Karnataka: ಕಮಿಷನ್‌ ಹಾವಳಿಗೆ ಕಡಿವಾಣ- ಸಿಎಂ ಭರವಸೆ

-ಗುತ್ತಿಗೆದಾರರ ಬಾಕಿ ಬಿಲ್‌ ಬಿಡುಗಡೆಗೆ ಮನವಿ ಮಾಡಿದ ಕೆಂಪಣ್ಣ ನೇತೃತ್ವದ ನಿಯೋಗ

Team Udayavani, Jun 24, 2023, 7:06 AM IST

SIDDARAMAYYA 2 IMP

ಬೆಂಗಳೂರು: ರಾಜ್ಯದಲ್ಲಿ ಕಮಿಷನ್‌ ಹಾವಳಿಗೆ ಕಡಿವಾಣ ಹಾಕಿ, ಸ್ಥಳೀಯ ಗುತ್ತಿಗೆದಾರರ ಹಿತಕ್ಕೆ ಧಕ್ಕೆ ಆಗದಂತೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಭರವಸೆ ನೀಡಿದ್ದಾರೆ.

ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ನೇತೃತ್ವದ ನಿಯೋಗವು ಮುಖ್ಯಮಂತ್ರಿಗಳನ್ನು ಭೇಟಿಯಾಗಿ ಬಾಕಿ ಬಿಲ್ಲುಗಳ ಪಾವತಿ ಮತ್ತು ಸ್ಥಳೀಯ ಗುತ್ತಿಗೆದಾರರಿಗೆ ಗುತ್ತಿಗೆ ಸಿಗುವಂತೆ ಕ್ರಮ ಕೈಗೊಳ್ಳುವಂತೆ ಕೋರಿಕೊಂಡ ಸಂದರ್ಭದಲ್ಲಿ ಈ ಆಶ್ವಾಸನೆಯನ್ನು ನೀಡಿದ್ದಾರೆ.

ಬಿಜೆಪಿ ಸರಕಾರದ ಆರ್ಥಿಕ ಅಶಿಸ್ತು ಮತ್ತು ಕಮಿಷನ್‌ ಹಾವಳಿಯಿಂದ ಗುತ್ತಿಗೆದಾರರಿಗೆ ಸಮಸ್ಯೆ ಆಗಿದೆ. ಬಿಜೆಪಿಯಿಂದ ಹಳಿ ತಪ್ಪಿರುವ ಆರ್ಥಿಕತೆಯನ್ನು ಸರಿಯಾಗಿಸಲು ಸ್ವಲ್ಪ ಸಮಯಾವಕಾಶ ಅಗತ್ಯವಿದೆ. ಬಜೆಟ್‌ ಅಧಿವೇಶನದ ಬಳಿಕ ಬಿಬಿಎಂಪಿ ಹಾಗೂ ಆರ್ಥಿಕ ಇಲಾಖೆ ಕಾರ್ಯದರ್ಶಿಗಳ ಸಭೆ ಕರೆದು ಗುತ್ತಿಗೆದಾರರ ಬೇಡಿಕೆಗಳ ಬಗ್ಗೆ ಪರಿಶೀಲಿಸುವುದಾಗಿ ಮುಖ್ಯಮಂತ್ರಿಗಳು ತಿಳಿಸಿದರು.

