ಶೀಘ್ರವೇ NEP ಬದಲು SEP ಜಾರಿ: ಡಾ|ಎಂ.ಸಿ. ಸುಧಾಕರ

ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹೆಚ್ಚಳಕ್ಕೆ ಚಿಂತನೆ

Team Udayavani, Jun 20, 2023, 7:12 AM IST

DR M C SUDHAKAR

ಕಲಬುರಗಿ: ರಾಜ್ಯದಲ್ಲಿ ರಾಷ್ಟ್ರೀಯ ಶಿಕ್ಷಣ ನೀತಿ ಬದಲಾಗಿ ರಾಜ್ಯ ಶಿಕ್ಷಣ ನೀತಿ ಜಾರಿಗೆ ತರಲಾಗುವುದು ಎಂದು ಉನ್ನತ ಶಿಕ್ಷಣ ಸಚಿವ ಡಾ|ಎಂ.ಸಿ. ಸುಧಾಕರ್‌ ಸ್ಪಷ್ಟಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಎರಡು ವರ್ಷಗಳ ಹಿಂದೆ ನೂತನ ರಾಷ್ಟ್ರೀಯ ಶಿಕ್ಷಣ ನೀತಿ ಜಾರಿಗೆ ತರಲಾಗಿದೆ. ಆದರೆ ಕೆಲವು ಬದಲಾವಣೆಗಳಿಂದಾಗಿ ಪದವಿ ಮತ್ತು ಉನ್ನತ ಶಿಕ್ಷಣ ಹಂತದಲ್ಲಿ ಅಭ್ಯಾಸಕ್ಕೆ ತೊಂದರೆ ಎದುರಾಗಿದೆ ಎಂದು ತಜ್ಜರು ಹೇಳುತ್ತಿದ್ದಾರೆ. ಆದ್ದರಿಂದ ವಿದ್ಯಾರ್ಥಿಗಳ ಅಭ್ಯಾಸಕ್ಕೆ ಯಾವುದೇ ರೀತಿಯ ಧಕ್ಕೆಯಾಗದಂತೆ ಶಿಕ್ಷಣ ತಜ್ಞರ ಸಭೆ ಕರೆದು ಸಾಧಕ-ಬಾಧಕ ಚರ್ಚಿಸಿಯೇ ಎಸ್‌ಇಪಿ ಜಾರಿಗೆ ತರಲಾಗು ವುದು. ಈ ನಿಟ್ಟಿನಲ್ಲಿ ಶೀಘ್ರವೇ ರಾಜ್ಯ ಸರಕಾರದಿಂದ ನೀತಿ ಪ್ರಕಟಿಸಲಾಗುವುದು. ಶಿಕ್ಷಣದ ಗುಣಮಟ್ಟ ಮತ್ತು ಕಲಿಕೆಯಲ್ಲಿ ಅಗಾಧ ರೀತಿಯಲ್ಲಿ ಬದಲಾವಣೆ ತರುವ ನಿಟ್ಟಿನಲ್ಲಿ ನಾವು ನಮ್ಮ ಪದ್ಧತಿಯಲ್ಲಿಯೇ ಮಕ್ಕಳಿಗೆ ಪಾಠದ ಜತೆಯಲ್ಲಿ ಕೌಶಲ ನೀಡಬೇಕಾದ ಅಗತ್ಯವಿದೆ ಎಂದರು.

