ಗ್ರಾಪಂ ಗದ್ದುಗೆಗಾಗಿ ಸದಸ್ಯರಿಗೆ ಪ್ರವಾಸ ಭಾಗ್ಯ!
Team Udayavani, Jun 25, 2023, 3:49 PM IST
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಮುಂದಿನ ಎರಡೂವರೆ ವರ್ಷದ ಅವಧಿಗೆ ಜಿಲ್ಲಾಡಳಿತ ಲಾಟರಿ ಮೂಲಕ ಸುಸೂತ್ರವಾಗಿ ಮೀಸಲಾತಿ ನಿಗದಿಗೊಳಿಸಿದ ಬೆನ್ನಲ್ಲೇ ಜಿಲ್ಲಾದ್ಯಂತ ಹಳ್ಳಿ ರಾಜಕಾರಣ ಗರಿಗೆದರಿದ್ದು ಆಕಾಂಕ್ಷಿಗಳ ನಡುವೆ ತೀವ್ರ ಪೈಪೋಟಿ ಶುರುವಾಗಿದೆ.
ಕಳೆದ 2021 ಫೆ.8 ರಿಂದ 12ರವರೆಗೂ ಜಿಲ್ಲೆಯ 157 ಗ್ರಾಪಂ ಪೈಕಿ 152 ಗ್ರಾಪಂಗೆ ಚುನಾವಣೆ ಮೂಲಕ ಆಯ್ಕೆಗೊಂಡಿದ್ದ ಅಧ್ಯಕ್ಷ, ಉಪಾಧ್ಯಕ್ಷರ ಮೊದಲ 30 ತಿಂಗಳ ಅಧಿಕಾರ ಅವಧಿ ಮುಂದಿನ ಆಗಸ್ಟ್ ತಿಂಗಳಿಗೆ ಅಂತ್ಯ ಕಾಣಲಿದೆ. ಹೀಗಾಗಿ ಜಿಲ್ಲಾಡಳಿತ ಮುಂದಿನ ಎರಡೂವರೆ ವರ್ಷದ ಅವಧಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ಲಾಟರಿ ಮೂಲಕ ಮೀಸಲು ನಿಗದಿಪಡಿಸಿದೆ.
8 ತಾಲೂಕುಗಳಲ್ಲಿ ಚುನಾವಣೆ: ಈಗಾಗಲೇ ಜಿಲ್ಲೆಯ ಚಿಕ್ಕಬಳ್ಳಾಪುರ, ಬಾಗೇಪಲ್ಲಿ ಗುಡಿಬಂಡೆ, ಚಿಂತಾಮಣಿ, ಗೌರಿಬಿದನೂರು, ಚೇಳೂರು, ಮಂಚೇನ ಹಳ್ಳಿ, ಶಿಡ್ಲಘಟ್ಟ ಸೇರಿ ಒಟ್ಟು 8 ತಾಲೂಕುಗಳಿಗೆ ಶುಕ್ರವಾರಕ್ಕೆ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷರ ಮೀಸಲಾತಿ ನಿಗದಿಯನ್ನು ಜಿಲ್ಲೆಯ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಆಯಾ ಗ್ರಾಪಂ ಸದಸ್ಯರ ಸಮ್ಮುಖದಲ್ಲಿಯೇ ಲಾಟರಿ ಮೂಲಕ ನಿಗದಿ ಮಾಡುವ ಪ್ರಕ್ರಿಯೆ ಪೂರ್ಣಗೊಂಡಿದೆ.
ಸವಾಲು: ಜಿಲ್ಲಾಡಳಿತ ಜಿಲ್ಲೆಯ 157 ಗ್ರಾಪಂಗಳ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಕ್ಕೆ ವರ್ಗವಾರು ಮೀಸಲು ಪ್ರಕಟಿಸುತ್ತಿದ್ದಂತೆ ಗ್ರಾಪಂ ಅಧ್ಯಕ್ಷ-ಉಪಾಧ್ಯಕ್ಷ ಹುದ್ದೆ ಮೇಲೆ ಕಣ್ಣಿಟ್ಟಿರುವ ಗ್ರಾಪಂ ಸದಸ್ಯರು ಚುನಾವಣೆಗೆ ಇನ್ನೂ ಒಂದು ತಿಂಗಳು ಇರುವಾಗಲೇ ಗ್ರಾಪಂ ಸದಸ್ಯರ ಮನವೊಲಿಕೆಗೆ ಮುಂದಾಗಿದ್ದಾರೆ. ಹೇಳಿ ಕೇಳಿ ಗ್ರಾಪಂ ಮಟ್ಟದಲ್ಲಿ ನಡೆಯುವ ಅಧ್ಯಕ್ಷ-ಉಪಾಧ್ಯಕ್ಷ ಚುನಾವಣೆ ತೀವ್ರ ಜಿದ್ದಾಜಿದ್ದಿನಿಂದ ನಡೆಯಲಿದ್ದು ಈಗಾಗಲೇ ಅಧಿಕಾರದ ಗದ್ದುಗೆ ಖಾತ್ರಿ ಮಾಡಿಕೊಳ್ಳಲು ತಮ್ಮ ಪರ ಮೀಸಲಾತಿ ಬಂದಿರುವ ಗ್ರಾಪಂ ಸದಸ್ಯರು, ಇನ್ನಿಲ್ಲದ ಕಸರತ್ತು ಆರಂಭಿಸಿದ್ದಾರೆ. ಹೀಗಾಗಿ ಜಿಲ್ಲೆಯಲ್ಲಿ ರಾಜ್ಯ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನಗಳಿಗೆ ನಡೆಯುವ ಚುನಾವಣೆ ರಾಜಕೀಯ ಪಕ್ಷಗಳಿಗೆ ಒಂದು ರೀತಿಯ ಸವಾಲಾಗಿದೆ.
