ಕೆನಡಾದಲ್ಲಿ ಉದ್ಯೋಗ ದೊರಕಿಸಿಕೊಡುವುದಾಗಿ ಹೇಳಿ ವಂಚನೆ
Team Udayavani, Jun 20, 2023, 7:48 AM IST
ಮಂಗಳೂರು: ಕೆನಡಾದಲ್ಲಿ ಉದ್ಯೋಗ ನೇಮಕಾತಿ ಮಾಡಿಸಿಕೊಡುವುದಾಗಿ ಹೇಳಿ ಹಣ ಪಡೆದು ವಂಚಿಸಿರುವ ಘಟನೆ ನಡೆದಿದೆ.
ವ್ಯಕ್ತಿಯೋರ್ವರು ವಿದೇಶದಲ್ಲಿ ಉದ್ಯೋಗಾವಕಾಶದ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಹುಡುಕಾಟ ನಡೆಸುತ್ತಿದ್ದಾಗ ಮಾ. 28ರಂದು ಇನ್ಸ್ಟಾಗ್ರಾಂ ಖಾತೆಯ ಮೂಲಕ ವಿಲಿಯಂ ಪೌಲ್ ಆ್ಯಂಟನಿಯ ಪರಿಚಯವಾಗಿತ್ತು.
ಆತ ತಾನು ಕೆನಡಾ ದೇಶದ ಪ್ರಜೆಯಾಗಿದ್ದು, ಇಮಿಗ್ರೇಷನ್ ಅಧಿಕಾರಿಯಾಗಿರುವುದಾಗಿ ಪರಿಚಯಿಸಿಕೊಂಡು ಕೆನಡಾ ದೇಶದಲ್ಲಿ ಉದ್ಯೋಗ ಒದಗಿಸಿಕೊಡುವುದಾಗಿ ನಂಬಿಸಿದ್ದ. ಅನಂತರ ವಾಟ್ಸ್ಆ್ಯಪ್ ಮೂಲಕ ನಿರಂತರ ಸಂಪರ್ಕದಲ್ಲಿದ್ದ. ಉದ್ಯೋಗ ನೇಮಕಾತಿಯ ಬಗ್ಗೆ ವಿವಿಧ ದಾಖಲೆಗಳನ್ನು ಕಳುಹಿಸುತ್ತಿದ್ದ. ನೇಮಕಾತಿಯ ಬಗ್ಗೆ ವಿವಿಧ ಕಾರಣಗಳನ್ನು ನೀಡಿ ಮಾ. 28ರಿಂದ ಜೂ. 9ರ ನಡುವೆ ಹಂತ ಹಂತವಾಗಿ 4.80 ಲ.ರೂ.ಗಳನ್ನು ವರ್ಗಾಯಿಸಿಕೊಂಡು ಬಳಿಕ ಉದ್ಯೋಗ ಒದಗಿಸದೆ ವಂಚಿಸಿದ್ದಾನೆ. ಈ ಬಗ್ಗೆ ಮಂಗಳೂರಿನ ಸೆನ್ ಅಪರಾಧ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ICC ಚಾಂಪಿಯನ್ಸ್ ಟ್ರೋಫಿ ಪಾಕಿಸ್ತಾನದಿಂದ ಸಂಪೂರ್ಣ ಸ್ಥಳಾಂತರ?: ಐಸಿಸಿ ಸಭೆಯಲ್ಲಿ ನಿರ್ಧಾರ
Maharashtra: ಬಿಜೆಪಿಗೆ ಮಹಾ ಸಿಎಂ ಅವಕಾಶ: ಇಬ್ಬರು ಮಿತ್ರರಿಗೂ ಡಿಸಿಎಂ ಪಟ್ಟ
ಪ್ರವಾಸಕ್ಕೆ ತೆರಳುತ್ತಿದ್ದ ಶಾಲಾ ವಿದ್ಯಾರ್ಥಿಗಳ ಬಸ್ ಪಲ್ಟಿ,ನಾಲ್ವರು ವಿದ್ಯಾರ್ಥಿಗಳಿಗೆ ಗಾಯ
Labor Card: ಅವಿಭಜಿತ ದ.ಕ. ಜಿಲ್ಲೆ: 1,286 ಕಾರ್ಮಿಕರ ಕಾರ್ಡ್ ಅಮಾನತು
Udupi: ಮರಳುಗಾರಿಕೆ ಆರಂಭವಾದರೂ ಅಕ್ರಮ ದಂಧೆ ಅವ್ಯಾಹತ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.