ಅನುದಾನ ಹೆಚ್ಚಳದತ್ತ ಚಿಂತನೆ
ರಾಜ್ಯದಲ್ಲಿ ಪ್ರಾಥಮಿಕ, ಪ್ರೌಢ ಹಾಗೂ ಉನ್ನತ ಶಿಕ್ಷಣ ಸೇರಿ ಶಿಕ್ಷಣ ಕ್ಷೇತ್ರಕ್ಕೆ ಒಟ್ಟಾರೆ ಶೇ.6ರಷ್ಟು ಅನುದಾನ ಆಯವ್ಯಯದಲ್ಲಿ ಹಂಚಿಕೆ ಮಾಡಲಾಗುತ್ತದೆ. ಆದರೂ ನಮಗೆ ಇದರಲ್ಲಿ ಉನ್ನತ ಶಿಕ್ಷಣಕ್ಕೆ ಲಭ್ಯವಾಗುವುದು ಶೇ.1.70ರಷ್ಟು ಮಾತ್ರ. ಹಂಚಿಕೆಯಾದ ಅನುದಾನದಲ್ಲಿ ಶೇ.88ರಷ್ಟು ಉಪನ್ಯಾಸಕರು ಹಾಗೂ ಇತರ ಸಿಬಂದಿ ಸಂಬಳಕ್ಕೆ ವಿನಿಯೋಗಿಸಲಾಗುತ್ತಿದೆ. ಇನ್ನು ರಾಜ್ಯದಲ್ಲಿ ಕಳೆದ 10 ವರ್ಷದಿಂದ ಇಲಾಖೆಗೆ ಹಂಚಿಕೆಯಾಗುವ ಅನುದಾನದಲ್ಲಿ ಹೆಚ್ಚಳ ಮಾಡಿಲ್ಲ. ಇದರಿಂದ ಶೈಕ್ಷಣಿಕ ಚಟುವಟಿಕೆ ಗುಣಪಡಿಸಲು ನಿರೀಕ್ಷಿತ ಮಟ್ಟದಲ್ಲಿ ಸಾಧ್ಯವಾಗುತ್ತಿಲ್ಲ. ಹೀಗಾಗಿ ಬರುವ ಆಯವ್ಯಯದಲ್ಲಿ ಇಲಾಖೆಗೆ ಹೆಚ್ಚಿನ ಅನುದಾನ ನಿರೀಕ್ಷಿಸಲಾಗಿದೆ ಎಂದರೆ.

ಪ್ರಸ್ತುತ ರಾಜ್ಯದಲ್ಲಿ 32 ಸರಕಾರಿ ವಿಶ್ವವಿದ್ಯಾಲಯಗಳಿವೆ. ಗುವಿವಿ ಸೇರಿದಂತೆ ಒಟ್ಟಾರೆ 15 ಸಾವಿರ ಅತಿಥಿ ಉಪನ್ಯಾಸಕರು ಕಾರ್ಯನಿರ್ವಹಿಸುತ್ತಿದ್ದಾರೆ. ಉಪನ್ಯಾಸಕ ಹುದ್ದೆ ಭರ್ತಿಗೆ ಮುಂದಿನ ದಿನದಲ್ಲಿ ಕ್ರಮ ಕೈಗೊಳ್ಳಲಾಗುವುದು ಎಂದರು. ಗುಲ್ಬರ್ಗ ವಿವಿ ಕುಲಪತಿ ಪ್ರೊ| ದಯಾನಂದ ಅಗಸರ್‌ ಇದ್ದರು.

ರಾಜ್ಯದ ಎಲ್ಲ ವಿವಿಗಳಲ್ಲಿ ಸಮಸ್ಯೆಗಳ ಕುರಿತು ಚರ್ಚಿಸಲು ಶೀಘ್ರವೇ ಸಿಎಂ ಜತೆ ಕುಲಪತಿಗಳ ಸಭೆಯನ್ನು ಈಗಾಗಲೇ ಮಾಡಿದ್ದು, ಇನ್ನೊಂದು ಸಭೆ ಸುತ್ತು ನಡೆಸಿ ಜ್ವಲಂತ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲಾಗುವುದು.
– ಡಾ|ಎಂ.ಸಿ.ಸುಧಾಕರ್‌, ಉನ್ನತ ಶಿಕ್ಷಣ ಸಚಿವ

ನಾಳೆ ಪದವಿ ಕಾಲೇಜುಗಳಲ್ಲಿ ಯೋಗ ದಿನ
ಬೆಂಗಳೂರು: ಬುಧವಾರ (ಜೂ.21) ಅಂತಾರಾಷ್ಟ್ರೀಯ ಯೋಗ ದಿನವನ್ನಾಗಿ ರಾಜ್ಯದ ಎಲ್ಲ ಸರಕಾರಿ, ಅನುದಾನಿತ ಹಾಗೂ ಖಾಸಗಿ ಪ್ರಥಮ ದರ್ಜೆ ಕಾಲೇಜುಗಳಲ್ಲಿ ಆಚರಿಸುವಂತೆ ಕಾಲೇಜು ಶಿಕ್ಷಣ ಇಲಾಖೆ ನಿರ್ದೇಶಿಸಿದೆ.

