Om Raut: ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಯಾರಿಗೂ ಇಲ್ಲ:ʼಆದಿಪುರುಷ್ʼ ನಿರ್ದೇಶಕ
Team Udayavani, Jun 19, 2023, 11:29 AM IST
ವಿಶ್ವಾದ್ಯಂತ
ಮುಂಬಯಿ: ರಾಮಾಯಣದ ಕಥೆಯನ್ನು ಆಧರಿಸಿ ಬಿಗ್ ಬಜೆಟ್ ನಲ್ಲಿ ತಯಾರಾದ ʼಆದಿಪುರುಷ್ʼ ಸಿನಿಮಾ ವಿಶ್ವಾದ್ಯಂತ ಭರ್ಜರಿ ಪ್ರದರ್ಶನ ಕಾಣುತ್ತಿರುವುದರ ಜೊತೆ ಒಂದಷ್ಟು ನೆಗೆಟಿವ್ ಕಮೆಂಟ್ ಗಳಿಗೆ ತುತ್ತಾಗಿದೆ.
ಸಿನಿಮಾ ರಿಲೀಸ್ ಆದ ಮೊದಲ ದಿನವೇ ಗ್ಲೋಬಲ್ ಮಟ್ಟದಲ್ಲಿ 140 ಕೋಟಿ ರೂ.ವನ್ನು ಕಲೆಕ್ಷನ್ ಮಾಡಿದೆ. ಸಿನಿಮಾದಲ್ಲಿ ನಟ ಪ್ರಭಾಸ್ ರಾಮನಾಗಿ ಕಾಣಿಸಿಕೊಂಡಿದ್ದಾರೆ. ಅವರ ಪಾತ್ರಕ್ಕೆ ಪ್ರೇಕ್ಷಕರು ಭೇಷ್ ಎಂದಿದ್ದಾರೆ. ಆದರೆ ಇದುಬಿಟ್ಟರೆ ಸಿನಿಮಾ ಬೇರೆ ಯಾವುದೇ ವಿಚಾರದಲ್ಲಿ ಅಷ್ಟಾಗಿ ಸದ್ದು ಮಾಡುತ್ತಿಲ್ಲ ಎಂದು ಪ್ರೇಕ್ಷಕರು ಹೇಳಿದ್ದಾರೆ.
500 ಕೋಟಿ ರೂ. ನಿರ್ಮಾಣದಲ್ಲಿ ತಯಾರಾದ ಸಿನಿಮಾದ ವಿಎಫ್ ಎಕ್ಸ್ ಅತ್ಯಂತ ಕಳಪೆಯಾಗಿದೆ. ಬೇರೆ ಬೇರೆ ಕಡೆಯಿಂದ ಕದ್ದು ವಿಎಫ್ ಎಕ್ಸ್ ನ್ನು ಚಿತ್ರದಲ್ಲಿ ಬಳಸಲಾಗಿದೆ ಎಂದು ಕೆಲವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದರೊಂದಿಗೆ ಸಿನಿಮಾದಲ್ಲಿ ಹನುಮಂತನ ಪಾತ್ರಧಾರಿಯ ಸಂಭಾಷಣೆಗೆ ವಿರೋಧ ವ್ಯಕ್ತವಾಗಿದೆ.
ಇದನ್ನೂ ಓದಿ:Daaku Haseena; 8 ಕೋಟಿ ರೂ. ದರೋಡೆ- 10 ರೂ. ಜ್ಯೂಸ್ ಕುಡಿದು ಸಿಕ್ಕಿಬಿದ್ದ ದಂಪತಿ!
ಈ ಎಲ್ಲಾ ವಿವಾದ ಹಾಗೂ ನೆಗೆಟಿವ್ ಪ್ರತಿಕ್ರಿಯೆಗಳ ನಿರ್ದೇಶಕ ಓಂ ರಾವತ್ ಮಾತನಾಡಿದ್ದಾರೆ. “ಬಾಕ್ಸ್ ಆಫೀಸ್ ನಲ್ಲಿ ಸಿನಿಮಾ ಯಾವ ರೀತಿಯ ರೆಸ್ಪಾನ್ಸ್ ಪಡೆದುಕೊಳ್ಳುತ್ತಿದೆ ಎನ್ನುವುದು ಮುಖ್ಯ. ಮೊದಲ ದಿನವೇ ಗ್ಲೋಬಲ್ ಮಟ್ಟದಲ್ಲಿ ನಮ್ಮ ಸಿನಿಮಾ ನಿರೀಕ್ಷೆ ಮಾಡಿದಕ್ಕಿಂತಲೂ ಅಭೂತಪೂರ್ವವಾಗಿ ಪ್ರತಿಕ್ರಿಯೆ ಪಡೆದುಕೊಂಡಿರುವುದು ನನಗೆ ತುಂಬಾ ಸಂತೋಷವಾಗಿದೆ” ಎಂದರು.
