2ಎ ಮೀಸಲು: ಅಧಿವೇಶನ ಬಳಿಕ ತಜ್ಞರ ಸಭೆ… ಸಿಎಂ ಸಿದ್ದರಾಮಯ್ಯ
ಬಿಜೆಪಿ ಸರ್ಕಾರದಿಂದ ತರಾತುರಿಯಲ್ಲಿ ನಿರ್ಧಾರ; ಗೊಂದಲ ಸೃಷ್ಟಿ
Team Udayavani, Jun 24, 2023, 6:45 AM IST
ಬೆಂಗಳೂರು: ಹಿಂದಿನ ಬಿಜೆಪಿ ಸರ್ಕಾರವು ಕಾಟಾಚಾರಕ್ಕೆ ಮೀಸಲಾತಿ ನೀಡಿದ್ದರಿಂದ ಗೊಂದಲ ಸೃಷ್ಟಿಯಾಗಿದೆ ಎಂದು ಆರೋಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ, ಬಜೆಟ್ ಅಧಿವೇಶನದ ನಂತರ ಕಾನೂನು ತಜ್ಞರೊಂದಿಗೆ ಸಭೆ ಕರೆದು ಸೂಕ್ತ ತೀರ್ಮಾನ ಕೈಗೊಳ್ಳಲಾಗುವುದು ಎಂದು ತಿಳಿಸಿದರು.
ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಪಂಚಮಸಾಲಿ ಸಮುದಾಯವನ್ನು ರಾಜ್ಯ 2ಎ ಪಟ್ಟಿಗೆ ಹಾಗೂ ಕೇಂದ್ರ ಸರ್ಕಾರದ ಒಬಿಸಿ ಮೀಸಲಾತಿಗೆ ಸೇರಿಸುವ ಸಂಬಂಧ ಕೂಡಲಸಂಗಮ ಪೀಠದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ಪಂಚಮಸಾಲಿ ಶಾಸಕರ ನಿಯೋಗದೊಂದಿಗೆ ನಡೆಸಿದ ಸಮಾಲೋಚನೆ ಸಭೆಯಲ್ಲಿ ಅವರು ಮಾತನಾಡಿದರು.
ಕಾಟಾಚಾರಕ್ಕಾಗಿ ಮೀಸಲಾತಿ ಕೊಡಬಾರದು. ಬಿಜೆಪಿಗೆ ಮೀಸಲಾತಿ ಕೊಡುವುದು ಬೇಕಾಗಿರಲಿಲ್ಲ. ಅದಕ್ಕಾಗಿಯೇ ನ್ಯಾಯಾಲಯಕ್ಕೆ ಹೋದರೆ, ಪ್ರಕರಣ ಬಿದ್ದು ಹೋಗುವ ರೀತಿಯಲ್ಲಿ ಮೀಸಲಾತಿ ನೀಡಿದರು. ಇದರಿಂದ ಗೊಂದಲ ಸೃಷ್ಟಿಯಾಗಿದೆ. ಸಂವಿಧಾನ ತಜ್ಞರ ಜತೆ ಚರ್ಚಿಸಿ ಈ ಗೊಂದಲ ಬಗೆಹರಿಸಬೇಕಾಗಿದೆ. ಬಜೆಟ್ ಅಧಿವೇಶನದ ಬಳಿಕ ಪಂಚಮಸಾಲಿ ಸಮುದಾಯವನ್ನು ಕೇಂದ್ರದ ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಲು ಶಿಫಾರಸು ಮಾಡುವ ಬಗ್ಗೆ ಕಾನೂನು ತಜ್ಞರೊಂದಿಗೆ ಸಭೆ ಕರೆದು ತೀರ್ಮಾನ ಕೈಗೊಳ್ಳಲಾಗುವುದು ಎಂದು ಹೇಳಿದರು.
ಮೂಗಿಗೆ ತುಪ್ಪ ಸವರಿದ ಬಿಜೆಪಿ: ಹಿಂದಿನ ಸರ್ಕಾರ ಮೀಸಲಾತಿ ವಿಚಾರದಲ್ಲಿ ತರಾತುರಿಯಲ್ಲಿ ನಿರ್ಧಾರ ಕೈಗೊಂಡು ಗೊಂದಲ ಸೃಷ್ಟಿಸಿದೆ. ಮೂಗಿಗೆ ತುಪ್ಪ ಸವರುವ ಬದಲು ಹಣೆಗೆ ತುಪ್ಪ ಸವರಿದೆ ಎಂದ ಮುಖ್ಯಮಂತ್ರಿಗಳು, ಮೀಸಲಾತಿ ವಿಚಾರವಾಗಿ ಆತುರದ ನಿರ್ಧಾರ ಸಲ್ಲದು. ಸಂವಿಧಾನಾತ್ಮಕ ಹಾಗೂ ಕಾನೂನಿನ ಚೌಕಟ್ಟಿನಲ್ಲಿ ತೀರ್ಮಾನ ಮಾಡಬೇಕು. ಹಾಗಾಗಿ ಸಭೆ ಕರೆದು ಕೂಲಂಕಷವಾಗಿ ಚರ್ಚಿಸಲಾಗುವುದು ಎಂದರು.
