ಶುದ್ಧ ನೀರಿಗಾಗಿ ಆಗ್ರಹಿಸಿ ಉಪವಾಸ ಸತ್ಯಾಗ್ರಹ
Team Udayavani, Jun 25, 2023, 3:18 PM IST
ದೊಡ್ಡಬಳ್ಳಾಪುರ: ತಾಲೂಕಿನ ದೊಡ್ಡತುಮಕೂರು ಹಾಗೂ ಮಜರಾಹೊಸಹಳ್ಳಿ ಗ್ರಾಮ ಪಂಚಾಯಿ ತಿಗಳ ಕೆರೆ ನೀರಿನಿಂದ ಹಿಡಿದು ಶುದ್ಧ ಕುಡಿಯುವ ನೀರು ಸಹ ಕಲುಷಿತಗೊಂಡಿದ್ದು, ಗ್ರಾಮಕ್ಕೆ ಶುದ್ಧ ನೀರಿಗಾಗಿ ಸರಬರಾಜು ಮಾಡುತ್ತಿದ್ದ ನೀರಿನ ಟ್ಯಾಂಕರ್ಗಳನ್ನು ಸಹ ನಿಲ್ಲಿಸಲಾಗಿದೆ.
ಈ ಹಿನ್ನಲೆಯಲ್ಲಿ ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಿಗೆ ಜಕ್ಕಲಮಡಗು ಜಲಾಶಯದಿಂದ ನೀರು ಸರಬರಾಜು ಮಾಡುವಂತೆ ಆಗ್ರಹಿಸಿ, ಅರ್ಕಾವತಿ ನದಿ ಪಾತ್ರದ ಕೆರೆಗಳ ಸಂರಕ್ಷಣಾ ವೇದಿಕೆ ವತಿಯಿಂದ ತಾಲೂಕು ಕಚೇರಿ ಮುಂದೆ ರಾತ್ರಿ ಹಗಲು ನಿರಂತರವಾಗಿ ನಡೆಸು ತ್ತಿರುವ ಆಮರಣಾಂತರ ಉಪವಾಸ ಸತ್ಯಾಗ್ರಹ ಎರಡನೇ ದಿನಕ್ಕೆ ಕಾಲಿಟ್ಟಿದೆ. ಉಪವಾಸ ಸತ್ಯಾಗ್ರಾಹ ನಡೆಸುತ್ತಿರುವವರನ್ನು ಯಾರೊಬ್ಬ ಅಧಿಕಾರಿಗಳು ಹಾಗೂ ಜನ ಪ್ರತಿನಿಧಿಗಳು ಭೇಟಿ ಮಾಡಿ ಸಮಸ್ಯೆಯನ್ನು ಕೇಳಲು ಬಂದಿಲ್ಲ. ಹೀಗಾಗಿ, ನಮ್ಮೂರಿಗೆ ಶುದ್ಧ ಕುಡಿಯುವ ನೀರು ಸರಬರಾಜು ಮಾಡುವವರೆಗೂ ಉಪವಾಸ ಸತ್ಯಾಗ್ರಹವನ್ನು ನಿಲ್ಲಿಸುವುದಿಲ್ಲ ಎಂದು ವೇದಿಕೆಯ ಸಂಚಾಲಕರು ತಿಳಿಸಿದ್ದಾರೆ.
ಕುಡಿಯುವ ನೀರಿಗೂ ಪರದಾಟ: ಉಪವಾಸ ಸತ್ಯಾ ಗ್ರಹದಲ್ಲಿ ಭಾಗವಹಿಸಿರುವ ಜಿಂಕೆಬಚ್ಚಹಳ್ಳಿ ಗ್ರಾಮದ ಸತೀಶ್, ದೊಡ್ಡತುಮಕೂರು ಗ್ರಾಮದ ವಸಂತಕುಮಾರ್ ಮಾಹಿತಿ ನೀಡಿ, ನಮ್ಮೂರಿನ ಕೆರೆಗಳು ಕಲುಷಿತವಾಗಿರುವುದೇ ನಗರಸಭೆ ವ್ಯಾ ಪ್ತಿಯಿಂದ ಬರುತ್ತಿರುವ ಒಳಚರಂಡಿ ನೀರು, ಬಾಶೇಟ್ಟಿಹಳ್ಳಿ ಕೈಗಾರಿಕಾ ಪ್ರದೇಶ ಹಾಗೂ ಪಟ್ಟಣ ಪಂಚಾಯಿತಿ ವ್ಯಾಪ್ತಿಯಿಂದ ಬರುತ್ತಿರುವ ಒಳಚರಂಡಿ ನೀರಿನಿಂದ. ಕೆರೆಯ ನೀರು ಕಲುಷಿತವಾದ ನಂತರ ಮಜರಾಹೊಸಹಳ್ಳಿ, ದೊಡ್ಡತುಮಕೂರು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಗ್ರಾಮ ಗ ಳಲ್ಲಿನ ಅಂತರ್ಜಲ ಕಲುಷಿತವಾಗಿ ಕುಡಿಯುವ ನೀರಿಗೂ ಪರದಾಡುವಂತಹ ಸ್ಥಿತಿ ನಿರ್ಮಾಣವಾಗಿದೆ ಎಂದರು.
