ಟಿಪ್ಪರ್‌ ಲಾರಿ ಅಪಘಾತದ ಸುತ್ತ ಅನುಮಾನದ ಹುತ್ತ!

Team Udayavani, Jun 21, 2023, 4:15 PM IST

ಟಿಪ್ಪರ್‌ ಲಾರಿ ಅಪಘಾತದ ಸುತ್ತ ಅನುಮಾನದ ಹುತ್ತ!

ಚಿಕ್ಕಬಳ್ಳಾಪುರ: ತಾಲೂಕಿನ ಗುಮ್ಮಲಾಪುರ ಗ್ರಾಮದ ಬಳಿ ಶನಿವಾರ ಸಂಜೆ ಗಣಿಗಾರಿಕೆಯ ಖಾಲಿ ಟಿಪ್ಪರ್‌ ಲಾರಿಯ ಅಪಘಾತದಲ್ಲಿ ವ್ಯಕ್ತಿಯೊಬ್ಬರು ಮೃತಪಟ್ಟಿರುವ ವಿಚಾರ ಈಗ ಸಾಕಷ್ಟು ಅನುಮಾನಗಳಿಗೆ ಕಾರಣವಾಗಿದ್ದು, ಅಪಘಾತ ಆಕಸ್ಮಿಕವಲ್ಲ, ಪೂರ್ವನಿಯೋಜಿತ ಎಂಬ ಚರ್ಚೆ ಮುನ್ನೆಲೆಗೆ ಬಂದಿದೆ.

ಏನಿದು ಪ್ರಕರಣ?: ಜೂ.17ರಂದು ಲಾರಿ ಅಪಘಾತದಲ್ಲಿ ರಾಘವೇಂದ್ರ ಬಿನ್‌ ಬೈಯಣ್ಣ (30) ಎಂಬುವರು ಗಾಯಗೊಂಡು ಚಿಕಿತ್ಸೆ ಫ‌ಲಾಕಾರಿ ಯಾಗಿದೇ ಸೋಮವಾರ ರಾತ್ರಿ ಬೆಂಗಳೂರಿನ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದರು. ಈ ಬಗ್ಗೆ ಅಪಘಾತ ಎಂದು ತಂದೆಯ ದೂರಿನ ಮೇರೆಗೆ ಪೆರೇಸಂದ್ರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆದರೆ, ಈಗ ಅದು ಆಕಸ್ಮಿಕವಾಗಿ ನಡೆದ ಅಪಘಾತವಲ್ಲ. ದುರುದ್ದೇಶದಿಂದ ಟಿಪ್ಪರ್‌ ಲಾರಿ ಚಾಲಕ ಪೂರ್ವನಿಯೋಜಿತವಾಗಿ ಅಪಘಾತ ಮಾಡಿದ್ದಾನೆ ಎಂಬ ಆರೋಪ ಬಲವಾಗಿ ಕೇಳಿ ಬರುತ್ತಿದೆ.

ಗುಮ್ಮಲಾಪುರ ಗ್ರಾಮದ ಸರ್ವೆ ನಂ 15/4 ರಲ್ಲಿ 2.ಎಕರೆ 20 ಗುಂಟೆ ಜಮೀನು ಇದ್ದು ಹೊಲದ ಬಳಿ ಕೆಲಸದ ನಿಮಿತ್ತ ಎ.ಬಿ.ರಾಘವೇಂದ್ರ ಬಿನ್‌ ಬೈಯಣ್ಣ ಹೋಗಿ ಕೆಲಸ ಮುಗಿಸಿಕೊಂಡು ರಾತ್ರಿ ಸುಮಾರು 7 ಗಂಟೆ ಸಮಯದಲ್ಲಿ ತನ್ನ ಮಗ ತಮ್ಮ ಜಮೀನಿನ ಪಕ್ಕದಲ್ಲಿ ಗುಮ್ಮಲಾಪುರ ಬೆಟ್ಟಕ್ಕೆ ಹೋಗುವ ಮಣ್ಣಿನ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದನು. ಆಗ ಕೆ.ಎ-50-5189 ನೋಂದಣಿ ಸಂಖ್ಯೆಯ ಮಹೇಂದ್ರ ಕಂಪನಿಯ ಓಪನ್‌ ಬಾಡಿ ಲಾರಿ ಚಾಲಕ ಗುಮ್ಮಲಾಪುರ ಬೆಟ್ಟಕ್ಕೆ ಹತ್ತುತ್ತಿರುವಾಗ ತನ್ನ ವಾಹನವನ್ನು ಅಜಾಗರೂಕತೆಯಿಂದ ಮತ್ತು ನಿರ್ಲಕ್ಷತೆಯಿಂದ ಚಾಲನೆ ಮಾಡಿಕೊಂಡು ಬಂದು ಡಿಕ್ಕಿ ಹೊಡೆಸಿ ಅಪಘಾತ ನಡೆಸಿದ ಪರಿಣಾಮ ಮಗನಿಗೆ ಬಲಪಾದದ ಬಳಿ ರಕ್ತದ ಗಾಯವಾಗಿದ್ದು, ತೊಡೆಯು ಕಟ್‌ ಆಗಿರುತ್ತೆ. ಬಲ ಪಕ್ಕೆಲುಬು ಬಳಿ ರಕ್ತದ ಗಾಯವಾಗಿದ್ದು, ಬಳಿಕ ಮೃತಪಟ್ಟಿದ್ದಾನೆಂದು ಅವರ ತಂದೆ ಬೈಯಣ್ಣ ಪೊಲೀಸರಿಗೆ ದೂರು ನೀಡಿದ್ದರು. ಆದರೆ, ಈಗ ದಾರಿ ವಿಚಾರದಲ್ಲಿ ರಾಘವೇಂದ್ರ ಮೇಲೆ ಟಿಪ್ಪರ್‌ ಲಾರಿ ಹರಿಸಿ ಕೊಲೆ ಮಾಡಲಾಗಿದೆ ಎಂಬ ಮಾತು ಕೇಳಿ ಬರುತ್ತಿದೆ.

