ತಾಕತ್ತಿದ್ದರೆ ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಲಿ: ಅಶೋಕ್‌


Team Udayavani, Jun 19, 2023, 8:10 AM IST

ತಾಕತ್ತಿದ್ದರೆ ನಾನೇ ಪೂರ್ಣಾವಧಿ ಸಿಎಂ ಎಂದು ಹೇಳಲಿ: ಅಶೋಕ್‌

ಬೆಂಗಳೂರು: ಮುಖ್ಯಮಂತ್ರಿ ಸ್ಥಾನದ ಬಗ್ಗೆ ಕಾಂಗ್ರೆಸ್‌ ಹೈಕಮಾಂಡ್‌ ಮಟ್ಟದಲ್ಲಿ ನಡೆದಿರುವ ಒಪ್ಪಂದದ ಬಗ್ಗೆ ಸಿಎಂ ಸಿದ್ದರಾಮಯ್ಯ ಧೈರ್ಯವಾಗಿ ಮಾತನಾಡಲಿ ನೋಡೋಣ ಎಂದು ಮಾಜಿ ಸಚಿವ ಆರ್‌.ಅಶೋಕ್‌ ಸವಾಲು ಹಾಕಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರ ಜತೆ ಮಾತನಾಡಿದ ಅವರು, ನಾನು ಅಧಿಕಾರದಲ್ಲಿರುವುದು ಎರಡು ವರ್ಷ ಮಾತ್ರ ಎಂದು ಧೈರ್ಯವಿದ್ದರೆ ಸಿದ್ದರಾಮಯ್ಯ ಹೇಳಲಿ ನೋಡೋಣ. ಆದರೆ ಅವರು ಯಾವುದೇ ಕಾರಣಕ್ಕೂ ಆ ಮಾತು ಹೇಳುವುದಿಲ್ಲ. ಅವರೊಬ್ಬ ಚಾಣಾಕ್ಷ ರಾಜಕಾರಣಿ. ರಾಜಕಾರಣದಲ್ಲಿ ದೇವೇಗೌಡರ ಬಗ್ಗೆ ಎಲ್ಲರೂ ಹೆದರುತ್ತಾರೆ. ಆದರೆ ಸಿದ್ದರಾಮಯ್ಯ ದೇವೇಗೌಡರಿಗೆ ಆಟ ಆಡಿಸಿದ್ದರು. ಸಿಎಂ ಸ್ಥಾನವನ್ನು ಅವರು ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ. ಭವಿಷ್ಯದಲ್ಲಿ ಸಿಎಂ ಸ್ಥಾನಕ್ಕಾಗಿ ಕಾಂಗ್ರೆಸ್‌ನಲ್ಲಿ ಬೀದಿ ರಂಪಾಟ ನಿಶ್ಚಿತ ಎಂದು ಭವಿಷ್ಯ ನುಡಿದರು.

ಮುಖ್ಯಮಂತ್ರಿ ಸ್ಥಾನದ ವಿಚಾರಕ್ಕೆ ಸಂಬಂಧಪಟ್ಟಂತೆ ಡಿ.ಕೆ.ಶಿವಕುಮಾರ್‌ ತಿರುಕನ ಕನಸು ಕಾಣುತ್ತಿದ್ದಾರೆ. ಮಹದೇವಪ್ಪ, ಕೃಷ್ಣ ಭೈರೇಗೌಡ, ಜಮೀರ್‌ ಅಹ್ಮದ್‌ ಖಾನ್‌ ಎಲ್ಲರೂ ಸಿದ್ದರಾಮಯ್ಯ ಪರವೇ ಇದ್ದಾರೆ. ಕಾಂಗ್ರೆಸ್‌ ಎಲ್ಲೆಲ್ಲಿ ಅಧಿಕಾರಕ್ಕೆ ಬಂದಿದೆಯೋ ಅಲ್ಲೆಲ್ಲ ಗೊಂದಲ ಸೃಷ್ಟಿಯಾಗಿದೆ. ಆದರೂ ಸಿದ್ದರಾಮಯ್ಯನವರಿಗೆ ಧೈರ್ಯವಿದ್ದರೆ ನಾನೇ ಮುಂದಿನ ಐದು ವರ್ಷಗಳ ಕಾಲ ಮುಖ್ಯಮಂತ್ರಿ ಎಂದು ಹೇಳಲಿ ಎಂದರು.

