Electricity rate: ರಾತ್ರಿ ವೇಳೆ ವಿದ್ಯುತ್ ದರ ಶೇ.20 ಹೆಚ್ಚಳ
-ವಿದ್ಯುತ್ ಬೇಡಿಕೆ ತಗ್ಗಿಸಲು ಹೊಸ ನಿಯಮ | ವಾಣಿಜ್ಯ, ಕೈಗಾರಿಕೆಗೆ ಅನ್ವಯ
Team Udayavani, Jun 24, 2023, 7:24 AM IST
ನವದೆಹಲಿ: ದೇಶದಲ್ಲಿ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ಕಡಿವಾಣ ಹಾಕುವುದರ ಜತೆಗೆ ರಾತ್ರಿ ಸಮಯದಲ್ಲಿ ವಿದ್ಯುತ್ ಬಳಕೆಗೆ ಮಿತಿ ತರುವ ನಿಟ್ಟಿನಲ್ಲಿ ಕೇಂದ್ರಸರ್ಕಾರ ಹೊಸ ನಿಯಮಗಳನ್ನು ಪ್ರಕಟಿಸಿದೆ. ಆ ಪ್ರಕಾರ, ಇನ್ನು ಮುಂದೆ ಹಗಲಿನಲ್ಲಿ ಬಳಸುವ ವಿದ್ಯುತ್ ದರವನ್ನು ಶೇ.20 ಕಡಿಮೆ ಮಾಡಲಾಗುತ್ತದೆ, ರಾತ್ರಿಯ ವಿದ್ಯುತ್ತನ್ನು ಗರಿಷ್ಠ ಮಾಡುವ ಅವಧಿಯಲ್ಲಿ ಶೇ.20 ದರ ಹೆಚ್ಚಿಸಲಾಗುತ್ತದೆ!
ನೂತನ ನಿಯಮವು ರಾತ್ರಿ ಹೊತ್ತು ವಿದ್ಯುತ್ ಬೇಡಿಕೆಯನ್ನು ಕಡಿಮೆ ಮಾಡಲಿದ್ದು, ಹಗಲಿನಲ್ಲಿ ಬೇಡಿಕೆಯನ್ನು ಹೆಚ್ಚಿಸಲಿದೆ. ಈ ಮೂಲಕ ಸೌರ ವಿದ್ಯುತ್ ಉತ್ಪಾದನೆ ಹಾಗೂ ಬಳಕೆಗೂ ಸಹಾಯವಾಗಲಿದೆ. ಹೊಸ ತೆರಿಗೆ ನಿಯಮವು 2024ರ ಏಪ್ರಿಲ್‌ನಿಂದ ಕೈಗಾರಿಕೆ ಮತ್ತು ವಾಣಿಜ್ಯ ಬಳಕೆದಾರರಿಗೆ ಮಾತ್ರ ಅನ್ವಯವಾಗುತ್ತದೆ. ಆ ಬಳಿಕದ ಒಂದು ವರ್ಷದ ನಂತರ ಕೃಷಿ ವಲಯವನ್ನು ಹೊರತುಪಡಿಸಿ, ಉಳಿದಂತಹ ಗ್ರಾಹಕರಿಗೆ ಅನ್ವಯವಾಗಲಿದೆ ಎಂದು ಕೇಂದ್ರ ಇಂಧನ ಸಚಿವ ಆರ್.ಕೆ.ಸಿಂಗ್ ತಿಳಿಸಿದ್ದಾರೆ.
ವರದಿಗಳ ಪ್ರಕಾರ, ಏರುತ್ತಿರುವ ತಾಪಮಾನ ಹಾಗೂ ಆರ್ಥಿಕ ಚಟುವಟಿಕೆಗಳ ಹೆಚ್ಚಳದಿಂದ ವಿದ್ಯುತ್ ಬೇಡಿಕೆಯ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿದೆ. 2027ರ ವೇಳೆಗೆ ಭಾರತದಲ್ಲಿ ವಿದ್ಯುತ್ ಬೇಡಿಕೆ 2 ಪಟ್ಟು ಹೆಚ್ಚಾಗಲಿದೆ ಎನ್ನಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Railway: ಗಂಗಾವತಿ ರೈಲ್ವೆ ನಿಲ್ದಾಣಕ್ಕೆ ಅಂಜನಾದ್ರಿ ಹೆಸರು ಶಿಫಾರಸು: ಸಚಿವ ಎಂ.ಬಿ.ಪಾಟೀಲ್
Waqf ವಿರುದ್ದ ಮಠಾಧೀಶರು,ಯತ್ನಾಳ್ ತಂಡದಿಂದ ಮತ್ತೊಂದು ಹಂತದ ಹೋರಾಟ
Belagavi; ಕಿತ್ತೂರು ರಾಣಿ ಚನ್ನಮ್ಮ ಕಿರು ಮೃಗಾಲಯದಲ್ಲಿದ್ದ ಹುಲಿ ಶೌರ್ಯ ಇನ್ನಿಲ್ಲ
Channapatna bypoll; ಗೆಲುವಿಗೆ ಬಿಜೆಪಿ-ಜೆಡಿಎಸ್ ನವರೂ ಸಹಕರಿಸಿದ್ದಾರೆ: ಡಿ.ಕೆ.ಶಿವಕುಮಾರ್
Vijayapura: ಜಿಲ್ಲಾಸ್ಪತ್ರೆಯಲ್ಲಿ ಒಂದು ವರ್ಷದ ಮಗು ಅಪಹರಣ: ಸಿಸಿಟಿವಿಯಲ್ಲಿ ದೃಶ್ಯ
MUST WATCH
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.