ಬಾಕಿ ಬಿಲ್‌ ಬಿಡುಗಡೆ ಮಾಡುವಂತೆ ಮನವಿ
ಹೊಸ ಸರಕಾರ ರಚನೆಯಾದ ಸಂದರ್ಭದಲ್ಲಿ ಬಾಕಿ ಇರುವ ಬಿಲ್‌ ಪಾವತಿ ಮತ್ತು ವಿವಿಧ ಇಲಾಖೆಗಳು, ನಿಗಮ ಮತ್ತು ಮಂಡಳಿಗಳು ಹೊಸದಾಗಿ ಕೈಗೆತ್ತಿಕೊಂಡಿರುವ ಕಾಮಗಾರಿಗಳನ್ನು ಸ್ಥಗಿತಗೊಳಿಸುವುದು ಸಾಮಾನ್ಯ. ಆದರೆ 15-20 ದಿನಗಳಲ್ಲಿ ಈ ಆದೇಶವನ್ನು ಹಿಂಪಡೆಯಲಾಗುತ್ತದೆ. ಸದ್ಯದ ಸರಕಾರ ರಚನೆಯಾಗಿ ತಿಂಗಳು ಕಳೆದರೂ ಸುಮಾರು 20 ಸಾವಿರ ಕೋಟಿ ರೂ. ಮೌಲ್ಯದ ಕಾಮಗಾರಿ ಹಾಗೂ ಟೆಂಡರ್‌ ಪ್ರಕ್ರಿಯೆ ಸ್ಥಗಿತಗೊಂಡಿದೆ. ಪಾವತಿಗಾಗಿ ಖಜಾನೆಗೆ ಸಲ್ಲಿಸಲಾಗಿದ್ದ ಬಿಲ್‌ಗ‌ಳನ್ನೂ ತಡೆ ಹಿಡಿಯಲಾಗಿದೆ. ಆದ್ದರಿಂದ ಕಾಮಗಾರಿಗಳನ್ನು ಸ್ಥಗಿತಗೊಳಿಸುವ ಆದೇಶವನ್ನು ಕೂಡಲೇ ಹಿಂಪಡೆದು ಗುತ್ತಿಗೆದಾರರ ಬಾಕಿ ಬಿಲ್‌ಗ‌ಳಿಗೆ ಹಣ ಬಿಡುಗಡೆ ಮಾಡಬೇಕು ಮತ್ತು ಕಾಮಗಾರಿಗಳನ್ನು ಮುಂದುವರಿಸಲು ಅವಕಾಶ ನೀಡಬೇಕೆಂದು ನಿಯೋಗ ಮನವಿ ಮಾಡಿದೆ.

ಪ್ಯಾಕೇಜ್‌ ಪದ್ಧತಿ ರದ್ದುಗೊಳಿಸಿ
ಸ್ಥಳೀಯ ಗುತ್ತಿಗೆದಾರರನ್ನು ದೂರವಿಡುವ ಉದ್ದೇಶದಿಂದ ಪ್ಯಾಕೇಜ್‌ ಪದ್ಧತಿ ಎಂಬ ತಂತ್ರವನ್ನು ಅಧಿಕಾರಶಾಹಿ ಅನುಸರಿಸುತ್ತಿದೆ. ಅನಗತ್ಯ ಅರ್ಹತೆ ಮತ್ತು ನಿಯಮಗಳನ್ನು ಹೇರಿ ಸ್ಥಳೀಯರನ್ನು ದೂರವಿಡಲಾಗುತ್ತಿದೆ. ಕೆಲವೇ ಲಕ್ಷ ರೂ.ಗಳ ಟೆಂಡರ್‌ ಪಡೆದುಕೊಳ್ಳಲು ಕೂಡ ಸ್ಥಳೀಯ ಗುತ್ತಿಗೆದಾರ ಹೆಣಗಬೇಕಾಗಿದೆ. ಆದ್ದರಿಂದ ಪ್ಯಾಕೇಜ್‌ ಪದ್ಧತಿ ರದ್ದುಗೊಳಿಸಿ ಪ್ರತಿ ಕಾಮಗಾರಿಗೂ ಪ್ರತ್ಯೇಕ ಟೆಂಡರ್‌ ಕರೆದರೆ ಸ್ಥಳೀಯ ಗುತ್ತಿಗೆದಾರರಿಗೆ ಸಹಾಯಕವಾಗುತ್ತದೆ ಎಂದು ಸಿಎಂ ಗಮನ ಸೆಳೆಯಲಾಗಿದೆ.

