ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಕೆಟ್ಟ ರಾಜಕಾರಣ ಮಾಡುವುದು ಬೇಡ: ಸಿ.ಟಿ.ರವಿ


Team Udayavani, Jun 20, 2023, 11:18 AM IST

ಸಿ.ಟಿ.ರವಿ

ಬೆಂಗಳೂರು: ಅಕ್ಕಿಯ ವಿಚಾರದಲ್ಲಿ ಕಾಂಗ್ರೆಸ್ ಪಕ್ಷವು ಕೆಟ್ಟ ರಾಜಕಾರಣ ಮಾಡುವುದು ಬೇಡ ಎಂದು ರಾಷ್ಟ್ರೀಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಅವರು ಆಗ್ರಹಿಸಿದ್ದಾರೆ.

ಅಕ್ಕಿ ಕೊಡುವ ವಿಚಾರದಲ್ಲಿ ಕಾಂಗ್ರೆಸ್ ಪಾರ್ಟಿಯು ತನ್ನ ವೈಫಲ್ಯವನ್ನು ಮುಚ್ಚಿಕೊಳ್ಳಲು ಬಿಜೆಪಿಯನ್ನು, ಪ್ರಧಾನಿ ನರೇಂದ್ರ ಮೋದಿಯವರನ್ನು ಎಳೆದು ತರಲು ಹರ ಸಾಹಸ ಮಾಡುತ್ತಿದೆ ಎಂದು ಟೀಕಿಸಿದ್ದಾರೆ.

ಒಂದು ರಾಜ್ಯದ ಮುಖ್ಯಮಂತ್ರಿ ಎರಡು ಲಕ್ಷ ಟನ್ ಅಕ್ಕಿ ಬೇಡಿಕೆಗೆ ಸಂಬಂಧಿಸಿದಂತೆ ಪ್ರಧಾನ ಮಂತ್ರಿಗಳಿಗಾಗಲಿ, ಕೇಂದ್ರ ಆಹಾರ ನಾಗರೀಕ ಸರಬರಾಜು ಸಚಿವರಾಗಲಿ ಬೇಡಿಕೆ ಇಡಲೇ ಇಲ್ಲ. ಅವರೊಂದಿಗೆ ಮಾತನಾಡುವ ಸೌಜನ್ಯವನ್ನೂ ತೋರಿಸಲಿಲ್ಲ. ರಾಜ್ಯ ಸರ್ಕಾರ 2 ಲಕ್ಷ ಟನ್ ಅಕ್ಕಿಗಾಗಿ ಎಫ್‍ಸಿಐ ವಿಭಾಗೀಯ ವ್ಯವಸ್ಥಾಪಕರಿಗೆ 9/6/23 ರಂದು ಪತ್ರ ಮುಖೇನ ವಿನಂತಿ ಮಾಡುತ್ತಾರೆ. 12/6/23ರಂದು ವಿಭಾಗೀಯ ವ್ಯವಸ್ಥಾಪಕ ಇದಕ್ಕೆ ಅನುಮತಿ ನೀಡುತ್ತಾರೆ. ಆದರೆ ಈ ಅನುಮತಿ ನೀಡುವ ಮುನ್ನ ಅವರು ಕೇಂದ್ರ ಕಚೇರಿಯನ್ನು ಸಂಪರ್ಕಿಸದೆ ಪ್ರಾಯಶ: ಏಕಮುಖವಾಗಿ ತೀರ್ಮಾನ ಕೈಗೊಂಡ ಹಾಗೆ ಭಾಸವಾಗುತ್ತದೆ ಎಂದು ತಿಳಿಸಿದ್ದಾರೆ.

