ಪಿ.ಸಿ. ಶೇಖರ್ ‘ಬ್ಯಾಡ್’ ಡ್ರೀಮ್: ವಿಲನ್ ಗಳ ಚಿತ್ರದಲ್ಲಿ ನಕುಲ್, ಮಾನ್ವಿತಾ
Team Udayavani, Jun 25, 2023, 5:54 PM IST
ಪಿ.ಸಿ. ಶೇಖರ್ ನಿರ್ದೇಶನದಲ್ಲಿ ನಕುಲ್ ಗೌಡ ಮುಖ್ಯಭೂಮಿಕೆಯಲ್ಲಿ ನಟಿಸುತ್ತಿರುವ ಚಿತ್ರಕ್ಕೆ “ಬ್ಯಾಡ್’ ಎಂದು ಹೆಸರಿಡಲಾಗಿದೆ. ಎಸ್.ಆರ್.ವೆಂಕಟೇಶ್ ಗೌಡ ನಿರ್ಮಾಣದಲ್ಲಿ ಈ ಚಿತ್ರ ಮೂಡಿ ಬರುತ್ತಿದೆ.
ಈ ಚಿತ್ರಕ್ಕೆ ಬ್ಯಾಡ್ ಅಂತ ಹೆಸರಿಡಲು ಕಾರಣವಿದೆ. ಏಕೆಂದರೆ ಇದರಲ್ಲಿ ನಾಯಕ ಹಾಗೂ ನಾಯಕಿ ಅಂತ ಇಲ್ಲ. ಎಲ್ಲಾ ವಿಲನ್ ಪಾತ್ರಗಳೇ. ಅದರಲ್ಲಿ ಮುಖ್ಯ ವಿಲನ್ ಗಳಿರುತ್ತಾರಷ್ಟೆ. ರೋಷಮಾನ್ ಎಫೆಕ್ಟ್ ಎಂಬ ವಿಧಾನವನ್ನು ಈ ಚಿತ್ರದಲ್ಲಿ ಬಳಸಿಕೊಳ್ಳಲಾಗುತ್ತಿದೆ. ಜಪಾನ್ ನಿರ್ದೇಶರೊಬ್ಬರು ಈ ವಿಧಾನವನ್ನು ತಮ್ಮ ಚಿತ್ರದ ಮೂಲಕ ಪರಿಚಯಿಸಿದ್ದರು. ಕನ್ನಡದಲ್ಲಿ ಇದರ ಬಳಕೆಯಾಗಿರುವುದು ವಿರಳ ಕಡಿಮೆ.
ಒಂದೇ ಕಥೆಯನ್ನೇ ಬೇರೆಬೇರೆಯವರು ಹೇಳುವ ವಿಧಾನ ಬೇರೆ ರೀತಿ ಆಗಿರುತ್ತದೆ. ಪ್ರಸ್ತುತ ಈ ಚಿತ್ರದ ಚಿತ್ರೀಕರಣ ಮುಕ್ಕಾಲು ಭಾಗ ಮುಕ್ತಾಯವಾಗಿದೆ. ಕೆಲವು ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ.
“ಇದು ನನ್ನ ನಿರ್ದೇಶನದ ಹತ್ತನೇ ಚಿತ್ರ. ಅರ್ಜುನ್ ಜನ್ಯ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. ನನ್ನ ನಿರ್ದೇಶನದ ಹತ್ತು ಚಿತ್ರಗಳಲ್ಲಿ ಒಂಭತ್ತು ಚಿತ್ರಗಳಿಗೆ ಅರ್ಜುನ್ ಜನ್ಯ ಅವರೆ ಸಂಗೀತ ನೀಡಿದ್ದಾರೆ. ನಾನೇ ಕಥೆ, ಚಿತ್ರಕಥೆ ರಚಿಸಿದ್ದೇನೆ. ಸಂಕಲನವನ್ನು ಮಾಡುತ್ತಿದ್ದೇನೆ. ನನ್ನ ಹಿಂದಿನ ರಾಗ ಹಾಗೂ ದಿ ಟೆರರಿಸ್ಟ್ ಚಿತ್ರಗಳಿಗೆ ಸಂಭಾಷಣೆ ಬರೆದಿದ್ದ ಸಚಿನ್ ಬಿ ಹೊಳಗುಂಡಿ ಈ ಚಿತ್ರಕ್ಕೂ ಸಂಭಾಷಣೆ ಬರೆದಿದ್ದಾರೆ. ಜಿ.ರಾಜಶೇಖರ್ ಅವರ ಕಲಾ ನಿರ್ದೇಶನವಿದೆ’ ಎನ್ನುವುದು ನಿರ್ದೇಶಕರ ಮಾತು.