ಎಲ್ಲ ರೀತಿಯ ಕಾಮಗಾರಿಗಳನ್ನು ಟೆಂಡರ್‌ ಮೂಲಕವೇ ಹಂಚಿಕೆ ಮಾಡಬೇಕು. ಬಾಕಿ ಮೊತ್ತವನ್ನು ಆದ್ಯತೆ ಮತ್ತು ಹಿರಿತನದ ಆಧಾರದ ಮೇಲೆ ಬಿಡುಗಡೆ ಮಾಡಬೇಕು. ಯಾವುದೇ ಪ್ರಯೋಜನವಿಲ್ಲದ ಕರ್ನಾಟಕ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮವನ್ನು ಮುಚ್ಚಿ ಆಯಾ ಇಲಾಖೆಗಳೇ ನೇರ ಮತ್ತು ಪಾರದರ್ಶಕವಾಗಿ ಟೆಂಡರ್‌ ಮೂಲಕವೇ ಕಾಮಗಾರಿ ನಡೆಸಿದರೆ ಉತ್ತಮ. ಹಳೆಯ ಕಾಮಗಾರಿಗಳಿಗೆ ಶೇ. 12ರಷ್ಟು ಮಾತ್ರ ಜಿಎಸ್ಟಿ ಕಡಿತ ಮಾಡಬೇಕೆಂದು ಮನವಿ ಮಾಡಲಾಗಿದೆ.

ಲೋಕೋಪಯೋಗಿ, ಜಲ ಸಂಪನ್ಮೂಲ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌, ಸಣ್ಣ ನೀರಾವರಿ ಮತ್ತು ಬಿಬಿಎಂಪಿಯಲ್ಲಿ ಭ್ರಷ್ಟಾಚಾರ ವ್ಯಾಪಕವಾಗಿದ್ದು, ಕಾಮಗಾರಿಗಳಿಗೆ ಮಂಜೂರಾಗುವ ಒಟ್ಟು ಅನುದಾನದಲ್ಲಿ ಶೇ.30-40ಕ್ಕಿಂತಲೂ ಹೆಚ್ಚು ಮೊತ್ತ ಭ್ರಷ್ಟಾಚಾರ ಮತ್ತಿತರ ವೆಚ್ಚಗಳಿಗೆ ಸರಿದೂಗಿಸಬೇಕಾಗಿತ್ತು. ಭ್ರಷ್ಟಾಚಾರಕ್ಕೆ ದಾಖಲೆಗಳು ಇರುವುದಿಲ್ಲ ಎಂಬ ಅಂಶವನ್ನೇ ಅಸ್ತ್ರವಾಗಿರಿಸಿಕೊಂಡು ಭ್ರಷ್ಟಾಚಾರಕ್ಕೆ ದಾಖಲೆಗಳನ್ನು ಕೇಳುವುದು ವಾಡಿಕೆಯಾಗಿದೆ. ಸಿದ್ದರಾಮಯ್ಯ ಅವರು ಭ್ರಷ್ಟಾಚಾರ ನಿಗ್ರಹಕ್ಕೆ ಕ್ರಮ ಕೈಗೊಳ್ಳುವ ವಿಶ್ವಾಸ ಇರುವುದಾಗಿ ನಿಯೋಗದ ಸದಸ್ಯರು ತಿಳಿಸಿದ್ದಾರೆ.

ಪದಾಧಿಕಾರಿಗಳಾದ ಆರ್‌.ಅಂಬಿಕಾಪತಿ, ಜಿ.ಎಂ.ರವೀಂದ್ರ, ಸಂಕಾಗೌಡ ಶಾನಿ, ನಾಗರಾಜ್‌, ಆರ್‌. ಮಂಜುನಾಥ್‌, ರಮೇಶ್‌ ಮೊದಲಾದವರು ಉಪಸ್ಥಿತರಿದ್ದರು.

