President ಮುರ್ಮು ಅವರನ್ನು ಭೇಟಿಯಾದ ಸಿಎಂ ; ಅಕ್ಕಿ ವಿಚಾರ ಶಾ ಜತೆ ಚರ್ಚೆ
ಅಕ್ಕಿ ವಿಚಾರದಲ್ಲಿ ಕೇಂದ್ರದೊಂದಿದೆ ತಿಕ್ಕಾಟ...!
Team Udayavani, Jun 21, 2023, 7:13 PM IST
ನವದೆಹಲಿ: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಂಗಳವಾರರಾಷ್ಟ್ರಪತಿ ಭವನದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರನ್ನು ಭೇಟಿ ಮಾಡಿದರು.
ರಾಜ್ಯದ ಅನ್ನ ಭಾಗ್ಯ ಅಕ್ಕಿ ಕುರಿತು ತೀವ್ರ ಗದ್ದಲದ ನಡುವೆಯೇ ಸಿದ್ದರಾಮಯ್ಯ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಬುಧವಾರ ಭೇಟಿಯಾಗಲಿದ್ದಾರೆ. ಮೇ 20 ರಂದು ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಸಿದ್ದರಾಮಯ್ಯ ಅವರು ರಾಷ್ಟ್ರ ರಾಜಧಾನಿಗೆ ಮೊದಲ ಭೇಟಿ ನೀಡಿದ್ದಾರೆ.
“ನಾನು ರಾಷ್ಟ್ರಪತಿ ಅವರನ್ನು ಭೇಟಿಯಾದೆ. ಸಿಎಂ ಆದ ನಂತರ ಇದು ನನ್ನ ಮೊದಲ ಭೇಟಿ. ರಾತ್ರಿ 9 ಗಂಟೆಗೆ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಲಿದ್ದೇನೆ. ಇದೊಂದು ಸೌಜನ್ಯದ ಭೇಟಿಯಾಗಿದ್ದು ಅಕ್ಕಿ ವಿಚಾರವನ್ನು ಪ್ರಸ್ತಾಪಿಸುತ್ತೇನೆ ಎಂದು ಸಿದ್ದರಾಮಯ್ಯ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಕೇಂದ್ರ ಆಹಾರ ಸಚಿವ ಪಿಯೂಷ್ ಗೋಯಲ್ ಅವರು ಈ ಬಗ್ಗೆ ಚರ್ಚಿಸಲು ದೆಹಲಿಯಲ್ಲಿ ಇಲ್ಲ ಮತ್ತು ಅವರೊಂದಿಗೆ ಸಭೆ ನಡೆಸಲು ಇನ್ನೂ ಸಮಯ ಕೇಳಿಲ್ಲ ಎಂದು ಹೇಳಿದರು.
