Assam ಕ್ಷೇತ್ರ ಮರುವಿಂಗಡನೆ: ಮುಂದುವರಿದ ಪ್ರತಿಭಟನೆ
Team Udayavani, Jun 25, 2023, 6:40 AM IST
ಗುವಾಹಟಿ: ಅಸ್ಸಾಂ ಲೋಕಸಭೆ ಹಾಗೂ ವಿಧಾನಸಭಾ ಸ್ಥಾನಗಳ ಮರು ವಿಂಗಡಣೆ ಕರಡು ಪ್ರಸ್ತಾಪದ ವಿರುದ್ಧ ಶನಿವಾರವೂ ಅಸ್ಸಾಂನಲ್ಲಿ ಪ್ರತಿಭಟನೆಗಳು ಮುಂದುವರಿದಿವೆ. ಚುನಾವಣೆ ಆಯೋಗವು ಬಿಜೆಪಿ ಪರವಾಗಿ ಕಾರ್ಯನಿರ್ವಹಿಸುತ್ತಿದೆ ಎಂದು ವಿಪಕ್ಷಗಳು ಆರೋಪಿಸಿವೆ.
ಅಲ್ಲದೇ, ಪ್ರಸ್ತಾಪವು ಜನರ ಭಾವನೆಗಳನ್ನು ಧಿಕ್ಕರಿಸಿ, ಧಾರ್ಮಿಕ ನೆಲೆಯ ಆಧಾರದಲ್ಲಿ ಮತದಾರರನ್ನು ವಿಭಜಿಸುವ ಬಿಜೆಪಿಯ ಪ್ರಯತ್ನವಾಗಿದೆ. ಈ ಹಿನ್ನೆಲೆ ಜನರ ಕುಂದುಕೊರತೆಗಳನ್ನು ಆಯೋಗದ ಮುಂದೆ ತೆರೆದಿಡಲು ವಿಪಕ್ಷಗಳು ನಿರ್ಧರಿಸಿವೆ. ಈ ನಿಟ್ಟಿನಲ್ಲಿ 12 ವಿಪಕ್ಷಗಳ ಆಯೋಗವು ಶಿವಸಾಗರ ಜಿಲ್ಲೆಗೆ ಜೂ.30ರಂದು ಭೇಟಿ ನೀಡಿ, ಜನರೊಟ್ಟಿಗೆ ಸಂವಾದ ನಡೆಸಲು ತೀರ್ಮಾನಿಸಿವೆ ಎಂದು ಕಾಂಗ್ರೆಸ್ ರಾಜ್ಯಾಧ್ಯಕ್ಷ ಭುಪೇನ್ ಕುಮಾರ್ ಬೋರ್ ಹೇಳಿದ್ದಾರೆ.
ಆಯೋಗದ ಪ್ರಸ್ತಾಪದಲ್ಲಿ ಲೋಕಸಭೆ ಹಾಗೂ ವಿಧಾನಸಭೆ ಸ್ಥಾನಗಳನ್ನು ಕ್ರಮವಾಗಿ 14 ಹಾಗೂ 126ರ ರೀತಿ ನಿರ್ವಹಿಸಿ, ಪರಿಶಿಷ್ಟ ಜಾತಿಗೆ ಮೀಸಲಿರುವ ವಿಧಾನಸಭಾ ಕ್ಷೇತ್ರಗಳ ಸಂಖ್ಯೆಯನ್ನು 8ರಿಂದ 9ಕ್ಕೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಮೀಸಲಿರುವ ಕ್ಷೇತ್ರವನ್ನು 16ರಿಂದ 19ಕ್ಕೆ ಏರಿಸಲು ಪ್ರಸ್ತಾಪಿಸಲಾಗಿದೆ. ಇದರಲ್ಲಿ ವಿಪಕ್ಷಗಳ ಹಲವು ಭದ್ರಕೋಟೆಗಳು ವಿಲೀನವಾಗುವ ಸಾಧ್ಯತೆಗಳಿವೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Delhi: ಹೆಚ್ಚಿದ ಮಾಲಿನ್ಯ: ಮಾಸ್ಕ್ ಧರಿಸಿ ಬಂದ ವಿದ್ಯಾರ್ಥಿಗಳು
Gujarat: 700 ಕೆ.ಜಿ. ಡ್ರಗ್ಸ್ ವಶ: 8 ಮಂದಿ ಬಂಧನ; ಕಳೆದ 1 ತಿಂಗಳಲ್ಲಿ ಭರ್ಜರಿ 3ನೇ ಬೇಟೆ
Bombay high court: ವಯಸ್ಕಳಲ್ಲದ ಪತ್ನಿ ಜತೆ ಒಪ್ಪಿತ ಲೈಂಗಿಕ ಸಂಬಂಧ ರೇ*ಪ್
Jharkhand; ವಿಮಾನದಲ್ಲಿ ತಾಂತ್ರಿಕ ದೋಷ: 2 ಗಂಟೆ ಕಾದ ಪ್ರಧಾನಿ ಮೋದಿ
Protest: ಕಾಶ್ಮೀರ ಚರ್ಚೆ: ಆಕ್ಸ್‌ಫರ್ಡ್‌ನಲ್ಲಿ ಭಾರತೀಯರ ಪ್ರತಿಭಟನೆ
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.