ತಂತ್ರಗಾರಿಕೆ: ಗ್ರಾಪಂ ಚುನಾವಣೆ ರಾಜಕೀಯೇತರ ವಾಗಿ ನಡೆದಿದ್ದರೂ ಚುನಾವಣೆಯಲ್ಲಿ ಗ್ರಾಪಂ ಸದಸ್ಯ ರು ರಾಜಕೀಯ ಪಕ್ಷಗಳ ಬೆಂಬಲಿತರಾಗಿ ಚುನಾವಣಾ ಅಖಾಡಕ್ಕೆ ಇಳಿಯಲಿದ್ದಾರೆ. ಹೀಗಾಗಿ ಮುಂದಿನ ಕೆಲವೇ ತಿಂಗಳಲ್ಲಿ ಎದುರಾಗಲಿರುವ ಜಿಪಂ, ತಾಪಂ ಹಾಗೂ ಲೋಕಸಭಾ ಚುನಾವಣೆ ಗಮನದಲ್ಲಿಟ್ಟು ಕೊಂಡು ರಾಜಕೀಯ ಪಕ್ಷಗಳು ಗ್ರಾಪಂಗಳಲ್ಲಿ ತಮ್ಮ ಬೆಂಬಲಿಗರಿಗೆ ಪಟ್ಟಾಭಿಷೇಕ ಮಾಡಲು ರಾಜಕೀಯ ತಂತ್ರಗಾರಿಕೆ ನಡೆಸಿದ್ದಾರೆ.
ರಾಜಕೀಯ ಪಕ್ಷಗಳಿಗೆ ಪ್ರತಿಷ್ಠೆ : ಜಿಲ್ಲೆಯಲ್ಲಿ ಮುಂಬರುವ ಲೋಕಸಭೆ, ಜಿಪಂ ಹಾಗೂ ತಾಪಂ ಚುನಾವಣೆ ಗೆಲ್ಲಲು ರಾಜಕೀಯ ಪಕ್ಷಗಳಿಗೆ ತಮ್ಮ ಬೆಂಬಲಿಗರ ಮೂಲಕ ಗ್ರಾಪಂಗಳಲ್ಲಿ ಅಧಿಕಾರ ಹಿಡಿಯುವುದು ಪ್ರತಿಷ್ಠೆಯಾಗಿದೆ. ಈಗಾಗಲೇ ರಾಜ್ಯದಲ್ಲಿ ಬಿಜೆಪಿ ಅಧಿಕಾರ ಕಳೆದುಕೊಂಡು ಕಾಂಗ್ರೆಸ್ ಚುಕ್ಕಾಣಿ ಹಿಡಿದಿದೆ. ಅದೇ ರೀತಿ ಜಿಲ್ಲೆಯ ಶಿಡ್ಲಘಟ್ಟ, ಚಿಂತಾಮಣಿ, ಗೌರಿಬಿದನೂರು ಹಾಗೂ ಚಿಕ್ಕಬಳ್ಳಾಪುರದಲ್ಲಿ ಶಾಸಕರು ಬದಲಾಗಿದ್ದಾರೆ. ಹೀಗಾಗಿ ಗ್ರಾಪಂಗಳ ಅಧ್ಯಕ್ಷ, ಉಪಾಧ್ಯಕ್ಷರ ಚುನಾವಣೆ ಜಿಲ್ಲೆಯಲ್ಲಿ ಹೊಸ ರಾಜಕೀಯ ಚಿತ್ರಣಕ್ಕೆ ಸಾಕ್ಷಿಯಾಗಲಿದೆ. ಈಗಾಗಲೇ ವಿರೋಧ ಪಕ್ಷಗಳಲ್ಲಿದ್ದ ಸದಸ್ಯರು, ಈಗ ಆಡಳಿತ ಪಕ್ಷಕ್ಕೆ ಜಿಗಿಯುತ್ತಿದ್ದಾರೆ. ಆಡಳಿತ ಪಕ್ಷದಲ್ಲಿ ಇದ್ದವರು ವಿರೋಧ ಪಕ್ಷಗಳಿಗೆ ಜಿಗಿಯುತ್ತಿದ್ದಾರೆ. ಹೀಗಾಗಿ ಮುಂಬರುವ ತಾಪಂ, ಜಿಪಂ ಹಾಗೂ ಲೋಕಸಭಾ ಚುನಾವಣೆ ವೇಳೆಗೆ ಹಳ್ಳಿ ರಾಜಕೀಯ ಚಿತ್ರಣವೇ ಗ್ರಾಪಂ ಅಧ್ಯಕ್ಷ, ಉಪಾಧ್ಯಕ್ಷ ಚುನಾವಣೆಗಳಿಂದ ಬದಲಾಗಲಿದೆ.