ಜೂ. 21ರಂದು ಕಾಲೇಜುಗಳಲ್ಲಿ ಅಂತಾರಾಷ್ಟ್ರೀಯ ಯೋಗ ದಿನವನ್ನು ಆಚರಿಸುವ ಮೂಲಕ ಯೋಗದ ಮಹತ್ವ ಹಾಗೂ ಪ್ರಯೋಜನಗಳ ಬಗ್ಗೆ ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲು ಶಿಕ್ಷಣ ಇಲಾಖೆ ತಿಳಿಸಿದೆ. ಯೋಗ ದಿನಾಚರಣೆ ಫೋಟೋಗಳನ್ನು ಕಾಲೇಜಿನ ವೆಬ್‌ಸೈಟ್‌ಗಳಲ್ಲಿ ಅಪ್‌ಲೋಡ್‌ ಮಾಡುವಂತೆಯೂ ಸೂಚನೆ ನೀಡಲಾಗಿದೆ.

ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಿಸಿಕೊಳ್ಳುವಂತಿಲ್ಲ
ಬೆಂಗಳೂರು: ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳದಂತೆ ಶಿಕ್ಷಣ ಇಲಾಖೆ ಸುತ್ತೋಲೆ ಹೊರಡಿಸಿದೆ.
2023-24ನೇ ಸಾಲಿನಲ್ಲಿ ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ನೀಡಲಾದ ಷರತ್ತುಗಳಲ್ಲಿ ಗ್ರಾಮ ಪಂಚಾಯತ್‌ ಸದಸ್ಯರಾಗಿರುವ ಮತ್ತು ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳಲು ಯಾವುದೇ ಷರತ್ತು ಇಲ್ಲವೆಂಬುದಾಗಿ ಉಲ್ಲೇಖೀಸಿರುವುದನ್ನು ಪರಿಶೀಲಿಸಲಾಗಿದೆ. 1993 ಕರ್ನಾಟಕ ಆ್ಯಕ್ಟ್ 14, ಪಂಚಾಯತ್‌ ರಾಜ್‌ 12 (ಜಿ) ಪ್ರಕಾರ ರಾಜ್ಯ ಸರಕಾರದ ಅಥವಾ ಸರಕಾರದ ನಿಯಂತ್ರಣಕ್ಕೆ ಒಳಪಟ್ಟಿರುವ ಯಾವುದೇ ಸ್ಥಳೀಯ ಅಥವಾ ಇತರ ಪ್ರಾಧಿಕಾರದಲ್ಲಿ ಲಾಭದಾಯಕ ಹುದ್ದೆ ಹೊಂದಿದ್ದರೆ ಸದಸ್ಯರಾಗಲು ಅನರ್ಹರಾಗಿರುತ್ತಾರೆ ಎಂಬುದನ್ನು ಸ್ಪಷ್ಟಪಡಿಸಲಾಗಿದೆ. ಈ ಹಿನ್ನೆಲೆಯಲ್ಲಿ ಗ್ರಾಮ ಪಂಚಾಯತ್‌ ಸದಸ್ಯರು ಹಾಗೂ ಚುನಾಯಿತ ಸದಸ್ಯರನ್ನು ಅತಿಥಿ ಶಿಕ್ಷಕರಾಗಿ ನೇಮಕ ಮಾಡಿಕೊಳ್ಳದಂತೆ ಶಿಕ್ಷಣ ಇಲಾಖೆ ಸೂಚಿಸಿದೆ.

ನಿಯಮ ಪಾಲನೆ ಕಡ್ಡಾಯ
ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿಗೆ ಸ್ವಯಂ ವಿವೇಚನಾ ಅಧಿಕಾರ ಇರುವುದಿಲ್ಲ. ಸಮಿತಿ ಅಧ್ಯಕ್ಷರು ಸಹ ಸರಕಾರ/ ಇಲಾಖೆ ನೀತಿ ಪಾಲಿಸುವುದು ಕಡ್ಡಾಯವಾಗಿರುತ್ತದೆ. ಇಂತಹ ಪ್ರಕರಣ ಇಲಾಖೆಯ ಗಮನಕ್ಕೆ ಬಂದ ಕೂಡಲೇ ಕ್ಷೇತ್ರ ಮಟ್ಟದ ಅಧಿಕಾರಿಗಳು ಕೂಡಲೇ ಚಾಲ್ತಿ ನಿಯಮಗಳನ್ನು ಉಲ್ಲೇಖೀಸಿ ಹಿಂಬರಹ ನೀಡಲು ಹಾಗೂ ಅಗತ್ಯವಿದ್ದಲ್ಲಿ ಪಂಚಾಯತ್‌ ರಾಜ್‌ ಅಧಿಕಾರಿಗಳನ್ನು ಸಂಪರ್ಕಿಸಿ ಅವರಿಂದಲೂ ಪಂಚಾಯತ್‌ ರಾಜ್‌ ನಿಯಮಗಳ ವಿವರಗಳನ್ನು ಪಡೆದು ಕ್ರಮ ಕೈಗೊಳ್ಳಲು ತಿಳಿಸಲಾಗಿದೆ.

