Bengaluru Airport; ಕಂಬಕ್ಕೆ ಡಿಕ್ಕಿ ಹೊಡೆದ ಬಸ್: ಹತ್ತು ಮಂದಿಗೆ ಗಾಯ
Team Udayavani, Jun 18, 2023, 1:25 PM IST
ಬೆಂಗಳೂರು: ವಿಮಾನ ನಿಲ್ದಾಣದಲ್ಲಿ ಬಸ್ ನಿಯಂತ್ರಣ ತಪ್ಪಿ ಕಂಬಕ್ಕೆ ಡಿಕ್ಕಿ ಹೊಡೆದ ಪರಿಣಾಮ 10 ಮಂದಿ ಗಾಯಗೊಂಡಿರುವ ಘಟನೆ ರವಿವಾರ ನಡೆದಿದೆ. ಇಂದು ಮುಂಜಾನೆ 5.15ರ ಸುಮಾರಿಗೆ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಪಘಾತ ಸಂಭವಿಸಿದೆ.
ಶಟಲ್ ಬಸ್ ನಲ್ಲಿ ಒಟ್ಟು 17 ಜನರು ಪ್ರಯಾಣಿಸುತ್ತಿದ್ದರು. 15 ಪ್ರಯಾಣಿಕರು ಮತ್ತು ಇಬ್ಬರು ಸಿಬ್ಬಂದಿಗಳಿದ್ದರು.
ಇದನ್ನೂ ಓದಿ:ಟ್ಯಾಟೂ ಫೋಟೋ ವೈರಲ್; ಟ್ರೋಲ್ ಆದ ನಟಿ ಅನುಪಮಾ ಪರಮೇಶ್ವರನ್
ಅಪಘಾತದಲ್ಲಿ ಗಾಯಗೊಂಡವರಲ್ಲಿ ಎರಡು ವರ್ಷದ ಮಗುವೂ ಸೇರಿದೆ. ಎಲ್ಲಾ ಗಾಯಾಳುಗಳನ್ನು ತಕ್ಷಣ ಚಿಕಿತ್ಸೆಗಾಗಿ ಹತ್ತಿರದ ಆಸ್ಪತ್ರೆಗೆ ಸಾಗಿಸಲಾಯಿತು. ಐವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
“ರವಿವಾರ 5.15 ರ ಸುಮಾರಿಗೆ ಬೆಂಗಳೂರು ವಿಮಾನ ನಿಲ್ದಾಣದ ಟಿ1 ಮತ್ತು ಟಿ2 ನಡುವೆ ಕಾರ್ಯ ನಿರ್ವಹಿಸುತ್ತಿದ್ದ ಶಟಲ್ ಬಸ್ ಟಿ2 ಆಗಮನ ನಿರ್ಗಮನ ರಸ್ತೆಯ ಬಳಿ ಕಂಬಕ್ಕೆ ಡಿಕ್ಕಿ ಹೊಡೆದು 10 ಜನರಿಗೆ ಗಾಯಗಳಾಗಿವೆ. ಒಟ್ಟು 17 ಮಂದಿ ಬಸ್ ನಲ್ಲಿದ್ದರು. ಗಾಯಾಳುಗಳನ್ನು ತಕ್ಷಣದ ವೈದ್ಯಕೀಯ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೊಯ್ಯಲಾಯಿತು” ಎಂದು ಬೆಂಗಳೂರು ವಿಮಾನ ನಿಲ್ದಾಣದ ವಕ್ತಾರರು ತಿಳಿಸಿದ್ದಾರೆ.
A shuttle bus collided with a pole at at Kempegowda International Airport Bengaluru . Accident happened around 5.15am today .17 persons were on board,10 persons suffered injuries.@BLRAirport pic.twitter.com/rg0Lr92u4m
— Yasir Mushtaq (@path2shah) June 18, 2023
ಕೆಂಪೇಗೌಡ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ
ಮದುವೆಯಾಗಿದ್ದೇವೆ… ನಮಗೆ ರಕ್ಷಣೆ ನೀಡಿ ಎಂದು ಠಾಣೆ ಮೆಟ್ಟಿಲೇರಿದ ಪ್ರೇಮಿಗಳು
Karnataka: “ಸೈಬರ್ ಕ್ರೈಂ ತಡೆಗೆ ಪ್ರತ್ಯೇಕ ಭದ್ರತಾ ವಿಭಾಗ’: ಸಚಿವ ಡಾ| ಜಿ. ಪರಮೇಶ್ವರ್
Karnataka: ಬೆಂಗಳೂರಿನಲ್ಲಿ ಸಾಕು ನಾಯಿಗಳ ಅಂತ್ಯಕ್ರಿಯೆಗೆ ಚಿತಾಗಾರ; ಸರಕಾರ ಚಿಂತನೆ
Renukaswamy Case: ಕೊನೆಗೂ ಶಿವಮೊಗ್ಗ ಜೈಲಿನಿಂದ ಬಿಡುಗಡೆಯಾದ ಜಗದೀಶ್
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.