ಗೋವಾ, ಧಾರ್ಮಿಕ ಕೇಂದ್ರಗಳತ್ತ ಪ್ರವಾಸ!: ಜಿಲ್ಲಾಡಳಿತ ಗ್ರಾಪಂಗಳ ಮುಂದಿನ 30 ತಿಂಗಳ ಅವಧಿಗೆ ಅಧ್ಯಕ್ಷ-ಉಪಾಧ್ಯಕ್ಷ ಸ್ಥಾನಕ್ಕೆ ಮೀಸಲಾತಿ ಅಂತಿಮ ಗೊಳಿಸಿ ಪ್ರಕಟಿಸಿದ ಬೆನ್ನಲ್ಲೇ ಗ್ರಾಪಂ ಸದಸ್ಯರಿಗೆ ಅಧ್ಯಕ್ಷ, ಉಪಾಧ್ಯಕ್ಷ ಸ್ಥಾನದ ಆಕಾಂಕ್ಷಿಗಳು ಪ್ರವಾಸ ಭಾಗ್ಯ ಏರ್ಪ ಡಿಸಿದ್ದಾರೆ. ಸದಸ್ಯರನ್ನು ತಮ್ಮ ಕಡೆ ಒಲಿಸಿಕೊಳ್ಳಲು ಗ್ರಾಪಂ ಸದಸ್ಯರಿಗೆ ಗೋವಾ ಮತ್ತಿತರ ರಾಜ್ಯಗಳಿಗೆ ಪ್ರವಾಸ ಏರ್ಪಡಿಸುವುದರ ಜತೆಗೆ ಧರ್ಮಸ್ಥಳ, ತಿರುಪತಿ, ಶಿರಡಿ ಸಾಯಿಬಾಬಾ, ಕುಕ್ಕೆ ಸುಬ್ರಹ್ಮಣ್ಯ ಹೀಗೆ ಹಲವು ಪ್ರಸಿದ್ಧ ಧಾರ್ಮಿಕ ಕ್ಷೇತ್ರಗಳಿಗೂ ಗ್ರಾಪಂ ಸದಸ್ಯರನ್ನು ಕರೆದೊಯ್ಯುತ್ತಿದ್ದಾರೆ. ಆ ಮೂಲಕ ಧಾರ್ಮಿಕ ಕೇಂದ್ರಗಳಲ್ಲಿ ತಮ್ಮ ಪರ ನಿಲ್ಲುವಂತೆ ಆಣೆ, ಪ್ರಮಾಣ ಮಾಡಿಸಲು ಆಕಾಂಕ್ಷಿಗಳು ಮುಂದಾಗಿದ್ದಾರೆ.
– ಕಾಗತಿ ನಾಗರಾಜಪ್ಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Chikkaballapura: ಕಾರಿನಲ್ಲಿ ಸಾಗಿಸುತ್ತಿದ್ದ 7.20 ಲಕ್ಷ ರೂ. ಮೌಲ್ಯದ ಗಾಂಜಾ ವಶ
Karnataka Govt: ಹಿಂದೂಗಳ ದಮನಕ್ಕೆ ಮುಂದಾದ ಕಾಂಗ್ರೆಸ್: ಆರ್. ಅಶೋಕ್ ಆರೋಪ
Dr. Sudhakar: ಹಿಂದಿನ ಕಾಂಗ್ರೆಸ್‌ರ ಸರ್ಕಾರದ ಭ್ರಷ್ಟಾಚಾರ ಬಿಚ್ಚಿಡುವೆ
Chikkaballapura: ನಮ್ಮನ್ನು ಖಳ ನಾಯಕರನ್ನಾಗಿ ಮಾಡಲು ಹೊರಟಿದ್ದಾರೆ: ಸಂಸದ ಡಾ.ಕೆ.ಸುಧಾಕರ್
Chikkaballapur: ಪರಿಹಾರ ಕೊಡದ ಎಸಿ ಕಚೇರಿ ಸಂತ್ರಸ್ತರಿಂದ ಜಪ್ತಿ!
MUST WATCH
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಕೊಲ್ಲೂರಿನಲ್ಲಿ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದ ಡಿಸಿಎಂ ಡಿ ಕೆ ಶಿವಕುಮಾರ್
ಉಡುಪಿ ಶ್ರೀ ಕೃಷ್ಣ ಮಠದಲ್ಲಿ ಬೃಹತ್ ಗೀತೋತ್ಸವಕ್ಕೆ ಅದ್ದೂರಿ ಚಾಲನೆ|
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.