Congress ಕಾರ್ಯಕರ್ತರೇ ಲಂಚ ಪಡೆದರೂ ಕ್ರಮ: ಡಿಕೆಶಿ ಎಚ್ಚರಿಕೆ
Team Udayavani, Jun 21, 2023, 7:26 AM IST
ಬೆಂಗಳೂರು: ಗೃಹಜ್ಯೋತಿ ಸೇರಿ ಯಾವುದೇ ಗ್ಯಾರಂಟಿಗಳಿಗೆ ಫಲಾನುಭವಿಗಳ ಅರ್ಜಿ ಭರ್ತಿ ಮಾಡಲು ಯಾರೂ ಲಂಚ ಸ್ವೀಕರಿಸಕೂಡದು. ಒಂದು ವೇಳೆ ಲಂಚ ಪಡೆದರೆ ಅಂತಹವರ ವಿರುದ್ಧ ನಿರ್ದಾಕ್ಷಿಣ್ಯ ಕ್ರಮ ಕೈಗೊಳ್ಳಲಾಗುವುದು. ಪಕ್ಷದ ಕಾರ್ಯಕರ್ತರೇ ಅಕ್ರಮದಲ್ಲಿ ಭಾಗಿಯಾದರೂ ಪ್ರಕರಣ ದಾಖಲಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಎಚ್ಚರಿಸಿದರು.
ನಗರದ ಸ್ವಾತಂತ್ರ್ಯ ಉದ್ಯಾನದಲ್ಲಿ ಕಾಂಗ್ರೆಸ್ ವತಿಯಿಂದ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮಾತನಾಡಿ, ಎಷ್ಟು ಪಾರದರ್ಶಕವಾಗಿ ಯೋಜನೆ ಜಾರಿ ಮಾಡಲು ಸಾಧ್ಯವೋ ಅಷ್ಟು ಪಾರದರ್ಶಕವಾಗಿ ಮಾಡಲಾಗುವುದು. ಯಾರಿಗೆ ಯೋಜನೆ ಬೇಡ ಎಂದು ತೀರ್ಮಾನಿಸುತ್ತಾರೆ ಅವರ ಹೊರತುಪಡಿಸಿ ಉಳಿದವರು ಈ ಯೋಜನೆಗೆ ಅರ್ಜಿ ತುಂಬಬೇಕು. ಗೃಹಜ್ಯೋತಿ ಯೋಜನೆ ನೋಂದಣಿ ಈಗಷ್ಟೇ ಆರಂಭವಾಗಿದೆ. ಎಲ್ಲರೂ ತಾಳ್ಮೆಯಿಂದ ನೋಂದಣಿ ಮಾಡಿಕೊಳ್ಳಬೇಕು. ಎಲ್ಲರಿಗೂ ಈ ಯೋಜನೆ ಸಿಗಲಿದೆ ಎಂದು ಭರವಸೆ ನೀಡಿದರು.
ಈಗಾಗಲೇ ಗೃಹಜ್ಯೋತಿ ಅಡಿ ನಿರೀಕ್ಷೆ ಮೀರಿ ಅರ್ಜಿ ಸಲ್ಲಿಕೆಯಾಗುತ್ತಿವೆ. ಆತಂಕಗೊಂಡು ಎಲ್ಲರೂ ಏಕಕಾಲದಲ್ಲಿ ಮುಗಿಬೀಳುವುದು ಬೇಡ. ಇದರಿಂದ ಸರ್ವರ್ ಮೇಲೆ ಒತ್ತಡ ಉಂಟಾಗುತ್ತದೆ ಎಂದ ಅವರು, ಆತುರದಿಂದ ತಾಂತ್ರಿಕ ತೊಂದರೆ ಆಗಬಾರದು ಎಂಬ ಕಾರಣಕ್ಕೆ ಗೃಹಲಕ್ಷ್ಮೀ ಯೋಜನೆಗೆ ಕಾಲಾವಕಾಶ ಪಡೆದು ಜಾರಿ ಮಾಡಲಾಗುತ್ತಿದೆ. ಬಾಪು ಕೇಂದ್ರ, ಪಂಚಾಯ್ತಿ ಕೇಂದ್ರ ಹಾಗೂ ಸ್ವಂತ ಮೊಬೈಲ್‌ನಲ್ಲೂ ಅರ್ಜಿ ಸಲ್ಲಿಕೆಗೆ ಅವಕಾಶ ಕಲ್ಪಿಸಲಾಗುತ್ತಿದೆ ಎಂದು ಮಾಹಿತಿ ನೀಡಿದರು.
