗೆ ಯಾವುದೇ ತೊಂದರೆ ಆಗದಂತೆ ಮನವಿ ಮಾಡಲಾಯಿತು ಎಂದು ತಿಳಿಸಿದ್ದಾರೆ.
ಪ್ರವಾಸೋದ್ಯಮದ ಮೇಲೆ ಜೀವನ ನಡೆಸುತ್ತಿರುವ ಆನೆಗೊಂದಿ-ಹಂಪಿ ಭಾಗದ ಜನರಿಗೆ ಮುಂಬರುವ ದಿನಗಳಲ್ಲಿ ಯಾವ ರೀತಿ ಸಹಾಯವನ್ನು ಮಾಡಬೇಕೆನ್ನುವ ನನ್ನ ಮನವಿಗೆ ಸ್ಪಂದಿಸಿ ಕೂಡಲೇ ಅಧಿಕಾರಿಗಳ ಸಭೆ ದಿನಾಂಕವನ್ನು ನಿಗದಿ ಮಾಡಲು ಸಚಿವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ ಎಂದು ರೆಡ್ಡಿ ಅವರು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕೊಪ್ಪಳ: ಫ್ಲೈಟ್‌ನಲ್ಲಿ ಲಿಂಗದಹಳ್ಳಿ ಸರ್ಕಾರಿ ಶಾಲಾ ಮಕ್ಕಳ ಪ್ರವಾಸ!
Waqf Protest: ಕೊಪ್ಪಳ-ಗದಗದಲ್ಲಿ ಬಿಜೆಪಿ ಪ್ರತಿಭಟನೆ
Tawargera: ಚಲಿಸುತ್ತಿದ್ದ ಬಸ್ಸಿಗೆ ಡಿಕ್ಕಿ ಹೊಡೆದು ನಂತರ ಕುರಿಗಳ ಮೇಲೆ ಹರಿದ ಕ್ಯಾಂಟರ್
Gangavathi: ಪತ್ನಿ ವರದಕ್ಷಿಣೆ ತಂದಿಲ್ಲ ಎಂದು ಮನೆಗೆ ಬೀಗ ಹಾಕಿ ಪತಿ ಹಾಗೂ ಮನೆಯವರು ಪರಾರಿ
Koppala ಗವಿಮಠ ಜಾತ್ರೆಗೆ ನಟ ಅಮಿತಾಬ್ ಬಚ್ಚನ್?
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
Kundgol: ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದು ಬೈಕ್; ಸವಾರರು ಕಣ್ಮರೆ
Smart meters: ನೀರು ಸಂರಕ್ಷಿಸುವ ವಿಚಾರದಲ್ಲಿ ಕ್ರಾಂತಿ ಮಾಡಿದ ಸ್ಮಾರ್ಟ್ ವಾಟರ್ ಮೀಟರ್
Viral Pics: ಡೇಟಿಂಗ್ ರೂಮರ್ಸ್ ನಡುವೆ ವಿಜಯ್ – ರಶ್ಮಿಕಾ ಸೀಕ್ರೆಟ್ ಲಂಚ್ ಡೇಟ್
Lakkundi: ಹೊಸದಾಗಿ 5 ಬಾವಿ, 5 ಶಾಸನಗಳು, ಸಾವಿರಕ್ಕೂ ಹೆಚ್ಚು ಶಿಲ್ಪಕಲೆಗಳ ಅನ್ವೇಷಣೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.