ಸರಕಾರಗಳು ಬದಲಾದಂತೆ ಭ್ರಷ್ಟಾಚಾರ ಏರುಗತಿಯಲ್ಲಿ ಸಾಗುತ್ತಿರುವುದು ನಮ್ಮ ಆತಂಕಕ್ಕೆ ಕಾರಣವಾಗಿದೆ. ಹೊಸ ಸರಕಾರ ಅಸ್ತಿತ್ವಕ್ಕೆ ಬಂದಾಗಲೆಲ್ಲ ಭ್ರಷ್ಟಾಚಾರ ಹೆಚ್ಚುತ್ತಿರುವುದು ಆತಂಕ ಮೂಡಿಸುತ್ತದೆ. ಆದರೆ ಅಪಾರ ಅನುಭವವಿರುವ ಸಿದ್ದರಾಮಯ್ಯ ನೇತೃತ್ವದ ಸರಕಾರದಲ್ಲಿ ಭ್ರಷ್ಟಾಚಾರ ಕೊನೆಗಾಣಲಿದೆ ಎಂಬ ವಿಶ್ವಾಸವಿದೆ.
– ಡಿ. ಕೆಂಪಯ್ಯ, ಕರ್ನಾಟಕ ರಾಜ್ಯ ಗುತ್ತಿಗೆಗಾರರ ಸಂಘದ ಅಧ್ಯಕ್ಷ

ಕಮಿಷನ್‌ ಕೇಳಿದರೆ ಬಹಿರಂಗಪಡಿಸುವೆ: ಕೆಂಪಣ್ಣ
ಬೆಂಗಳೂರು: ಈಗಿನ ಸರಕಾರದಲ್ಲಿ ಸಚಿವರು, ಶಾಸಕರು ಕಮಿಷನ್‌ ಕೇಳಿದರೆ ನಾವು ಅದನ್ನು ಬಹಿರಂಗಪಡಿಸುತ್ತೇವೆ ಎಂದು ರಾಜ್ಯ ಗುತ್ತಿಗೆದಾರರ ಸಂಘದ ಅಧ್ಯಕ್ಷ ಡಿ. ಕೆಂಪಣ್ಣ ಹೇಳಿದ್ದಾರೆ. ಸಿಎಂ ಸಿದ್ದರಾಮಯ್ಯ ಅವರನ್ನು ಗೃಹ ಕಚೇರಿ ಕೃಷ್ಣಾದಲ್ಲಿ ಭೇಟಿಯಾಗಿ ಗುತ್ತಿಗೆದಾರರ ವಿವಿಧ ಬೇಡಿಕೆಗಳ ಬಗ್ಗೆ ಮನವಿ ಸಲ್ಲಿಸಿದ ಬಳಿಕ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಹೊಸ ಸರಕಾರದವರು ಈವರೆಗೆ ನಮ್ಮಲ್ಲಿ ಕಮಿಷನ್‌ ಕೇಳಿಲ್ಲ. ಒಂದು ವೇಳೆ ಕೇಳಿದರೆ ವಿರೋಧಿಸುತ್ತೇವೆ ಎಂದರು. ಬಿಜೆಪಿ ಮೇಲಿನ ಶೇ.40 ಕಮಿಷನ್‌ ಆರೋಪದ ದಾಖಲೆ ಇನ್ನೂ ಬಿಡುಗಡೆ ಮಾಡದಿರುವ ಬಗ್ಗೆ ಸುದ್ದಿಗಾರರು ಪ್ರಶ್ನಿಸಿದಾಗ, ಪ್ರಕರಣ ಸದ್ಯ ನ್ಯಾಯಾಲಯದಲ್ಲಿದೆ. ಅದರ ಕುರಿತಾದ ದಾಖಲೆಗಳನ್ನು ಸಮಯ ಬಂದಾಗ ಬಿಡುಗಡೆ ಮಾಡುತ್ತೇವೆ ಎಂದು ಡಿ. ಕೆಂಪಣ್ಣ ಹೇಳಿದರು.