13/6/23 ರಂದು ಆಹಾರ ಮತ್ತು ನಾಗರಿಕ ಸರಬರಾಜು ಕಚೇರಿಯಿಂದ ಎಫ್‍ಸಿಐ ಕೇಂದ್ರ ಕಚೇರಿಗೆ ಒಎಂಎಸ್‍ಎಸ್ ಕೋಟಾದಡಿ ಅಕ್ಕಿ ಮಾರಾಟವನ್ನು ನಿಬರ್ಂಧಿಸಿರುವ ಬಗ್ಗೆ ಆದೇಶ ಬರುತ್ತದೆ. ಈ ತೀರ್ಮಾನವನ್ನು 08/06/23 ರಂದು ನಡೆದ ಸಭೆಯಲ್ಲಿ ತೀರ್ಮಾನವಾಗಿತ್ತು. ಈ ಪತ್ರವು ಕರ್ನಾಟಕ ಸರ್ಕಾರಕ್ಕೆ ಬರೆದ ಪತ್ರವಲ್ಲ ಬದಲಿಗೆ ಎಫ್‍ಸಿಐ ಮುಖ್ಯಸ್ಥರಿಗೆ ಬರೆದಿರುವ ಪತ್ರವಿದು ಎಂದು ವಿವರಿಸಿದ್ದಾರೆ.

ಈ ನಿರ್ಧಾರ ರಾಜ್ಯ ಸರ್ಕಾರ ಎಫ್‍ಸಿಐ ಗೆ ಪತ್ರ ಬರೆಯುವ ಒಂದು ದಿನ ಮುಂಚಿತವಾಗಿ ತೆಗೆದುಕೊಂಡ ತೀರ್ಮಾನ ಎಂದು ಅವರು ನೆನಪಿಸಿದ್ದಾರೆ. ಕೇಂದ್ರ ಸರಕಾರ ಮುಂಗಾರು ಮಳೆ, ಬೆಳೆಯನ್ನು ಆಧರಿಸಿ ಕೇಂದ್ರದಲ್ಲಿರುವ ದಾಸ್ತಾನನ್ನು ಪರಿಗಣಿಸಿ ಫುಡ್ ಸೆಕ್ಯೂರಿಟಿ ಆಕ್ಟ್ ಪ್ರಕಾರ ಉಚಿತವಾಗಿ ಅಕ್ಕಿ ಕೊಡಬೇಕಾಗಿರುವ ಸರಬರಾಜಿಗೆ ಯಾವುದೇ ಭಂಗವಾಗದಂತೆ ಕಾಲಕಾಲಕ್ಕೆ ಇಂತಹ ನಿರ್ಣಯ ತೆಗೆದುಕೊಳ್ಳುವುದು ಸರ್ವೇಸಾಮಾನ್ಯ. ಈಗಾಗಲೇ ಪ್ರತಿ ಕುಟುಂಬದ ಪ್ರತಿಯೊಬ್ಬ ಸದಸ್ಯರಿಗೂ ಐದು ಕೆಜಿ ಉಚಿತ ಅಕ್ಕಿ ನಿರಂತರವಾಗಿ ಕೇಂದ್ರ ಸರ್ಕಾರ ನೀಡುತ್ತಿದೆ ( ಕೋವಿಡ್ ಸಂಕಷ್ಟದ 84 ಕೋಟಿ ಜನರಿಗೆ ಕಾಲದಲ್ಲಿ ಪ್ರತಿ ವ್ಯಕ್ತಿಗೆ ಹತ್ತು ಕೆಜಿ ಅಕ್ಕಿಯಂತೆ ನೀಡಿದೆ) ಎಂದು ಗಮನ ಸೆಳೆದಿದ್ದಾರೆ.