ಸಿದ್ದರಾಮಯ್ಯ ಅವರನ್ನು ಡಿ.ಕೆ.ಶಿವಕುಮಾರ್‌ ಓವರ್‌ಟೇಕ್‌ ಮಾಡುತ್ತಿದ್ದಾರೆ. ಶಿವಕುಮಾರ್‌ ವರ್ತನೆಯಿಂದ ಬೇಸತ್ತು ಸಿದ್ದರಾಮಯ್ಯನವರ ಕೋಪ ಯಾವಾಗ ಸ್ಫೋಟಗೊಳ್ಳುತ್ತದೋ ಗೊತ್ತಿಲ್ಲ. ಹನಿಮೂನ್‌ ಅವಧಿ ಮುಗಿದ ಕೂಡಲೇ ಒಡಕು ಹೊರಬರುತ್ತದೆ. ಈಗ ಸಿದ್ದರಾಮಯ್ಯ ಬಣದವರು ಮಾತನಾಡಿದಂತೆ, ಮುಂದೆ ಶಿವಕುಮಾರ್‌ ಬಣದವರೂ ಮುಖ್ಯಮಂತ್ರಿ ಸ್ಥಾನದ ಬಗ್ಗೆ ಮಾತನಾಡಲು ಪ್ರಾರಂಭಿಸುತ್ತಾರೆ. ಇದರಿಂದ ಭವಿಷ್ಯದಲ್ಲಿ ಸರ್ಕಾರದ ಕತೆ ಏನಾಗುತ್ತದೆಯೋ ಗೊತ್ತಿಲ್ಲ. ಲೋಕಸಭಾ ಚುನಾವಣೆಯ ಬಳಿಕ ಈ ಸರ್ಕಾರದ ಸ್ಥಿತಿ ಏನು ಬೇಕಾದರೂ ಆಗಬಹುದು ಎಂದು ಭವಿಷ್ಯ ನುಡಿದರು.

ಡಿ.ಕೆ.ಸುರೇಶ್‌ ಅವರ ರಾಜಕೀಯ ವೈರಾಗ್ಯದ ಮಾತುಗಳ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸುರೇಶ್‌ ಅವರ ಬಗ್ಗೆ ನನಗೆ ಸಿಂಪಥಿ ಇದೆ. ಈಗಾಗಲೇ ರಾಜಸ್ಥಾನದಲ್ಲಿ ನಡೆಯುತ್ತಿರುವ ವಿದ್ಯಮಾನಗಳ ಬಗ್ಗೆ ಅವರು ನೋಡಿದ್ದಾರೆ. ಮುಂದೆ ನಮ್ಮಣ್ಣನಿಗೆ ಅದೇ ಪರಿಸ್ಥಿತಿ ಬರಬಹುದೆಂಬ ಬೇಸರಕ್ಕೆ ಈ ಮಾತುಗಳನ್ನು ಹೇಳಿರಬಹುದು ಎಂದು ತಿಳಿಸಿದರು.

ಅಕ್ಕಿ ವಿಚಾರದಲ್ಲಿ ಕೇಂದ್ರ ಸರ್ಕಾರ ತಾರತಮ್ಯ ಮಾಡುತ್ತಿದೆ ಎಂಬ ಕಾಂಗ್ರೆಸ್‌ ಆರೋಪಕ್ಕೆ ಪ್ರತಿಕ್ರಿಯಿಸಿ, ಸಿದ್ದರಾಮಯ್ಯನವರಿಗೆ ಈ ಮಾತನ್ನು ಹೇಳುವ ನೈತಿಕತೆ ಇಲ್ಲ. ಇಷ್ಟು ದೊಡ್ಡ ಯೋಜನೆಯ ಬಗ್ಗೆ ತಯಾರಿಯೇ ಇಲ್ಲದೇ ಘೋಷಣೆ ಮಾಡಿದ್ದಾರೆ. ಕೇಂದ್ರದ ವಿರುದ್ಧ ಮಾತನಾಡುವುದಕ್ಕೆ ಮುನ್ನ ನೀವು 10 ಕೆಜಿ ಅಕ್ಕಿ ಕೊಡುತ್ತೋರೋ, 5 ಕೆಜಿ ಅಕ್ಕಿ ಕೊಡುತ್ತೀರೋ ಎಂಬುದನ್ನು ಮೊದಲು ಹೇಳಿ ಎಂದು ವ್ಯಂಗ್ಯವಾಡಿದರು.

