![1-congress](https://www.udayavani.com/wp-content/uploads/2025/02/1-congress-415x299.jpg)
![1-congress](https://www.udayavani.com/wp-content/uploads/2025/02/1-congress-415x299.jpg)
Team Udayavani, Jun 22, 2023, 5:30 PM IST
ಕಡಬ : ಮಂಗಳೂರು/ಉಪ್ಪಿನಂಗಡಿ, ಜೂ. 22: ಖಾತೆ ಬದಲಾವಣೆಗೆ ಸಂಬಂಧಿಸಿದಂತೆ 20 ಸಾವಿರ ರೂ. ಲಂಚ ಸ್ವೀಕರಿಸುತ್ತಿದ್ದ ಕೌಕ್ರಾಡಿ ಗ್ರಾಮ ಪಂಚಾಯ್ ಅಭಿವೃದ್ಧಿ ಅ ಧಿಕಾರಿ ಮಹೇಶ್ ಜಿ.ಎನ್. ಅವರನ್ನು ಮಂಗಳೂರು ಲೋಕಾಯುಕ್ತ ಪೊಲೀಸರು ಗುರುವಾರ ವಶಕ್ಕೆ ಪಡೆದಿದ್ದಾರೆ.
ಬೆಳ್ತಂಗಡಿ ತಾಲೂಕು ಕೊಕ್ಕಡ ಗ್ರಾಮದ ವ್ಯಕ್ತಿಯೊಬ್ಬರು ಕೌಕ್ರಾಡಿಯ ತಮ್ಮ ಜಮೀನಿನ 9/11 ಖಾತೆ ಬದಲಾವಣೆಯನ್ನು ತನ್ನ ಹೆಸರಿಗೆ ಮಾಡಿಸಲು 2017ರಲ್ಲಿ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಿದ್ದರು. ಆದರೆ ಖಾತೆ ಬದಲಾವಣೆಯಾಗದ ಹಿನ್ನೆಲೆಯಲ್ಲಿ 2021ರಲ್ಲಿ ಮತ್ತೆ ಗ್ರಾಮ ಪಂಚಾಯತ್‌ಗೆ ಅರ್ಜಿ ಸಲ್ಲಿಸಿ, ಶುಲ್ಕ ಪಾವತಿಸಿದ್ದರು. ಆದರೂ ಅವರ ಕೆಲಸ ಆಗಿಲ್ಲ.
ಈ ಹಿನ್ನೆಲೆಯಲ್ಲಿ ಜೂ. 20ರಂದು ಪಂಚಾಯತ್‌ಗೆ ಹೋಗಿ ವಿಚಾರಿಸಿದಾಗ, ಪಿಡಿಒ ಮಹೇಶ್ ಕೆಲಸ ಮಾಡಿಕೊಡಲು 20 ಸಾವಿರ ರೂ. ಬೇಡಿಕೆ ಇಟ್ಟಿದ್ದರು. ಆದರಂತೆ ಜೂ. 22ರಂದು ಪಿಡಿಒ ದೂರುದಾರರಿಂದ ಲಂಚದ ಹಣವನ್ನು ಸ್ವೀಕರಿಸುತ್ತಿರುವಾಗ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿ ಬಂಧಿಸಿದ್ದಾರೆ. ಲಂಚದ ಹಣವನ್ನು ವಶಪಡಿಸಿಕೊಂಡು ಆರೋಪಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿದೆ.
ಲೋಕಾಯುಕ್ತ ಎಸ್‌ಪಿ ಸಿ.ಎ. ಸೈಮನ್ ಮಾರ್ಗದರ್ಶನದಲ್ಲಿ ಡಿವೈಎಸ್‌ಪಿ ಕಲಾವತಿ ಕೆ. ಹಾಗೂ ಚಲುವರಾಜು, ಇನ್‌ಸ್ಪೆಕ್ಟರ್ ಅಮಾನುಲ್ಲಾ ಎ., ವಿನಾಯಕ ಬಿಲ್ಲವ ಅವರು ಸಿಬಂದಿ ಜತೆ ಕಾರ್ಯಾಚರಣೆಯಲ್ಲಿ ಭಾಗವಹಿಸಿದ್ದರು.
You seem to have an Ad Blocker on.
To continue reading, please turn it off or whitelist Udayavani.