ಹೆರಿಗೆ ಸಂದರ್ಭ ರಕ್ತಸ್ರಾವ: ಮಹಿಳೆ ಸಾವು
Team Udayavani, Jun 22, 2023, 5:39 AM IST
ಉಪ್ಪಿನಂಗಡಿ: ಹಿರೇಬಂಡಾಡಿ ಗ್ರಾಮದ ಮುರ ಕಾಲನಿ ನಿವಾಸಿ ಬಾಲಕೃಷ್ಣ ಗೌಡ ಅವರ ಪತ್ನಿ, ಹಿರೇ ಬಂಡಾಡಿ ಗ್ರಾಮದ ಆಶಾ ಕಾರ್ಯಕರ್ತೆ ಭವ್ಯಾ (28 ವ.) ಜೂ. 20ರಂದು ರಾತ್ರಿ ಹೆರಿಗೆ ಸಂದರ್ಭ ತೀರಾ ರಕ್ತಸ್ರಾವ ಉಂಟಾಗಿ ಮೃತ ಪಟ್ಟಿದ್ದು, ಹಸುಗೂಸು ಆರೋಗ್ಯವಾಗಿರುವುದಾಗಿ ತಿಳಿದು ಬಂದಿದೆ.
ಭವ್ಯಾ ಅವರಿಗಿದು 3ನೇ ಹೆರಿಗೆಯಾಗಿದ್ದು, ಸೋಮವಾರ ಹೆರಿಗೆ ನೋವು ಕಾಣಿಸಿಕೊಂಡ ಕಾರಣ ಪುತ್ತೂರು ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಮಂಗಳವಾರ ರಾತ್ರಿ ಗಂಡು ಮಗುವಿಗೆ ಜನ್ಮ ನೀಡಿದ್ದರು.
ಹೆರಿಗೆಯಾಗುತ್ತಲೇ ತೀವ್ರ ರಕ್ತಸ್ರಾವ ಉಂಟಾಗಿದ್ದು, ಇದನ್ನು ತಡೆಗಟ್ಟಲು ಸಾಧ್ಯವಾಗದ ಕಾರಣ ಅವರನ್ನು ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿಯೂ ಚಿಕಿತ್ಸೆ ಫಲಕಾರಿಯಾಗದೆ ಜೂ. 21ರಂದು ಅವರು ಮೃತಪಟ್ಟಿದ್ದಾರೆ.
ಮೃತರು ಪತಿ ಹಾಗೂ ಮೂವರು ಮಕ್ಕಳನ್ನು ಅಗಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belthangady: ನ. 21- ಮೇ 23: ಧರ್ಮಸ್ಥಳ ಮೇಳದಿಂದ ಯಕ್ಷ ಗಾನ ಸೇವೆ
Mangaluru: ಜೀವನ ಶೈಲಿ ಸಂಬಂಧಿ ಕಾಯಿಲೆಗೆ ಪರಿಹಾರ ಅಗತ್ಯ
Someshwara ದೇಗುಲ: ಶಿವಪಂಚಾಕ್ಷರಿ ಕೋಟಿ ನಾಮಜಪ ಯಜ್ಞ ಸಂಪನ್ನ
Dharmasthala: ನ.26-30: ಶ್ರೀ ಕ್ಷೇತ್ರ ಧರ್ಮಸ್ಥಳದ ಲಕ್ಷದೀಪೋತ್ಸವ
ಹೊಸ ಟ್ರೆಂಡ್ ನ ಪ್ಯಾಂಟ್ ಧರಿಸಿದ ಯುವಕ;ಸ್ನೇಹಿತರಿಂದ ಅವಮಾನ, ನೊಂದ ಯುವಕ ಆತ್ಮಹತ್ಯೆಗೆ ಯತ್ನ
MUST WATCH
ಹೊಸ ಸೇರ್ಪಡೆ
Bengaluru: ಬಟ್ಟೆ ಗುಣಮಟ್ಟ ದೃಢೀಕರಣಕ್ಕೂ ಬಂತು ಸೆನ್ಸರ್!
ಆಕಸ್ಮಿಕವಾಗಿ ಹಾರಿದ ಗುಂಡು: ಬರ್ತ್ ಡೇ ದಿನವೇ ಹಾರಿ ಹೋಯ್ತು ಭಾರತೀಯ ಮೂಲದ ವಿದ್ಯಾರ್ಥಿ ಜೀವ
ಬೆಳಗಾವಿ: ಸಿಎಂ ಸಿದ್ದರಾಮಯ್ಯಗೆ ಬೆಳಗಾವಿ ಅಧಿವೇಶನವೇ ಕೊನೆ-ಬಿ.ವೈ ವಿಜಯೇಂದ್ರ
Anandapura: ಬೈಕ್ ನಲ್ಲಿ ಶಾಲೆಗೆ ತೆರಳುತ್ತಿರುವಾಗಲೇ ಶಿಕ್ಷಕನಿಗೆ ಹೃದಯಾಘಾತ
Chikkamagaluru: ಅಪರಿಚಿತ ವಾಹನ ಡಿಕ್ಕಿಯಾಗಿ ಕಂಡಕ್ಟರ್ ಸಾವು
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.