Puttur; ಯುವಕರ ಮೇಲಿನ ಪೊಲೀಸ್ ದೌರ್ಜನ್ಯ; ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ ಅವರಿಗೆ ಜಾಮೀನು
Team Udayavani, Jun 20, 2023, 6:43 AM IST
ಪುತ್ತೂರು: ಬ್ಯಾನರ್ ಅಳವಡಿಕೆ ಪ್ರಕರಣದಲ್ಲಿ ಬಂಧಿತ ಯುವಕರ ಮೇಲೆ ಪೊಲೀಸ್ ದೌರ್ಜನ್ಯ ನಡೆಸಿರುವ ಆರೋಪ ಎದುರಿಸುತ್ತಿದ್ದ ಡಿವೈಎಸ್ಪಿ ಡಾ| ವೀರಯ್ಯ ಹಿರೇಮಠ ಅವರಿಗೆ ನ್ಯಾಯಾಲಯ ಜಾಮೀನು ನೀಡಿದೆ. ಅವರು ನ್ಯಾಯಾಲಯಕ್ಕೆ ಶರಣಾಗಿ ಜಾಮೀನು ಪಡೆದುಕೊಂಡಿದ್ದಾರೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಪುತ್ತೂರು ಗ್ರಾಮಾಂತರ ಠಾಣೆಯ ಆಗಿನ ಎಸ್ಐ ಶ್ರೀನಾಥ್ ರೆಡ್ಡಿ ಹಾಗೂ ಕಾನ್ಸ್ಟೆಬಲ್ ಹರ್ಷಿತ್ನನ್ನು ಸೇವೆಯಿಂದ ಅಮಾನತುಗೊಳಿಸಲಾಗಿದೆ. ಡಿವೈಎಸ್ಪಿ ವೀರಯ್ಯ ಅವರನ್ನು ಕಡ್ಡಾಯ ರಜೆಯ ಮೇಲೆ ಕಳುಹಿಸಲಾಗಿತ್ತು.
ವಿಧಾನಸಭಾ ಚುನಾವಣೆಯ ಫಲಿತಾಂಶದ ಬಳಿಕ ನಗರದ ಬಸ್ ನಿಲ್ದಾಣದ ಬಳಿ, ಮಾಜಿ ಸಿಎಂ ಡಿ.ವಿ. ಸದಾನಂದ ಗೌಡ ಮತ್ತು ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರ ಭಾವಚಿತ್ರವನ್ನೊಳಗೊಂಡ ಬ್ಯಾನರ್ಗೆ ಶ್ರದ್ಧಾಂಜಲಿ ಬರಹದೊಂದಿಗೆ ಚಪ್ಪಲಿ ಹಾರ ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಯುವಕರನ್ನು ಪೊಲೀಸರು ಬಂಧಿಸಿ ಡಿವೈಎಸ್ಪಿ ಕಚೇರಿಗೆ ಕರೆದೊಯ್ದು ದೌರ್ಜನ್ಯ ನಡೆಸಿದ್ದರು ಎಂದು ಆರೋಪಿಸಲಾಗಿತ್ತು. ಹಲ್ಲೆಗೊಳಗಾಗಿದ್ದ ಯುವಕ ಅವಿನಾಶ್ ಅವರ ತಂದೆ ವೇಣುನಾಥ ನರಿಮೊಗರು ನೀಡಿರುವ ದೂರಿನ ಮೇರೆಗೆ ಪುತ್ತೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Surathkal: ಎಐಯಿಂದ ಉದ್ಯೋಗ, ನಂಬಿಕೆಗೆ ಕುತ್ತು: ಪ್ರೊ| ಗೋವಿಂದನ್ ರಂಗರಾಜನ್
Result: ಮಹಾರಾಷ್ಟ್ರದಲ್ಲಿ ಎನ್ಡಿಎಗೆ ಜಯಭೇರಿ; ಮೋದಿ ನಾಯಕತ್ವಕ್ಕೆ ಮನ್ನಣೆ: ನಳಿನ್
Mangaluru: ಗೊಂದಲ ಮೂಡಿಸುವ ಬಿಜೆಪಿಗೆ ತಕ್ಕ ಪಾಠ: ಕೆಪಿಸಿಸಿ ಪ್ರ.ಕಾರ್ಯದರ್ಶಿ ಪದ್ಮರಾಜ್
Putturu: ಬಜೆಟ್ನಲ್ಲಿ ಹೊರಡಿಸಿರುವ ಆದೇಶ ಅನುಷ್ಠಾನಿಸದೆ ಕೃಷಿಕರಿಗೆ ವಂಚನೆ: ಮಠಂದೂರು
Udupi: ಪೇಜಾವರ ಶ್ರೀವಿಶ್ವಪ್ರಸನ್ನತೀರ್ಥ ಸ್ವಾಮೀಜಿ -ಗೃಹ ಸಚಿವ ಅಮಿತ್ ಶಾ ಭೇಟಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.