ಟಾಪ್ ನ್ಯೂಸ್

Crime

Sulya: ವಾರಂಟ್‌ ಆರೋಪಿ ಪರಾರಿ

3

BBK11: ಇದು ಬಿಗ್‌ಬಾಸ್‌ ಮನೆ ಪರಪ್ಪನ ಅಗ್ರಹಾರ ಜೈಲಲ್ಲ.. ಜಗದೀಶ್‌ಗೆ ಕಿಚ್ಚನಿಂದ ಪಾಠ

Katapadi

Udupi: ಉದ್ಯಾವರ ಬಳಿ ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್‌ ಮೇಲೆರಿದ ಕಾರು; ಪ್ರಯಾಣಿಕರಿಗೆ ಗಾಯ

1-megha

Meghalaya ; ಭಾರೀ ಮಳೆಗೆ ಭೂಕುಸಿತ: ಒಂದೇ ಕುಟುಂಬದ 7 ಮಂದಿ ಜೀವಂತ ಸಮಾಧಿ

1-weqwe

Middle East latest; ನಿರಾಶ್ರಿತರ ಶಿಬಿರದ ಮೇಲೆ ಇಸ್ರೇಲ್ ದಾಳಿ: ಹಮಾಸ್ ಅಧಿಕಾರಿ ಸಾ*ವು

JK-Congress

J-K Election: ಚುನಾವಣೆ ಫ‌ಲಿತಾಂಶಕ್ಕೂ ಮೊದಲೇ 5 ಶಾಸಕರ ನಾಮನಿರ್ದೇಶನ: ಕಾಂಗ್ರೆಸ್‌ ಆಕ್ಷೇಪ

1-frr

Risk; ಚಾರ್ ಮಿನಾರ್ ಕಿಟಕಿಗಳಲ್ಲಿ ನಡೆದು ಅಪಾಯಕಾರಿ ಸಾಹಸ: ವೈರಲ್ ವಿಡಿಯೋ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

Exam

PG NEET-2024: ನೋಂದಣಿ ವಿಸ್ತರಣೆ

KSRTC VOLVO

Dasara: ಎರಡು ಸಾವಿರ ಹೆಚ್ಚುವರಿ ಬಸ್‌

school

ರಾಜ್ಯ ಪಠ್ಯಕ್ರಮ ಬೋಧನೆ ಕಡ್ಡಾಯ : ಶಾಲೆಗಳಿಗೆ ಶಿಕ್ಷಣ ಇಲಾಖೆ ಸೂಚನೆ

MUST WATCH

udayavani youtube

ಉಡುಪಿಯ ಈ ಜಾಗದಲ್ಲಿ ರಸಂ ಪುರಿ ತುಂಬಾನೇ ಫೇಮಸ್

udayavani youtube

ತಿರುಪತಿ ಲಡ್ಡು ವಿವಾದ ಪೇಜಾವರ ಶ್ರೀಗಳು ಹೇಳಿದ್ದೇನು ?

udayavani youtube

Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ

udayavani youtube

ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ

udayavani youtube

ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ

ಹೊಸ ಸೇರ್ಪಡೆ

priyank

Gram Panchayat ನೌಕರರ ಪ್ರತಿಭಟನೆ ವಾಪಸ್‌: ಪ್ರಿಯಾಂಕ್‌ ಖರ್ಗೆ ಅಧ್ಯಕ್ಷತೆಯಲ್ಲಿ ಸಭೆ

Crime

Sulya: ವಾರಂಟ್‌ ಆರೋಪಿ ಪರಾರಿ

jameer

Waqf Boardನಿಂದ ಪ್ರತಿ ಜಿಲ್ಲೆಯಲ್ಲಿ ಪದವಿ ಪೂರ್ವ ಕಾಲೇಜು: ಸಚಿವ ಜಮೀರ್‌

police

Uppinangady: ವರದಕ್ಷಿಣೆಗಾಗಿ ನಿತ್ಯ ಮಾನಸಿಕ, ದೈಹಿಕ ಹಿಂಸೆ: ದೂರು ದಾಖಲು

Exam

PG NEET-2024: ನೋಂದಣಿ ವಿಸ್ತರಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.