ಪ್ರತಿ ಕುಟುಂಬದ ಅಕ್ಕಿಯ ಅವಶ್ಯಕತೆಯನ್ನು ಕೇಂದ್ರ ಸರಕಾರವೇ ಪೂರೈಸುತ್ತಿದೆ. ಆದ ಕಾರಣ, ರಾಜ್ಯ ಸರಕಾರ ಬಡ ಕುಟುಂಬಗಳಿಗೆ ಕೇಂದ್ರ ಸರಕಾರದ ಅಕ್ಕಿಯ ಜೊತೆಗೆ ರಾಗಿ, ಗೋಧಿ, ಬೆಳೆ ಮತ್ತು ರವೆಯನ್ನು ನೀಡಬಹುದಾಗಿದೆ. ತಾನು ವಾಗ್ದಾನ ಮಾಡಿರುವಂತೆ ಹತ್ತು ಕೆಜಿ ಅಕ್ಕಿಯ ಬದಲಾಗಿ ಅದಕ್ಕೆ ಸಮ ಮೊತ್ತದ ಹಣವನ್ನು ನೀಡಬಹುದಾಗಿದೆ ಎಂದು ಒತ್ತಾಯಿಸಿದ್ದಾರೆ.

ಈಗ ರಾಜ್ಯ ಸರ್ಕಾರಕ್ಕೆ ಬಡವರಿಗೆ ಸಹಾಯ ಮಾಡುವುದು ಮುಖ್ಯವಾಗಬೇಕೇ ಹೊರತು ರಾಜಕಾರಣವಲ್ಲ. ಇದು ಸಿದ್ದರಾಮಯ್ಯನವರಂತಹ ಅನುಭವಿ ರಾಜಕಾರಣಿಗೆ ತಿಳಿಯದ ಸಂಗತಿ ಅಲ್ಲ ಎಂದು ತಿಳಿಸಿದ್ದಾರೆ.

ಅನಗತ್ಯವಾಗಿ ಕಾಂಗ್ರೆಸ್ ಪಕ್ಷ ಮೋದಿಯವರು ಬಡವರ ಅನ್ನ ಕಸಿದುಕೊಳ್ಳುತ್ತಿದ್ದಾರೆ ಎಂದು ಅಪಪ್ರಚಾರ ಮಾಡುತ್ತಿದ್ದಾರೆ. ನಿರಂತರವಾಗಿ ಮೋದಿ ಸರ್ಕಾರ ದೇಶದ ಯಾವೊಬ್ಬ ನಾಗರಿಕನೂ ಹಸಿವಿನಿಂದ ಇರಬಾರದು ಎಂದೇ ಪ್ರತಿ ಬಿಪಿಎಲ್ ಕುಟುಂಬದ ಪ್ರತಿ ವ್ಯಕ್ತಿಗೆ 5ಕೆಜಿ ಅಕ್ಕಿಯನ್ನು ಉಚಿತವಾಗಿ ನೀಡುತ್ತಿರುವುದನ್ನು ಮರೆಮಾಚಿ ಟೀಕಿಸುತ್ತಿರುವುದು ಅತ್ಯಂತ ಖಂಡನೀಯ ಹಾಗು ಕೀಳು ಮಟ್ಟದ ರಾಜಕೀಯವಾಗಿದೆ ಎಂದು ಆಕ್ಷೇಪಿಸಿದ್ದಾರೆ.

ದೇಶದ ಯಾವುದೇ ಕುಟುಂಬವು ಅಕ್ಕಿ ಅಥವಾ ಗೋಧಿ ಇಲ್ಲ ಎಂದು ಹಸಿವಿನಿಂದ ಒಂದು ದಿನವು ಕಳೆದಿಲ್ಲ. ಹಾಗೆ ಅವರು ಕಳೆಯಬಾರದು ಎಂದೇ ಕೇಂದ್ರವು ಅವರಿಗೆ ಉಚಿತ ರೇಷನ್ ನೀಡುತ್ತಿರುವುದು. ಇವರ ರಾಜಕಾರಣಕ್ಕೆ ಮೋದಿಯವರ ವಿರುದ್ದ ಉತ್ಪ್ರೇಕ್ಷಿತ ಸುಳ್ಳಿನ ಕಂತೆಯ ಮೂಲಕ ನಡೆಯುತ್ತಿರುವ ದುರುದ್ದೇಶದ ಆರೋಪವನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದು ತಿಳಿಸಿದ್ದಾರೆ.