ಇದರ ಜತೆಗೆ ಪಕ್ಷದ ಕಾರ್ಯಕರ್ತರು ಜನಪ್ರತಿನಿಧಿಗಳು ಮನೆ-ಮನೆಗೆ ತೆರಳಿ ಪಕ್ಷಬೇಧ ಮರೆತು ಈ ಯೋಜನೆ ಅರ್ಜಿ ತುಂಬಬೇಕು. ಪ್ರತಿ ಬೂತ್ ಮಟ್ಟದಲ್ಲಿ ಓರ್ವ ವಿದ್ಯಾವಂತ ಮಹಿಳೆ ಹಾಗೂ ಪುರುಷ ಪ್ರತಿ ಮನೆಗೆ ಹೋಗಿ ಅರ್ಜಿ ತುಂಬಬೇಕು ಎಂದು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
ಮಕ್ಕಳನ್ನು ಶಾಲೆಗೆ ಸೇರಿಸೋದು ಮುಖ್ಯವಲ್ಲ, ನಿತ್ಯವೂ ಕಳುಹಿಸಿ… :ಸಚಿವ ಮಧು ಬಂಗಾರಪ್ಪ
Protest: ಡಿ.10 ರಂದು ಸುವರ್ಣಸೌಧಕ್ಕೆ 5 ಸಾವಿರ ಟ್ರ್ಯಾಕ್ಟರ್ ಮುತ್ತಿಗೆ; ಕೂಡಲಸಂಗಮ ಶ್ರೀ
Dandeli: ಬೇಡರ ಶಿರಗೂರಿನ ರೈತರ ಗದ್ದೆಗಳಲ್ಲಿ ಮತ್ತೆ ಕಾಣಿಕೊಂಡ ಕಾಡಾನೆಗಳು
Nalatawad: ವಿದ್ಯುತ್ ಶಾಕ್‌ನಿಂದ ಮೃತಪಟ್ಟ ಕೋತಿಗೆ ಸ್ಥಳೀಯ ನಿವಾಸಿಗಳಿಂದ ಅಂತ್ಯಸಂಸ್ಕಾರ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Politics: ಫಡ್ನವೀಸ್ ಗೆ ಬೆಂಬಲ ನೀಡಿದ ಅಜಿತ್; ಮಹಾರಾಷ್ಟ್ರದಲ್ಲಿ ಮುಗಿಯದ ಸಿಎಂ ತಿಕ್ಕಾಟ
Video: ನೋಟಿನ ಮಾಲೆಯಲ್ಲಿ ನೋಟು ಎಗರಿಸಿ ಕಳ್ಳ… ಮದುವೆ ಬಿಟ್ಟು ಕಳ್ಳನ ಹಿಂದೆ ಓಡಿದ ವರ
Sudeep: ʼಮ್ಯಾಕ್ಸ್ʼ ರಿಲೀಸ್ ದಿನ ಫಿಕ್ಸ್: ಕಿಚ್ಚನ ಸಿಟ್ಟಿಗೆ ಎಚ್ಚೆತ್ತ ನಿರ್ಮಾಣ ಸಂಸ್ಥೆ
Bidar: ಭಾರತದಿಂದಲೇ ವಕ್ಫ್ ತೊಲಗಿಸಬೇಕು: ಯತ್ನಾಳ್
Veerendra Heggade: ಡಾ.ಡಿ.ವೀರೇಂದ್ರ ಹೆಗ್ಗಡೆಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ ಪ್ರಶಸ್ತಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.