ಇದಕ್ಕೂ ಮುನ್ನ ಮಾತನಾಡಿದ ಬಸವ ಜಯಮೃತ್ಯುಂಜಯ ಸ್ವಾಮೀಜಿ, ಶೈಕ್ಷಣಿಕವಾಗಿ ಹಾಗೂ ಸಾಮಾಜಿಕವಾಗಿ ಹಿಂದುಳಿದ ಪಂಚಮಸಾಲಿ ಸಮುದಾಯವನ್ನು ಹಿಂದುಳಿದ ವರ್ಗಗಳ ಪಟ್ಟಿಗೆ ಸೇರಿಸಿದಲ್ಲಿ ಅವರೂ ಮುಖ್ಯವಾಹಿನಿಗೆ ಬರಲು ಅನುಕೂಲವಾಗುತ್ತದೆ ಎಂದು ತಿಳಿಸಿದರು.
ಶಾಸಕ ವಿನಯ ಕುಲಕರ್ಣಿ ಮಾತನಾಡಿ, “ಮುಸ್ಲಿಂ ಸಮುದಾಯದ ಪಾಲಿನ ಮೀಸಲಾತಿಯನ್ನು ಕಿತ್ತು ನಮಗೆ ಕೊಟ್ಟಿದ್ದನ್ನು ನಾವು ಅವತ್ತೆ ವಿರೋಧಿಸಿದ್ದೆವು’ ಎಂದು ಗಮನಕ್ಕೆ ತಂದರು. ಸಭೆಯಲ್ಲಿ ಸಮುದಾಯದ 15 ಮಂದಿ ಶಾಸಕರು ಹಾಗೂ ಪಂಚಮಸಾಲಿ ಸಮುದಾಯದ ಪ್ರಮುಖರು ಉಪಸ್ಥಿತರಿದ್ದರು.
ನುಡಿದಂತೆ ನಡೆದವರು…
“ನುಡಿದಂತೆ ನಡೆದವರು ನೀವು’ ಎಂದು ಸಿಎಂ ಸಿದ್ದರಾಮಯ್ಯ ಅವರಿಗೆ ಸ್ವಾಮೀಜಿ ಸೇರಿದಂತೆ ಪಂಚಮಸಾಲಿ ಶಾಸಕರಿಂದ ಮೆಚ್ಚುಗೆ ವ್ಯಕ್ತವಾಯಿತು. ಸ್ವಾಮೀಜಿ ಮಾತನಾಡಿ, “ನುಡಿದಂತೆ ನಡೆದ ಮುಖ್ಯಮಂತ್ರಿಗಳು ನೀವು. ಬಸವಣ್ಣ ಅವರ ಭಾವಚಿತ್ರವನ್ನು ಸರ್ಕಾರಿ ಕಚೇರಿಗಳಲ್ಲಿ ಕಡ್ಡಾಯಗೊಳಿಸಿದವರು, ರಾಣಿ ಚನ್ನಮ್ಮ ಜಯಂತಿಯನ್ನು ಮೊದಲ ಬಾರಿಗೆ ಆಚರಿಸಿದವರು’ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು. ಇದಕ್ಕೆ ಉಳಿದ ಶಾಸಕರು ಸಹಮತ ವ್ಯಕ್ತಪಡಿಸಿದರು.