ಇದನ್ನೂ ಓದಿ:ಕೆನಾಡದಲ್ಲಿ ಭಾರತಕ್ಕೆ ಬೇಕಾಗಿದ್ದ ಖಲಿಸ್ಥಾನಿ ಉಗ್ರ ಹರ್ದೀಪ್ ಸಿಂಗ್ ನಿಜ್ಜರ್ ಹತ್ಯೆ
ನನಗೆ ರಾಮಾಯಣದಿಂದ ಏನು ಅರ್ಥವಾಯಿತೋ ಅದನ್ನು ಅರಿತೇ ನಾನು ʼಆದಿಪುರುಷ್ʼ ಮಾಡಿದ್ದೇನೆ. ರಾಮಾಯಣವನ್ನು ಸಂಪೂರ್ಣವಾಗಿ ಅರ್ಥಮಾಡಿಕೊಳ್ಳಲು ಯಾರಿಗೂ ಸಾಧ್ಯವಾಗಿಲ್ಲ. ನಾನು ನಾಟಕವನ್ನು ನೋಡಿ ರಾಮಾಯಣವನ್ನು ಅರ್ಥಮಾಡಿಕೊಂಡಿದ್ದೇನೆ ಎಂದು ನಿಮಗೆ ಹೇಳಿದರೆ, ಅದು ಗಂಭೀರ ದೋಷವಾಗುತ್ತದೆ. ಏಕೆಂದರೆ ರಾಮಾಯಣವನ್ನು ಅರ್ಥಮಾಡಿಕೊಳ್ಳುವ ಸಾಮರ್ಥ್ಯ ಯಾರಿಗೂ ಇಲ್ಲ ಎಂದು ನಾನು ಭಾವಿಸುತ್ತೇನೆ.”
ಸಿನಿಮಾದಲ್ಲಿ ರಾಘವ್ ಆಗಿ ನಟ ಪ್ರಭಾಸ್, ಜಾನಕಿಯಾಗಿ ಕೃತಿ ಸನೋನ್ ಕಾಣಿಸಿಕೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Armaan Malik: ದಾಂಪತ್ಯ ಜೀವನಕ್ಕೆ ಕಾಲಿಟ್ಟ ಗಾಯಕ ಅರ್ಮಾನ್ ಮಲಿಕ್; ಇಲ್ಲಿದೆ ಫೋಟೋಸ್
ಹಲವು ಬಾರಿ ಸಾಯುವ ಬಗ್ಗೆ ಯೋಚಿಸಿದ್ದೆ.. #MeToo ಆರೋಪದ ಬಗ್ಗೆ ನಿರ್ದೇಶಕ ಸಾಜಿದ್ ಮಾತು
Transformation; ಕೇವಲ 18 ತಿಂಗಳಲ್ಲಿ 55 ಕೆ.ಜಿ. ತೂಕ ಕಳೆದುಕೊಂಡ ಖ್ಯಾತ ನಟ ರಾಮ್ ಕಪೂರ್
‘I am single’; ಅರ್ಜುನ್ ಕಪೂರ್ ಕಾಮೆಂಟ್‌ಗೆ ಕೊನೆಗೂ ಮಲೈಕಾ ಅರೋರಾ ಪ್ರತಿಕ್ರಿಯೆ
Hollywood: Billy the kid- ಹಾಲಿವುಡ್ ಹಿರಿಯ ನಟ ಜೆಫ್ರಿ ಡ್ಯುಯೆಲ್ ಇನ್ನಿಲ್ಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Explainer:HMPV ಮಹಾಮಾರಿಗೆ ಕಂಗೆಟ್ಟ ಚೀನಾ-ಏನಿದು ಕೋವಿಡ್ ಮಾದರಿಯ ಎಚ್ ಎಂಪಿವಿ ವೈರಸ್?
Gadag: ನಿರ್ಮಿತಿ ಕೇಂದ್ರದ ಗುತ್ತಿಗೆ ಆಧಾರಿತ ಇಂಜಿನಿಯರ್ ಆತ್ಮಹ*ತ್ಯೆ
Bantwala: ನೇತ್ರಾವತಿ ನದಿಯ ಅಂಬಿಗ ನಾಪತ್ತೆ; ಸ್ಥಳೀಯರಿಂದ ಶೋಧ ಕಾರ್ಯ
Back to Life: ಸತ್ತ ವ್ಯಕ್ತಿಯನ್ನು ಬದುಕಿಸಿದ ರೋಡ್ ಹಂಪ್ಸ್… ರಸ್ತೆಯಲ್ಲೇ ನಡೆಯಿತು ಪವಾಡ
Public Picture; ಪ್ರೇಕ್ಷಕ ಏನು ಬಯಸುತ್ತಾನೆ ಗೊತ್ತಾ?
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.