ಬಿಪಿಎಲ್ ಮತ್ತು ಅಂತ್ಯೋದಯ ಕಾರ್ಡುದಾರರಿಗೆ 10 ಕೆಜಿ ಅಕ್ಕಿಯನ್ನು ನೀಡಿರುವ ಭರವಸೆಯನ್ನು ಈಡೇರಿಸುವ ಹಿನ್ನಲೆಯಲ್ಲಿ ರಾಜ್ಯಕ್ಕೆ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಕೋರಿ ಎಫ್ ಸಿ ಐ ಗೆ ಜೂನ್ 9 ರಂದು ಪತ್ರ ಬರೆಯಲಾಗಿತ್ತು. ಎಫ್ ಸಿ ಐ ಅವರು ತಮ್ಮಲ್ಲಿ 7 ಲಕ್ಷ ಮೆಟ್ರಿ ಟನ್ ಅಕ್ಕಿ ದಾಸ್ತಾನು ಇದ್ದು, ರಾಜ್ಯ ಕೋರಿರುವ 2,28,000 ಮೆಟ್ರಿಕ್ ಟನ್ ಅಕ್ಕಿ ಸರಬರಾಜು ಮಾಡಲು ಯಾವುದೇ ತೊಂದರೆಯಿಲ್ಲ ಎಂದು ಜೂನ್ 12 ರಂದು ಪತ್ರ ಮುಖೇನ ತಿಳಿಸಿದ್ದರು. ಎಫ್ ಸಿಐ ನ ಡೆಪ್ಯೂಟಿ ಮ್ಯಾನೇಜರ್ ನ್ನು ಭೇಟಿಯಾಗಿ ಈ ಬಗ್ಗೆ ಖಚಿತಪಡಿಸಿಕೊಳ್ಳಲಾಗಿತ್ತು. ಆದರೆ ಜೂನ್ 13 ರಂದು ಕೇಂದ್ರ ಆಹಾರ ಇಲಾಖೆಯವರು ಎಫ್ ಸಿ ಐ ಗೆ ಪತ್ರ ಬರೆದು ರಾಜ್ಯಗಳಿಗೆ ಕೇಂದ್ರದಿಂದ ಅಕ್ಕಿ ಸರಬರಾಜನ್ನು ನಿಲ್ಲಿಸಲಾಗಿದ್ದು, ನಂತರ ಜೂನ್ 14 ರಂದು ಎಫ್ ಸಿ ಐ ನ ಅಧ್ಯಕ್ಷರು ಪತ್ರ ಬರೆದು , ರಾಜ್ಯಕ್ಕೆ ಅಕ್ಕಿ ಸರಬರಾಜು ಮಾಡಲು ಸಾಧ್ಯವಿಲ್ಲ ಎಂದು ತಿಳಿಸಿದರು. ಮೊದಲು ಅಕ್ಕಿ ನೀಡುವುದಾಗಿ ಒಪ್ಪಿಕೊಂಡು ನಂತರ ನಿರಾಕರಿಸಿದ್ದು , ಭಾರತ ಸರ್ಕಾರ ಕೀಳುಮಟ್ಟದ ರಾಜಕಾರಣವನ್ನು ಪ್ರದರ್ಶಿಸಿದೆ ಎಂದರು.
ಅನ್ನ ಭಾಗ್ಯ ಯೋಜನೆಗೆ ಅಕ್ಕಿಯನ್ನು ಪಡೆಯಲು ಬಗ್ಗೆ ಅನೇಕ ರಾಜ್ಯಗಳಿಗೆ ಮನವಿ ಮಾಡಿಕೊಳ್ಳಲಾಗಿದೆ. ಆದರೆ ಅವರು ಸಂಪೂರ್ಣ 2.28 ಲಕ್ಷ ಮೆ.ಟನ್ ನೀಡಲು ಸಾಧ್ಯವಿಲ್ಲ. ಆಂಧ್ರಪ್ರದೇಶದವರು 42 ರೂ.ಗಳಿಗೆ ಅಕ್ಕಿ ನೀಡುವುದಾಗಿ ತಿಳಿಸಿದ್ದು, ಸಾರಿಗೆ ವೆಚ್ಚ ಅಧಿಕವಾಗಲಿದೆ. ತೆಲಂಗಾಣದವರು ಭತ್ತ ಮಾತ್ರ ಲಭ್ಯವಿರುವುದಾಗಿ ತಿಳಿಸಿದ್ದಾರೆ. ಛತ್ತೀಸ್ಗಡದ ಮುಖ್ಯಮಂತ್ರಿಗಳು ಒಂದು ತಿಂಗಳಿಗೆ ಮಾತ್ರ 1 ಲಕ್ಷ ಮೆಟ್ರಿಕ್ ಟನ್ ನೀಡುವುದಾಗಿ ತಿಳಿಸಿದ್ದಾರೆ. ಪಂಜಾಬ್ ಮುಖ್ಯಮಂತ್ರಿಗಳು ಅಧಿಕಾರಿಗಳೊಂದಿಗೆ ಚರ್ಚಿಸಿ ತಿಳಿಸುವುದಾಗಿ ಭರವಸೆ ನೀಡಿದ್ದಾರೆ ಎಂದರು.
