Gita ಪ್ರಸ್‌ಗೆ 2021ನೇ ಸಾಲಿನ ಪ್ರತಿಷ್ಠಿತ ಗಾಂಧಿ ಶಾಂತಿ ಪ್ರಶಸ್ತಿ
Team Udayavani, Jun 19, 2023, 7:30 AM IST
ನವದೆಹಲಿ: ಉತ್ತರ ಪ್ರದೇಶದ ಗೋರಖ್‌ಪುರದಲ್ಲಿರುವ ಗೀತಾ ಮುದ್ರಣಾಲಯಕ್ಕೆ 2021ನೇ ಸಾಲಿನ “ಗಾಂಧಿ ಶಾಂತಿ ಪ್ರಶಸ್ತಿ’ಯನ್ನು ನೀಡಲು ತೀರ್ಮಾನಿಸಲಾಗಿದೆ.
ಸಾಮಾಜಿಕ ಸೌಹಾರ್ದತೆ, ಶಾಂತಿ ಮತ್ತು ಮಹಾತ್ಮ ಗಾಂಧಿಯವರ ತತ್ವಗಳನ್ನು ಪೋಷಿಸಿ, ಅದನ್ನು ಜನಪ್ರಿಯಗೊಳಿಸುವಲ್ಲಿ ಸಂಸ್ಥೆಯ ಪಾತ್ರ ಘನವಾದದ್ದು ಎಂದು ಪರಿಗಣಿಸಿ ಈ ಗೌರವ ಕೊಡಮಾಡಲಾಗುತ್ತದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ತೀರ್ಪುಗಾರರ ಸಮಿತಿ ಈ ತೀರ್ಮಾನ ಪ್ರಕಟಿಸಿದೆ. ಪ್ರಶಸ್ತಿಯು ಒಂದು ಕೋಟಿ ರೂ. ನಗದು, ಪ್ರಶಸ್ತಿ ಪತ್ರ, ಫಲಕ, ಗುಡಿ ಕೈಗಾರಿಕೆಗಳ ಅತ್ಯುತ್ಕೃಷ್ಟ ಉತ್ಪನ್ನಗಳನ್ನು ಒಳಗೊಂಡಿದೆ.
ಈ ಹಿಂದೆ ಇಸ್ರೋ, ಬೆಂಗಳೂರಿನ ಅಕ್ಷಯ ಪಾತ್ರ ಫೌಂಡೇಷನ್, ಬಾಂಗ್ಲಾದೇಶದ ಗ್ರಾಮೀಣ ಬ್ಯಾಂಕ್, ದಕ್ಷಿಣ ಆಫ್ರಿಕಾದ ಮಾಜಿ ಅಧ್ಯಕ್ಷ ಡಾ. ನೆಲ್ಸನ್ ಮಂಡೇಲಾ, ತಾಂಜೇನಿಯಾ ಮಾಜಿ ಅಧ್ಯಕ್ಷ ಡಾ.ಜೂಲಿಯಸ್ ನೈರೇರೆ ಸೇರಿದಂತೆ ದೇಶ-ವಿದೇಶಗಳ ಗಣ್ಯರು, ಸಂಸ್ಥೆಗಳಿಗೆ ಈ ಗೌರವ ಪ್ರಾಪ್ತವಾಗಿದೆ.
1923ರಲ್ಲಿ ಸ್ಥಾಪನೆಗೊಂಡಿರುವ ಗೀತಾ ಪ್ರಸ್ ಜಗತ್ತಿನ ಹಳೆಯ ಮುದ್ರಣಾಲಯಗಳಲ್ಲಿ ಒಂದು. 14 ಭಾಷೆಗಳಲ್ಲಿ 41.7 ಕೋಟಿ ಪುಸ್ತಕಗಳನ್ನು ಪ್ರಕಟಿಸಿದ ಹೆಗ್ಗಳಿಕೆಗ ಈ ಸಂಸ್ಥೆಗೆ ಇದೆ. ಈ ಪೈಕಿ 16.21 ಕೋಟಿ ಭಗವದ್ಗೀತೆ ಪುಸ್ತಕವೇ ಸೇರಿದೆ.
ಪ್ರಧಾನಿ ಅಭಿನಂದನೆ:
ಪ್ರಧಾನಿ ನರೇಂದ್ರ ಮೋದಿ ಗೀತಾ ಪ್ರಸ್‌ಗೆ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ. ಈ ಬಗ್ಗೆ ಟ್ವೀಟ್ ಮಾಡಿರುವ ಅವರು, “100 ವರ್ಷಗಳ ಅವಧಿಯಲ್ಲಿ ಗೀತಾ ಮುದ್ರಣಾಲಯ ಸಾಮಾಜಿಕ ಸೌಹಾರ್ದತೆ ಬಲಪಡಿಸುವಲ್ಲಿ ಮತ್ತು ಸಾಂಸ್ಕೃತಿಕ ವಿನಿಮಯ ಕ್ಷೇತ್ರದಲ್ಲಿ ಅಭಿನಂದನಾರ್ಹ ಸಾಧನೆ ಮಾಡಿದೆ. ಗಾಂಧಿ ಶಾಂತಿ ಪ್ರಶಸ್ತಿಗೆ ಆಯ್ಕೆಯಾದುದಕ್ಕೆ ಅಭಿನಂದನೆ’ಗಳು ಎಂದು ಬರೆದುಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Mahakumbh 2025: 45 ಕೋಟಿ ಯಾತ್ರಾರ್ಥಿಗಳ ನಿರೀಕ್ಷೆ
Drama ಬಿಟ್ಟು ಅಂಬೇಡ್ಕರ್ ಅವರಿಗೆ ನಿರಂತರ ಅವಮಾನ ಮಾಡಿದ್ದಕ್ಕೆ ಕಾಂಗ್ರೆಸ್ ಕ್ಷಮೆ ಕೇಳಲಿ
UPSC ವಂಚನೆ ಪ್ರಕರಣ: ಪೂಜಾ ಖೇಡ್ಕರ್ ನಿರೀಕ್ಷಣಾ ಜಾಮೀನಿಗೆ ಹೈಕೋರ್ಟ್ ನಕಾರ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Manipur; ಪೊಲೀಸ್ ಇಲಾಖೆಯಲ್ಲಿ ಮೈತೇಯಿ ಮತ್ತು ಕುಕಿಗಳು ಒಟ್ಟಾಗಿ ಕೆಲಸ ಮಾಡಬೇಕು
Team India; ಅಶ್ವಿನ್ ಬದಲಿಯಾಗಿ ಟೀಂ ಇಂಡಿಯಾ ಸೇರಿದ ಕರ್ನಾಟಕ ಕರಾವಳಿ ಮೂಲದ ಸ್ಪಿನ್ನರ್
Kerala; ಸರಕಾರಿ ಶಾಲೆಯಲ್ಲಿ ಕ್ರಿಸ್ಮಸ್ ಆಚರಣೆಗೆ ಅಡ್ಡಿ,ಗೋದಲಿ ಧ್ವಂಸ: ವ್ಯಾಪಕ ಆಕ್ರೋಶ
Kambli Health: ಮಾಜಿ ಕ್ರಿಕೆಟಿಗ ವಿನೋದ್ ಕಾಂಬ್ಳಿ ಆರೋಗ್ಯ ಸ್ಥಿತಿ ಗಂಭೀರ!
Unlock Raghava Movie: ರಾಘವನ ಮೇಲೆ ಕಣ್ಣಿಟ್ಟ ರಚೆಲ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.