ಮಹಮ್ಮದ್ ಸಾವದ್ ಕೊಲೆ ಪ್ರಕರಣ ಭೇದಿಸಿದ ಪೊಲೀಸರು: ಬಂಟ್ವಾಳ ಮೂಲದ ಇಬ್ಬರ ಬಂಧನ
Team Udayavani, Jun 21, 2023, 5:27 PM IST
ಮೂಡಿಗೆರೆ: ಯುವಕನೋರ್ವನನ್ನು ಕೊಲೆ ಮಾಡಿ ಮೂಡಿಗೆರೆ ತಾಲ್ಲೂಕಿನ ಪ್ರಸಿದ್ಧ ಪ್ರವಾಸಿ ತಾಣ ದೇವರಮನೆ ಸಮೀಪ ಶವವನ್ನು ಎಸೆದು ಹೋಗಿದ್ದ ಪ್ರಕರಣವನ್ನು ಪೊಲೀಸರು ಭೇದಿಸಿದ್ದು, ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ಮೂಲದ ಮಹಮ್ಮದ್ ಸಾವದ್ ಎಂಬ ಯುವಕನ ಕೊಲೆಗೆ ಸಂಬಂಧಿಸಿದಂತೆ ಬಂಟ್ವಾಳ ಮೂಲದ ರಿಜ್ವಾನ್ ಮತ್ತು ಝೈನುಲ್ಲಾ ಎಂಬುವವರನ್ನು ಬಂಧಿಸಲಾಗಿದೆ.
ಪ್ರಕರಣದ ತನಿಖೆ ಕೈಗೊಂಡಿದ್ದ ಮೂಡಿಗೆರೆ ವೃತ್ತ ನಿರೀಕ್ಷಕ ಸೋಮಶೇಖರ್ ಮತ್ತು ಬಣಕಲ್ ಎಸ್.ಐ. ಜಂಜೂರಾಜ್ ಮಹಾಜನ್ ನೇತೃತ್ವದ ಪೊಲೀಸ್ ತಂಡ ನಿನ್ನೆ ಆರೋಪಿಗಳನ್ನು ದಕ್ಷಿಣ ಕನ್ನಡ ಜಿಲ್ಲೆಯ ಗುರುವಾಯನಕೆರೆ ಎಂಬಲ್ಲಿ ಬಂಧಿಸಿ ಇಂದು ಮೂಡಿಗೆರೆ ನ್ಯಾಯಾಲಯಕ್ಕೆ ಹಾಜರುಪಡಿಸಿದ್ದಾರೆ. ಇನ್ನೂ ಮೂವರು ಆರೋಪಿಗಳು ತಲೆಮರೆಸಿಕೊಂಡಿದ್ದು, ಅವರ ಸೆರೆಗೆ ಪೊಲೀಸರು ಬಲೆ ಬೀಸಿದ್ದಾರೆ.
ಗಾಂಜಾ ವ್ಯವಹಾರದಲ್ಲಿ ಕೊಲೆ :
ಪೊಲೀಸರ ಪ್ರಾಥಮಿಕ ತನಿಖೆಯಿಂದ ಈ ಕೊಲೆ ಮಾದಕವಸ್ತು ಗಾಂಜಾ ವ್ಯವಹಾರಕ್ಕೆ ಸಂಬಂಧಿಸಿದಂತೆ ಉಂಟಾದ ಗಲಾಟೆಯಿಂದ ಸಂಭವಿಸಿದೆ ಎಂದು ತಿಳಿದುಬಂದಿದೆ. ಪಡುಬಿದ್ರೆಯ ಬೆಂಗ್ರೇ ಎಂಬಲ್ಲಿ ಸಾವದ್ ನನ್ನು ಕೊಲೆ ಮಾಡಿ ಹೆಣವನ್ನು ತಂದು ದೇವರಮನೆ ಗುಡ್ಡದಲ್ಲಿ ಎಸೆದು ಹೋಗಿದ್ದರು ಎಂದು ತಿಳಿದುಬಂದಿದೆ.
ಜೂನ್ 8 ರಂದು ದೇವರಮನೆ ಸಮೀಪ ರಸ್ತೆಯಂಚಿನಲ್ಲಿ ಕೊಳೆತ ಸ್ಥಿತಿಯಲ್ಲಿ ಅಪರಿಚಿತ ಶವ ಪತ್ತೆಯಾಗಿತ್ತು. ಆ ಶವ ತಮ್ಮ ಮಗನದೆಂದು ಬಂಟ್ವಾಳ ಮೂಲದ ಕುಟುಂಬ ಗುರುತಿಸಿತ್ತು.
ಕೊಲೆಗೀಡಾದ ಸಾವದ್ ಮಾದಕವಸ್ತು ವ್ಯಸನಿಯಾಗಿದ್ದ ಮತ್ತು ಮಾದಕವಸ್ತು ಮಾರಾಟ ದಂಧೆಯಲ್ಲಿ ತೊಡಗಿಸಿಕೊಂಡಿದ್ದ ಎಂದು ತಿಳಿದು ಬಂದಿತ್ತು. ಕೊನೆಗೆ ಆತ ತನ್ನ ಮಾದಕವಸ್ತು ಮಾರಾಟದ ಗ್ಯಾಂಗ್ ನಿಂದಲೇ ಕೊಲೆಗೀಡಾಗಿದ್ದಾನೆ.
ಪ್ರಕರಣವನ್ನು ಶೀರ್ಘವಾಗಿ ಭೇದಿಸಿ ಆರೋಪಿಗಳನ್ನು ಬಂಧಿಸಿದ ಪೊಲೀಸರ ಕಾರ್ಯಕ್ಕೆ ಸಾರ್ವಜನಿಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.
ಇದನ್ನೂ ಓದಿ: Mumbai: ಟ್ರೇಡ್ ವರ್ಲ್ಡ್ ಕಟ್ಟಡದ ಲಿಫ್ಟ್ ಕುಸಿದು 14 ಮಂದಿಗೆ ಗಾಯ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
Karnataka Govt.,: ಹೊಸ ಗೋಶಾಲೆ ಇಲ್ಲ, ಇರುವುದಕ್ಕೆ ಬಲ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Shimoga; ತೇಜೋವಧೆ ಮಾಡಲು ನನ್ನ ಹೆಸರಲ್ಲಿ ಕಳಪೆ ಸ್ವೀಟ್ ಹಂಚಿಕೆ; ಡಾ.ಸರ್ಜಿ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.