ಟಾಪ್ ನ್ಯೂಸ್

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

adani

Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?

Naxal ಎನ್‌ಕೌಂಟರ್‌ ತನಿಖೆ ಆರಂಭ; ಉಳಿದವರು ಯಾವ ಕಡೆಗೆ ಪರಾರಿ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ashok

CM ಸಿದ್ದರಾಮಯ್ಯ ಭ್ರಷ್ಟ ಎಂದು ನಿರೂಪಿಸಲು ಯಶಸ್ವಿ: ಆರ್‌.ಅಶೋಕ್‌

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

BJP: ವಿಜಯೇಂದ್ರ ದಿಲ್ಲಿಗೆ: ವರಿಷ್ಠರ ಜತೆ “ಬಣ’ ರಾಜಕೀಯ ಚರ್ಚೆ?

1-siddu

Congress; ಅಧಿವೇಶನಕ್ಕೆ ಮುನ್ನ ಸಂಪುಟಕ್ಕೆ ಸರ್ಜರಿ? ಸಾಧ್ಯತೆಗಳೇನು?

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

High Court: ನಕ್ಸಲ್‌ ಚಟುವಟಿಕೆ: ಸಾವಿತ್ರಿ ಬಾಡಿ ವಾರಂಟ್‌ ಮನವಿ ಮರು ಪರಿಶೀಲನೆಗೆ ನಿರ್ದೇಶ

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

ಕಸ್ತೂರಿಂಗನ್‌ ವರದಿ ತಿರಸ್ಕಾರ ಆಗ್ರಹಿಸಿ “ಬೆಂಗಳೂರು ಚಲೋ’

MUST WATCH

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

udayavani youtube

ಲಾಭದಾಯಕ ಗುಲಾಬಿ ಕೃಷಿ ಮಾಡುವ ವಿಧಾನ

udayavani youtube

ಗೀತೋತ್ಸವ ತ್ರಿಪಕ್ಷ ಶತವೈಭವ ಕಾರ್ಯಕ್ರಮಕ್ಕೆ ಆಮಂತ್ರಿಸಿದ ಪರ್ಯಾಯ ಪುತ್ತಿಗೆ ಶ್ರೀಗಳು

ಹೊಸ ಸೇರ್ಪಡೆ

Three Nation Trip: ಮೂರು ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ

2-biggboss

BBK11: ಸೆಡೆಗಳನ್ನೆಲ್ಲ ಕಳ್ಸಿಯೇ ನಾನು ಮನೆಗೆ ಹೋಗೋದು- ಮತ್ತೆ ಗುಡುಗಿದ ರಜತ್

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

Mangaluru: ಟ್ರಾಯ್‌ನಿಂದ ಕರೆ ಮಾಡುವುದಾಗಿ ತಿಳಿಸಿ; 1.71 ಕೋ.ರೂ. ವಂಚನೆ

1-horoscope

Daily Horoscope: ಉದ್ಯೋಗ ಸ್ಥಾನದಲ್ಲಿ ಹಲವು ಬಗೆಯ ಅವಕಾಶಗಳು, ಆರೋಗ್ಯ ವೃದ್ಧಿ

Mangaluru: ಅಪ್ರಾಪ್ತ ಬಾಲಕಿಯ ಅತ್ಯಾ*ಚಾರ: ಗರ್ಭಪಾತ ಪ್ರಕರಣ ಅಪರಾಧಿಗೆ 20 ವರ್ಷ ಜೈಲು

ಬಾಲಕಿಯ ಅತ್ಯಾಚಾರ-ಗರ್ಭಪಾತ ಪ್ರಕರಣ: ಅಪರಾಧಿಗೆ 20 ವರ್ಷ ಜೈಲು ಶಿಕ್ಷೆ; 50 ಸಾವಿರ ರೂ. ದಂಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.