ರಾಜ್ಯಗಳಿಗೆ ಅಕ್ಕಿ ನೀಡುವುದನ್ನು ಸ್ಥಗಿತಗೊಳಿಸಿರುವ ಬಗ್ಗೆ ನೀತಿ ನಿರ್ಧಾರ ಕೈಗೊಂಡಿದ್ದು, ಈ ಬಗ್ಗೆ ಅಂತರ ಸಚಿವಾಲಯಗಳ ಸಭೆ ನಡೆದಿದೆ ಹಾಗೂ ಮಾಹಿತಿಯ ಕೊರತೆಯಿಂದ ಪತ್ರ ಬರೆದಿದ್ದಾಗಿ ಕೇಂದ್ರ ಸರ್ಕಾರ ಹೇಳಿದೆ ಎಂಬ ಸುದ್ದಿಗಾರರ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿದ ಮುಖ್ಯಮಂತ್ರಿಗಳು, ಎಫ್.ಸಿ.ಐ ಕೇಂದ್ರ ಸರ್ಕಾರದ ಸ್ವಾಮ್ಯ ಸಂಸ್ಥೆಯಾಗಿದ್ದು, ಅಕ್ಕಿ ನೀಡುವುದಾಗಿ ಒಪ್ಪಿ ಪತ್ರ ಬರೆದಿದ್ದಾರೆ ಎಂದರು.
ಕರ್ನಾಟಕದ ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಕೆ.ಎಚ್. ಮುನಿಯಪ್ಪ, ವಸತಿ ಸಚಿವ ಬಿ.ಝಡ್.ಜಮೀರ್ ಅಹಮದ್ ಖಾನ್, ಸಮಾಜ ಕಲ್ಯಾಣ ಸಚಿವ ಎಚ್.ಸಿ.ಮಹದೇವಪ್ಪ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅವರು ಸಿದ್ದರಾಮಯ್ಯ ಅವರೊಂದಿಗೆ ದೆಹಲಿಯಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Three Nation Trip: 5 ದಿನದಲ್ಲಿ 3 ದೇಶಗಳ ಪ್ರವಾಸ ಮುಗಿಸಿ ತವರಿಗೆ ಮರಳಿದ ಪ್ರಧಾನಿ ಮೋದಿ
Adani ವಿರುದ್ಧ ಲಂಚ ಆರೋಪ; ಏನಿದು ಪ್ರಕರಣ? ಅಮೆರಿಕದಲ್ಲಿ ಪ್ರಕರಣ ಏಕೆ?
Mahayuti ಗೆಲುವು: ಆ್ಯಕ್ಸಿಸ್ ಮೈ ಇಂಡಿಯಾ, ಚಾಣಕ್ಯ ಸಮೀಕ್ಷೆ ಭವಿಷ್ಯ
Khalistan; ಕೆನಡಾ ಹಿಂದೂಗಳ ಮೇಲೆ ದಾಳಿ: ಉಗ್ರರ ಹೊಸ ಬೆದರಿಕೆ
MUST WATCH
ಹೊಸ ಸೇರ್ಪಡೆ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
Perth Test: ಟೀಂ ಇಂಡಿಯಾಗಿಲ್ಲ ಶುಭಾರಂಭ: ಮೊದಲ ಸೆಶನ್ ನಲ್ಲೇ ಪರದಾಡಿದ ಬ್ಯಾಟರ್ ಗಳು
Siruguppa: ಜೋಡೆತ್ತಿನ ಬಂಡಿಗೆ ಡಿಕ್ಕಿ ಹೊಡೆದ ಬಸ್; ಎತ್ತು ಸಾವು
Tragedy: ಸ್ನೇಹಿತನ ಮದುವೆ ಮಂಟಪದಲ್ಲೇ ಕುಸಿದು ಬಿದ್ದು ಅಮೆಜಾನ್ ಉದ್ಯೋಗಿ ಮೃತ್ಯು
Yellapur: ಕಣ್ಣಿಗೆ ಖಾರಾಪುಡಿ ಎರಚಿ ಹಣ, ಸ್ಕೂಟಿ ದರೋಡೆ; ಆರೋಪಿಗಳ ಬಂಧನ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.