ಅತಿ ಮುಖ್ಯ ವಿಚಾರವೆಂದರೆ ಸನ್ಮಾನ್ಯ ಸಿದ್ದರಾಮಯ್ಯನವರೆ ನೀವು ಕೊಡಲು ನೀಡಿರುವ ಹತ್ಕು ಕೆಜಿ ಅಕ್ಕಿ ವಾಗ್ದಾನದಲ್ಲಿ  ಕೇಂದ್ರ ಸರ್ಕಾರ ನೀಡುತ್ತಿರುವ ಐದು ಕೆಜಿ ಅಕ್ಕಿಯನ್ನು ಲೆಕ್ಕಕ್ಕೆ  ಸೇರಿಸುವುದಿಲ್ಲ ಎಂದು ಭಾವಿಸುತ್ತೇನೆ ಎಂದಿದ್ದಾರೆ.

ಅಕ್ಕಿ ವಿತರಣೆಯ ಹೆಸರಲ್ಲಿ ರಾಜಕಾರಣ ಮಾಡದೆ ಮತ್ತು ಕೇಂದ್ರದ ಮೇಲೆ ಗೂಬೆ ಕೂರಿಸುವ ಸಣ್ಣತನ ತೋರದೆ ಬಡವರ ಆಹಾರದ ಅಗತ್ಯವನ್ನು  ಕೊಡಲು ಸೂಕ್ತ ಹಾಗು ಅಗತ್ಯವಿರುವ ಆಹಾರವನ್ನು ಅಥವಾ ಅದರ ಮೌಲ್ಯದಷ್ಟು ಹಣವನ್ನು ನೀಡಲು ವ್ಯವಸ್ಥೆ ಮಾಡಬೇಕು ಎಂದು ಒತ್ತಾಯಿಸಿದ್ದಾರೆ.

ಟಾಪ್ ನ್ಯೂಸ್

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

1-rcb

RCB ತಂಡಕ್ಕೆ ಸೇರಿದ ಫಿಲ್ ಸಾಲ್ಟ್, ಜಿತೇಶ್ ಶರ್ಮ, ಹ್ಯಾಜಲ್‌ವುಡ್‌

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ

Central Govt: ಸಂಸದೀಯ ಸಮಿತಿ ಪರೀಕ್ಷಿಸಲಿದೆ ಲ್ಯಾಟರಲ್‌ ಎಂಟ್ರಿ ನೇಮಕಾತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

MB-Patil-Mi

Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್‌

yatnal

Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ

1-huliraya

Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ

DKShi

Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್

MUST WATCH

udayavani youtube

ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

ಹೊಸ ಸೇರ್ಪಡೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Maharashtra: ಉದ್ದವ್‌ ಬಣದ 36 ಅಭ್ಯರ್ಥಿ ಸೋಲಿಸಿದ ಶಿಂಧೆ ಶಿವ ಸೇನೆ

Bisanala-Dairy

Achievement: ಮಹಾಲಿಂಗಪುರದ ಬಿಸನಾಳ ಹಾಲಿನ ಡೇರಿಗೆ ಕೇಂದ್ರದ ಪ್ರಶಸ್ತಿ ಗರಿ!

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

PM Modi: ಜ.11ರಿಂದ 2 ದಿನ ವಿಕಸಿತ ಭಾರತ ಯುವ ನಾಯಕರ ಸಮಾವೇಶ

Bantwala-Crime

Bantwala: ತುಂಬೆ ದೇವಸ್ಥಾನ ಕಳ್ಳತನ ಪ್ರಕರಣ: ಮೂವರು ಖದೀಮರ ಸೆರೆ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Mayawati: ಇನ್ನು ಮುಂದೆ ಉಪಚುನಾವಣೆಯಲ್ಲಿ ಸ್ಪರ್ಧೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.