ತನಿಖೆಗೆ ನಡೆಸಲು ಎಸ್ಪಿಗೆ ಉಸ್ತುವಾರಿ ಸಚಿವರ ಸೂಚನೆ: ಕೊಲೆ ಶಂಕೆ, ಆರೋಪ ಕೇಳಿ ಬಂದ ಬೆನ್ನಲ್ಲೇ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಂ.ಸಿ.ಸುಧಾಕರ್‌ ಈ ಬಗ್ಗೆ ಆಳವಾಗಿ ತನಿಖೆ ನಡೆಸುವಂತೆ ಎಸ್ಪಿಗೆ ಸೂಚಿಸಿದ್ದಾರೆ. ಘಟನೆ ಕುರಿತು ಚಿಕ್ಕಬಳ್ಳಾಪುರ ಉಪ ವಿಭಾಗದ ಆರಕ್ಷಕ ಉಪಾಧೀಕ್ಷಕ ವಿ.ಕೆ.ವಾಸುದೇವ್‌ ಮಾತನಾಡಿ, ತಂದೆ ಅಪಘಾತ ನಡೆದಿದೆಯೆಂದು ದೂರು ನೀಡಿದ್ದಾರೆ.

ಸದ್ಯಕ್ಕೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಎಲ್ಲಾ ಆಯಾಮಗಳಲ್ಲಿ ನಾವು ತನಿಖೆ ನಡೆಸುತ್ತಿದ್ದೇವೆ. ಈಗಾಗಲೇ ತಲೆ ಮರೆಸಿಕೊಂಡಿರುವ ಲಾರಿ ಚಾಲಕನ ಪತ್ತೆಗೆ ವಿಶೇಷ ತಂಡ ರಚಿಸಿದ್ದೇವೆ ಎಂದರು.

ಟಾಪ್ ನ್ಯೂಸ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Riots against mosque survey: Police fire tear gas at Sambhal

Sambhal: ಮಸೀದಿ ಸರ್ವೇ ವಿರೋಧಿಸಿ ಗಲಾಟೆ: ಅಶ್ರುವಾಯು ಸಿಡಿಸಿದ ಪೊಲೀಸರು

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Perth test: ಜೈಸ್ವಾಲ್‌, ವಿರಾಟ್‌ ಶತಕ; ಆಸೀಸ್‌ ಗೆ ಭಾರೀ ಗುರಿ ನೀಡಿದ ಭಾರತ

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

Varanasi: ಕುಟುಂಬಿಕರ ಎದುರಿಗೆ ಪೊಲೀಸ್‌ ಅಧಿಕಾರಿಗೆ ಥಳಿಸಿದ ಗುಂಪು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CKB-Crime

Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್‌: ಆರ್‌. ಅಶೋಕ್‌ ಆರೋಪ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ

ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!

MUST WATCH

udayavani youtube

ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು

udayavani youtube

ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?

udayavani youtube

ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್‌ |

udayavani youtube

ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್

udayavani youtube

ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|

ಹೊಸ ಸೇರ್ಪಡೆ

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

IPL Mega Auction: ಹರಾಜು ಆರಂಭ; ಭರ್ಜರಿ ಬಿಡ್‌ ಗಳಿಸಿದ ವೇಗಿ ಅರ್ಶದೀಪ್‌ ಸಿಂಗ್

20-uv-fusion

UV Fusion: ಜೀವಂತಿಕೆ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

Saira Banu: ಎ.ಆರ್‌.ರೆಹಮಾನ್‌ರಿಂದ ದೂರವಾದ ಬಗ್ಗೆ ಕೊನೆಗೂ ಮೌನ ಮುರಿದ ಸಾಯಿರಾ

19-uv-fusion

Garbage Disposal: ಕಸದ ಸೂಕ್ತ ವಿಲೇವಾರಿ ನಮ್ಮದೇ ಜವಾಬ್ದಾರಿ

1-abaz-matr-11

Maharashtra; ಇನ್‌ಸ್ಟಾದಲ್ಲಿ 56 ಲಕ್ಷ ಫಾಲೋವರ್ಸ್‌ ಇದ್ರು ಸಿಕ್ಕಿದ್ದು ಕೇವಲ 155 ಮತ!!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.