Driver: ಫೋನ್ ಕಾಲ್ ನಲ್ಲಿ ಚಾಲಕ ಬ್ಯುಸಿ; ಸೇತುವೆಗೆ ಬಸ್ ಢಿಕ್ಕಿಯಾಗಿ 26 ಮಂದಿಗೆ ಗಾಯ
Team Udayavani, Jun 19, 2023, 12:56 PM IST
ಛತ್ತೀಸ್‌ಗಢ: ಬಸ್ಸೊಂದು ಸೇತುವೆಗೆ ಢಿಕ್ಕಿ ಹೊಡೆದ ಪರಿಣಾಮ 26 ಮಂದಿ ಗಾಯಗೊಂಡಿರುವ ಘಟನೆ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದಲ್ಲಿ ನಡೆದಿದೆ.
ಬಸ್ ಛತ್ತೀಸ್‌ಗಢದ ಘರ್ಘೋಡಾ ಪ್ರದೇಶದಲ್ಲಿ ಹೋಗುತ್ತಿದ್ದ ವೇಳೆ ನಿಯಂತ್ರಣ ತಪ್ಪಿ ವೇಗವಾಗಿ ರಸ್ತೆ ಬದಿಯ ರೈಲ್ವೇ ಸೇತುವೆಗೆ ಢಿಕ್ಕಿ ಹೊಡೆದಿದೆ. ಪರಿಣಾಮ ಬಸ್ ನಲ್ಲಿದ್ದ 26 ಮಂದಿ ಗಾಯಗೊಂಡಿದ್ದಾರೆ. ಇದರಲ್ಲಿ ಇಬ್ಬರಿಗೆ ಗಂಭೀರ ಸ್ವರೂಪದ ಗಾಯಗಳಾಗಿವೆ. ಗಾಯಾಳುಗಳನ್ನು ರಾಯಗಢ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.
ಇದನ್ನೂ ಓದಿ: Rashmika Mandanna: ನಟಿ ರಶ್ಮಿಕಾ ಮಂದಣ್ಣಗೆ 80 ಲಕ್ಷ ರೂ. ವಂಚಿಸಿದ ಮ್ಯಾನೇಜರ್
ಘಟನಾ ಸ್ಥಳಕ್ಕೆ ತಲುಪಿದ ಪೊಲೀಸರು ತನಿಖೆ ನಡೆಸಿದ್ದಾರೆ. ಚಾಲಕ ಫೋನಿನಲ್ಲಿ ಮಾತನಾಡುತ್ತಾ ವಾಹನ ಚಲಾಯಿಸಿದ ಪರಿಣಾಮ ಈ ಘಟನೆ ನಡೆದಿದೆ ಎಂದು ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ತಿಳಿದು ಬಂದಿದೆ.
ಇದೇ ವರ್ಷದ ಏಪ್ರಿಲ್ ನಲ್ಲಿ ಇದೇ ರೀತಿಯ ಘಟನೆ ಛತ್ತೀಸ್‌ಗಢದಲ್ಲಿ ನಡೆದಿತ್ತು. ಬಸ್ ಪಲ್ಟಿಯಾಗಿ ಮಹಿಳೆಯರು ಮತ್ತು ಮಕ್ಕಳು ಸೇರಿದಂತೆ ಸುಮಾರು 40 ಜನರು ಗಾಯಗೊಂಡಿದ್ದರು.
#WATCH | Chhattisgarh | 26 people injured, including two critically injured, after a speeding bus lost control and rammed into a bridge. The incident occurred at a bridge near Gharghoda in Raigarh district.
SDOP Deepak Mishra says, “A total of 26 people are injured. Two… pic.twitter.com/mezuKaNW0X
— ANI MP/CG/Rajasthan (@ANI_MP_CG_RJ) June 19, 2023
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
Canada-India Row: ಕೆನಡಾದ ಆಂತರಿಕ ವಿಚಾರದಲ್ಲಿ ಭಾರತದ ಪಾತ್ರವಿಲ್ಲ… :ಟ್ರುಡೋ ಸರ್ಕಾರ
IPL 2025-27: ಮುಂದಿನ ಮೂರು ಐಪಿಎಲ್ ಸೀಸನ್ ನ ದಿನಾಂಕ ಪ್ರಕಟಿಸಿದ ಬಿಸಿಸಿಐ
AI world: ಕ್ರಿಮಿನಲ್‌ಗಳ ಜಾತಕವನ್ನೇ ಬಿಚ್ಚಿಡುವ ಎಐ ಆ್ಯಪ್!
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.