ಸಣ್ಣ ಉದ್ಯಮಿಗಳ ಸಮಸ್ಯೆ ಬಗೆಹರಿಸಲು ಪ್ರತ್ಯೇಕ ಸಭೆ
ಬೆಂಗಳೂರು: ಸೂಕ್ಷ್ಮ, ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ ಸಮಸ್ಯೆಗಳಿಗೆ ಪರಿಹಾರ ಕಂಡುಕೊಳ್ಳಲು ಇಂಧನ, ಕೈಗಾರಿಕೆ ಹಾಗೂ ಕಾಸಿಯಾ ಜತೆ ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಗೃಹ ಕಚೇರಿ ಕೃಷ್ಣಾದಲ್ಲಿ ಶುಕ್ರವಾರ ಕರ್ನಾಟಕ ಸಣ್ಣ ಕೈಗಾರಿಕೆಗಳ ಸಂಘದ ಅಧ್ಯಕ್ಷ ಕೆ.ಎನ್. ನರಸಿಂಹಮೂರ್ತಿ ನೇತೃತ್ವದ ನಿಯೋಗದ ಜತೆ ಚರ್ಚಿಸಿದ ಬಳಿಕ ಮಾತನಾಡಿದ ಅವರು, “ನಮ್ಮ ಸರ್ಕಾರ ಅಧಿಕಾರಕ್ಕೆ ಬರುವ ಮೊದಲೇ ಕೆಇಆರ್‌ಸಿ ವಿದ್ಯುತ್ ಬೆಲೆ ಹೆಚ್ಚಳ ಮಾಡಿದೆ. ರಾಜಕೀಯ ಉದ್ದೇಶಕ್ಕೆ ಬಿಜೆಪಿ ತನ್ನ ತಪ್ಪನ್ನು ನಮ್ಮ ಮೇಲೆ ಹೇರುತ್ತಿದೆ ಎನ್ನುವ ಸತ್ಯ ನಿಮಗೂ ಗೊತ್ತಿದೆ’ ಎಂದು ಮುಖ್ಯ ಮಂತ್ರಿ ಸ್ಪಷ್ಟಪಡಿಸಿದರು.
ವಿದ್ಯುತ್ ದರ ಏರಿಸಿದ ಕೆಇಆರ್‌ಸಿ ಶಿಫಾರಸು ಅನ್ನು ಮರುಪರಿಶೀಲಿಸುವಂತೆ ಮನವಿ ಮಾಡಲು ನಿಮಗೆ ಅವಕಾಶ ಇದೆ. ನೀವೊಮ್ಮೆ ನಿಮಗಾಗುತ್ತಿರುವ ಸಮಸ್ಯೆಗಳ ಕುರಿತು ಕರ್ನಾಟಕ ವಿದ್ಯುತ್ಛಕ್ತಿ ನಿಯಂತ್ರಣಾ ಆಯೋಗ (ಕೆಇಆರ್‌ಸಿ)ಕ್ಕೆ ಮನವಿ ಮಾಡಿಕೊಳ್ಳಬಹುದು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಅವರು ನಿಯೋಗಕ್ಕೆ ಸೂಚಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Gold Fraud Case: ಐಶ್ವರ್ಯಗೌಡ ದಂಪತಿಯ 3 ಐಷಾರಾಮಿ ಕಾರು ಜಪ್ತಿ
Gold Cheating Case: ಚಿನಾಭರಣ ವಂಚನೆ… ಶ್ವೇತಾಗೌಡ ವಿರುದ್ಧ ಇನ್ನೊಂದು ದೂರು
Metro: ಮೆಟ್ರೋದಲ್ಲಿ ಮಹಿಳಾ ಟೆಕಿ ಫೋಟೋ ತೆಗೆದು ಸಿಕ್ಕಿಬಿದ್ದ ಆಯುರ್ವೇದಿಕ್ ವೈದ್ಯ
MUST WATCH
ದೈವ ನರ್ತಕರಂತೆ ಗುಳಿಗ ದೈವದ ವೇಷ ಭೂಷಣ ಧರಿಸಿ ಕೋಲ ಕಟ್ಟಿದ್ದ ಅನ್ಯ ಸಮಾಜದ ಯುವಕ
ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ
ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ
ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ
ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ
ಹೊಸ ಸೇರ್ಪಡೆ
Congress; ಔತಣಕೂಟದ ಸಭೆಗೆ ರಾಜಕೀಯ ಮಹತ್ವ ಬೇಕಿಲ್ಲ: ಸತೀಶ್ ಜಾರಕಿಹೊಳಿ
Udupi: ಬೀದಿ ನಾಯಿಗಳಿಗೆ 29.13 ಲಕ್ಷ ರೂ. ವೆಚ್ಚ!
Hubli; ಅಧಿಕಾರಕ್ಕಾಗಿ ಕಾಂಗ್ರೆಸ್ ಯಾವ ಕೀಳು ಮಟ್ಟಕ್ಕೆ ಇಳಿಯಲು ಹೇಸಲ್ಲ: ಪ್ರಹ್ಲಾದ ಜೋಶಿ
Mangaluru: ಪಿಎಂ ಸ್ವನಿಧಿ ಯೋಜನೆ; ನಗರದಲ್ಲಿ 17.87 ಕೋ.ರೂ. ಸಾಲ ವಿತರಣೆ
Shimoga; ಕಾಂಗ್ರೆಸ್ ಸರಕಾರ ಹಿಂದೂ ಸಮಾಜದ ತಾಳ್ಮೆ ಪರೀಕ್ಷೆ ಮಾಡುತ್ತಿದೆ: ಈಶ್ವರಪ್ಪ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.