BJP ಅಂದರೆ ಬಿಜಿನೆಸ್ ಜನತಾ ಪಾರ್ಟಿ, ಬ್ರಿಟಿಷ್ ಜನತಾ ಪಾರ್ಟಿ…: ಮಧು ಬಂಗಾರಪ್ಪ
Team Udayavani, Jun 19, 2023, 11:43 AM IST
ಶಿವಮೊಗ್ಗ: ಬಿಜೆಪಿ ಅಂದರೆ ಬಿಜಿನೆಸ್ ಜನತಾ ಪಾರ್ಟಿ, ಬ್ರಿಟಿಷ್ ಜನತಾ ಪಾರ್ಟಿ. ಇದನ್ನೇ ಜನ ತೋರಿಸಿಕೊಟ್ಟಿದ್ದಾರೆ. ಅದನ್ನು ನೋಡಿ ಕಲಿಯಿರಿ, ಭಾಷಣ ಮಾಡುವುದು ಬಿಡಿ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಬಿಜೆಪಿ ನಾಯಕರ ವಿರುದ್ಧ ಕಿಡಿಕಾರಿದರು.
ಗ್ಯಾರಂಟಿ ಸರ್ಕಾರ ಉಳಿಯುವುದಿಲ್ಲ ಎಂಬ ಬಿಎಸ್ವೈ ಹೇಳಿಕೆಗೆ ತಿರುಗೇಟು ನೀಡಿದ ಅವರು, ಇವರ 65 ಸ್ಥಾನ ಇರುವುದು 165 ಆಗುತ್ತಾ? ಇನ್ನು ಅದೇ ಲೆಕ್ಕದಲ್ಲೇ ಬಿಜೆಪಿಯವರು ಇದ್ದಾರೆ. ಜೀವಮಾನದಲ್ಲಿ ಯಾವತ್ತಾದರೂ ಕರ್ನಾಟಕದಲ್ಲಿ ಸ್ವಂತ ಶಕ್ತಿ ಮೇಲೆ ಬಿಜೆಪಿ ಕೆಲಸ ಮಾಡಿದ್ದಾರಾ? ಇಂತಹ ಬಿಜೆಪಿ ಸರ್ಕಾರ ಬೇಡ ಎಂದು ಜನರೇ ನಿರ್ಧಾರ ಕೊಟ್ಟಿದ್ದಾರೆ ಎಂದರು.
ನಮ್ಮ ಪಕ್ಷದ ಪ್ರಾಣಾಳಿಕೆಯಲ್ಲೇ ಸ್ಪಷ್ಟವಾಗಿ ಹೇಳಿದ್ದೆವೆ. ಯಾವುದೇ ಇಲಾಖೆಯಲ್ಲಿ ಹಗರಣ ಆಗಿದ್ದರೂ ತನಿಖೆ ನಡೆಸುತ್ತೆವೆ. ಸರ್ಕಾರದ ಹಣ ಜನರಿಗೆ ಸೇರಬೇಕು. ಅಲ್ಲಿ ತಪ್ಪಾಗಿದ್ದರೆ ಯಾರೇ ಅದರೂ ಕ್ರಮ ಕೈಗೊಳ್ಳುತ್ತೇವೆ. ಶಿಕ್ಷಕರ ನೇಮಕಾತಿ ಹಗರಣದ್ದು ತನಿಖೆ ನಡೆಯುತ್ತಿದೆ. ನಾನು ಮಾತನಾಡಲ್ಲ. ನನಗೆ ಮಾಡಲು ಬೇರೆಯದ್ದೇ ಕೆಲಸಗಳಿವೆ ಎಂದರು.
ಇದನ್ನೂ ಓದಿ:Om Raut: ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಯಾರಿಗೂ ಇಲ್ಲ:ʼಆದಿಪುರುಷ್ʼ ನಿರ್ದೇಶಕ
ಮತಾಂತರ ನಿಷೇಧ ಕಾಯ್ದೆ ವಾಪಸ್ ವಿಚಾರವಾಗಿ ಮಾತನಾಡಿ, ನಾವು ಪ್ರಣಾಳಿಕೆಯಲ್ಲೇ ಸ್ಪಷ್ಟವಾಗಿ ಹೇಳಿದ್ದೇವೆ. ಅವರು ಅದನ್ನು ಓದಲಿ. ಮತಾಂತರ ಮಾಡುತ್ತಾರೆಂದು ಇವರು ಭಾಷಣ ಹೊಡೆದಿದರಲ್ಲಾ ಅದೇ ಜನರೇ ನಮಗೆ ವೋಟ್ ಹಾಕಿ ಗೆಲ್ಲಿಸಿದ್ದು. ಮೊದಲು ಪ್ರಣಾಳಿಕೆ ಓದಲಿ, ನಂತರ ನಾನು ಉತ್ತರ ಕೊಡುತ್ತೇನೆ ಎಂದು ಮಧು ಬಂಗಾರಪ್ಪ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Sagara: ಟ್ರಾಫಿಕ್ ಜಾಮ್‌ಗೆ ಕಾರಣವಾದ ವಾಹನ ವಶ; ಚಾಲಕನ ವಿರುದ್ಧ ಎಫ್ಐಆರ್ ದಾಖಲು
Shimoga: ಅರಣ್ಯ ಇಲಾಖೆ ಜತೆ ಸೇರಿ ಕಾಡಾನೆಗಳನ್ನು ಓಡಿಸಿದ ಜನ
Sagara: ತರಗತಿ ಕೊಠಡಿಯಲ್ಲಿ ಅವ್ಯವಸ್ಥೆ… ಕಾಲೇಜು ವಿದ್ಯಾರ್ಥಿಗಳಿಂದ ದಿಢೀರ್ ಪ್ರತಿಭಟನೆ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Shimoga: ಮಲೆನಾಡಿನಲ್ಲಿ ಮುಂದುವರಿದ ಕಾಡಾನೆ ಕಾಟ; ಇಲಾಖೆ ವಿರುದ್ದ ರೈತರ ಆಕ್ರೋಶ
MUST WATCH
ಹೊಸ ಸೇರ್ಪಡೆ
Bengaluru: ಠಾಣೆಯಲ್ಲಿ ಪೊಲೀಸ್ ಸಿಬ್ಬಂದಿ ನಡುವೆ ಜಗಳ: ವಿಡಿಯೋ ವೈರಲ್
Karnataka By Poll Results: ಜೆಡಿಎಸ್ ಅಂತಿಮ ದಿನ ಎಣಿಸತೊಡಗಿದೆ: ಸಿ.ಪಿ.ಯೋಗೇಶ್ವರ್
Bengaluru: ಹನಿಟ್ರ್ಯಾಪ್: ಪ್ರೊಫೆಸರ್‌ಗೆ 3 ಕೋಟಿ ಸುಲಿಗೆ; ಉಡುಪಿ, ಕಾರ್ಕಳ ಮೂಲದವರ ಬಂಧನ
By Poll: ಇಬ್ಬರು ಮಾಜಿ ಸಿಎಂಗಳ ಪುತ್ರರಿಗೂ ಸೋಲಿನ ರುಚಿ ತೋರಿಸಿದ ಮತದಾರ; ಎಡವಿದ್ದೆಲ್ಲಿ?
Karnataka Bypoll Results:ಮೂರು ಕ್ಷೇತ್ರಗಳಲ್ಲೂ “ಕೈ” ಮೇಲುಗೈ, ಬಿಜೆಪಿ ಮೈತ್ರಿಗೆ ಮುಖಭಂಗ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.