ಸತ್ಯಾಗ್ರಹ ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ: ಗ್ರಾಮಗಳಲ್ಲಿನ ಶುದ್ಧ ಕುಡಿಯುವ ನೀರಿನ ಘಟಕಗಳಲ್ಲಿ ಬರುವ ನೀರು ಸಹ ಕುಡಿಯಲು ಯೋಗ್ಯವಾಗಿಲ್ಲ ಎಂದು ಪ್ರಯೋಗಾಲಯದ ವರದಿಯೇ ತಿಳಿಸಿದೆ. ಹಾಗಾಗಿಯೇ ರಾಜ್ಯ ವಿಧಾನ ಸಭಾ ಚುನಾವಣ ಸಂದರ್ಭದಲ್ಲಿ ಮತದಾನ ಮಾಡದೇ ಇರಲು ಬಹಿಷ್ಕಾರ ಮಾಡಿದ್ದೇವೆ. ಆದರೆ, ಚುನಾವಣಾ ಅಧಿಕಾರಿಗಳು ನೀಡಿದ ಭರವಸೆ ಹಾಗೂ ಗ್ರಾಮಗಳಲ್ಲಿನ ನೀರಿನ ಘಟಕಗಳಿಗೆ ಜಕ್ಕಲಮೊಡಗು ಜಲಾಶಯದಿಂದ ಬರುವ ನೀರನ್ನು ಟ್ಯಾಂಕರ್ಗಳ ಮೂಲಕ ಸರಬರಾಜು ಮಾಡಲು ಪ್ರಾರಂಭಿಸಿದ್ದರಿಂದ ಮತದಾನ ಮಾಡಿದ್ದೇವೆ. ಆದರೆ, ಅಧಿಕಾರಿಗಳು ನೀಡಿದ್ದ ಭರವಸೆ ಚುನಾವಣೆ ಮುಕ್ತಾಯವಾದ ನಂತರ ಸುಳ್ಳಾಗಿದೆ. ಟ್ಯಾಂಕರ್ಗಳ ಮೂಲಕ ಸರಬರಾಜು ಮಾಡುತ್ತಿದ್ದ ಕುಡಿಯುವ ನೀರನ್ನು ನಿಲ್ಲಿಸಿದ್ದಾರೆ. ನಮ್ಮ ಗ್ರಾಮಗಳಿಗೆ ಶಾಶ್ವತವಾಗಿ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸುವವರೆಗೂ ಸತ್ಯಾಗ್ರಹವನ್ನು ಹಿಂದಕ್ಕೆ ಪಡೆಯುವ ಪ್ರಶ್ನೆಯೇ ಇಲ್ಲ ಎಂದರು.
ಪ್ರತಿ ಮನೆಯಿಂದಲೂ ಭಾಗಿ: ಸೋಮವಾರದಿಂದ ಉಪವಾಸ ಸತ್ಯಾಗ್ರಾಹದಲ್ಲಿ ಪ್ರತಿ ಮನೆಯಿಂದಲೂ ಒಬ್ಬರಂತೆ ಭಾಗವಹಿಸಲಿದ್ದಾರೆ. ಕುಡಿಯುವ ನೀರಿನ ಸಮಸ್ಯೆಗೆ ಒಳಗಾಗಿರುವ ಎರಡೂ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎಲ್ಲ ಗ್ರಾಮಗಳಲ್ಲೂ ಭಾನುವಾರ ಸಭೆಗಳು ನಡೆಯಲಿವೆ. ಪ್ರತಿ ಮನೆಯಿಂದಲು ಒಬ್ಬರು ಸತ್ಯಾಗ್ರಹದಲ್ಲಿ ಭಾಗವಹಿಸಲಿದ್ದಾರೆ ಎಂದು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
ಇಸ್ಪೀಟ್ ಅಡ್ಡೆಯ ಮೇಲೆ ಡಿವೈಎಸ್ಪಿ ದಾಳಿ; ಮಾಜಿ ಅಧ್ಯಕ್ಷ-ಹಾಲಿ ಉಪಾಧ್ಯಕ್ಷ ಸೇರಿ 8 ಜನರ ಬಂಧನ
Anthyarambha: ನ.28ರಂದು ಕೊಂಕಣಿ ಚಲನಚಿತ್ರ “ಅಂತ್ಯಾರಂಭ’ ಪ್ರದರ್ಶನ
Belagavi Session: ರಾಜಕೀಯ ಕಿತ್ತಾಟ ಏನಿದ್ದರೂ ಸದನದ ಹೊರಗೆ ನಡೆಸಿ: ಯು.ಟಿ. ಖಾದರ್
Bharamasagara: 3 ತಿಂಗಳ ಹಿಂದೆ ಮದುವೆಯಾಗಿ ಊರಿಗೆ ವಾಪಸ್ ಆದ ಯುವಕನ ಹತ್ಯೆ
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.