ಟಾಪ್ ನ್ಯೂಸ್

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

Council Session: ಪವರ್‌ ಕಾರ್ಪೋರೇಷನ್‌ನ 260 ಕೋಟಿ ರೂ. ಅಕ್ರಮ: ನಿಲುವಳಿ ತಿರಸ್ಕಾರ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮೂಲಗೇಣಿದಾರರ ಅರ್ಜಿ ತತ್‌ಕ್ಷಣ ಇತ್ಯರ್ಥಗೊಳಿಸಲು ಐವನ್‌ ಮನವಿ

ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

Karnataka Govt.,: ಮಂಗಳೂರಲ್ಲಿ ಹೈಕೋರ್ಟ್‌ ಪೀಠ ಸ್ಥಾಪನೆಗೆ ಮನವಿ

BGV-CM

Belagavi: ಎಐಸಿಸಿ ಅಧಿವೇಶನದ ಶತಮಾನೋತ್ಸವಕ್ಕೆ ಅಡ್ಡಿಪಡಿಸಿದರೆ ಕ್ರಮ: ಸಿದ್ದರಾಮಯ್ಯ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

Vijayapura: ಜನವರಿ 1, 2 ರಂದು ಸಿದ್ದೇಶ್ವರ ಶ್ರೀಗಳಿಗೆ ಗುರುನಮನ ಕಾರ್ಯಕ್ರಮ

MUST WATCH

udayavani youtube

ಹಕ್ಕಿಗಳಿಗಾಗಿ ಕಲಾತ್ಮಕ ವಸ್ತುಗಳನ್ನು ತಯಾರಿಸುತ್ತಿರುವ ಪಕ್ಷಿ ಪ್ರೇಮಿ

udayavani youtube

ಮಂಗಳೂರಿನ ನಿಟ್ಟೆ ವಿಶ್ವವಿದ್ಯಾನಿಲಯದ ತಜ್ಞರ ಅಧ್ಯಯನದಿಂದ ಬಹಿರಂಗ

udayavani youtube

ಈ ಹೋಟೆಲ್ ಗೆ ಪೂರಿ, ಬನ್ಸ್, ಕಡುಬು ತಿನ್ನಲು ದೂರದೂರುಗಳಿಂದಲೂ ಜನ ಬರುತ್ತಾರೆ

udayavani youtube

ಹರೀಶ್ ಪೂಂಜ ಪ್ರಚೋದನಾಕಾರಿ ಹೇಳಿಕೆ ವಿರುದ್ಧ ಪ್ರಾಣಿ ಪ್ರಿಯರ ಆಕ್ರೋಶ

udayavani youtube

ಮನೆ ತೊರೆದಿದ್ದ ವ್ಯಕ್ತಿ 14 ವರ್ಷಗಳ ಬಳಿಕ ಮರಳಿ ಗೂಡಿಗೆ.

ಹೊಸ ಸೇರ್ಪಡೆ

UDP-DC

Udupi: ಇಂದ್ರಾಳಿ ರೈಲ್ವೇ ಮೇಲ್ಸೇತುವೆ: ಜ.10ರಿಂದ ವಾಹನ ಬಳಕೆಗೆ ಮುಕ್ತಗೊಳಿಸಿ: ಡಿಸಿ

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Udupi: ಗೀತಾರ್ಥ ಚಿಂತನೆ-129: ಓನರ್‌ಶಿಪ್‌ ಮೇಲೇ ಕಣ್ಣು!

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Belagavi ಅಧಿವೇಶನ ತೃಪ್ತಿ ತಂದಿಲ್ಲ: ಛಲವಾದಿ ಬೇಸರ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

Lok Adalat: 39 ಲಕ್ಷ ಕೇಸ್‌ ಇತ್ಯರ್ಥ; ಪುನಃ ಒಂದಾದ 307 ದಂಪತಿ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

“6 ತಿಂಗಳಲ್ಲಿ ಹೊಸ ತಾಲೂಕಿನಲ್ಲಿ ಪ್ರಜಾಸೌಧ ಕಟ್ಟಡ’: ಸಚಿವ ಕೃಷ್ಣ ಬೈರೇಗೌಡ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.