ಇದೊಂದು ಪ್ರಯೋಗಾತ್ಮಕ ಚಿತ್ರವಾಗಿದ್ದು, ಬರುವ ಪಾತ್ರಗಳ ಅಭಿನಯ ನೋಡುಗರಿಗೆ ಸಹಜ ರೀತಿಯಲ್ಲಿ ಕಾಣಬೇಕು ಹಾಗೂ ಅವರ ಪಾತ್ರವನ್ನು ನೋಡಿದ ಕೂಡಲೆ, ಇವರದು ಇಂತಹುದೇ ಪಾತ್ರ ಎಂದು ಪ್ರೇಕ್ಷಕರು ಅಂದುಕೊಳ್ಳಬಾರದು. ಹಾಗಾಗಿ ಈ ಚಿತ್ರದಲ್ಲಿ ಹೆಚ್ಚು ಹೊಸ ಕಲಾವಿದರು ಅಭಿನಯಿಸುತ್ತಿದ್ದಾರೆ.
ನಾಯಕನಾಗಿ ನಟಿಸಿದ್ದ ನಕುಲ್ ಗೌಡ, ಮಾನ್ವಿತಾ ಹರೀಶ್, ಸಾಯಿ ಕೃಷ್ಣ, ಅಪೂರ್ವ ಭಾರದ್ವಾಜ್, ಮಂಜುನಾಥ್ , ಅಶ್ವಿನಿ ಹಾಗೂ ಅನೇಕ ರಂಗಭೂಮಿ ಪ್ರತಿಭೆಗಳು ಈ ಚಿತ್ರದಲ್ಲಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
BBK11: ಆರಂಭದಿಂದಲೂ ಮಂಜು ಮೋಸದಿಂದಲೇ ಆಡುತ್ತಾ ಬರುತ್ತಿದ್ದಾರೆ.. ಮೋಕ್ಷಿತಾ ಕಣ್ಣೀರು
Renukaswamy Case:ಬೆನ್ನು ನೋವು ಬಳಿಕ ದರ್ಶನ್‌ಗೆ ಮತ್ತೊಂದು ಸಮಸ್ಯೆ; ವಕೀಲರು ಹೇಳಿದ್ದೇನು?
Kannada Cinema: ಕ್ಲೈಮ್ಯಾಕ್ಸ್ ನತ್ತ ʼಕುಲದಲ್ಲಿ ಕೀಳ್ಯಾವುದೋʼ
Deepika Das: ನಟಿ ದೀಪಿಕಾ ದಾಸ್ ಕುಟುಂಬಕ್ಕೆ ಬೆದರಿಕೆ ಕರೆ; ಯುವಕನ ವಿರುದ್ಧ ದೂರು
Kiccha Sudeepa: ಕ್ರಿಸ್ಮಸ್ ಗೆ ಬರುತ್ತಿದೆ ʼಮ್ಯಾಕ್ಸ್ʼ
MUST WATCH
ಬಳಂಜದ ಪುಟ್ಟ ಪೋರನ ಕೃಷಿ ಪ್ರೇಮ | ಕಸಿ ಕಟ್ಟುವಿಕೆಯಲ್ಲಿ ಬಲು ಪರಿಣಿತ ಈ 6 ನೇ ತರಗತಿ ಬಾಲಕ
ಎದೆ ನೋವು, ಮಧುಮೇಹ, ಥೈರಾಯ್ಡ್ ,ಸಮಸ್ಯೆಗಳಿಗೆ ಪರಿಹಾರ ತೆಂಗಿನಕಾಯಿ ಹೂವು
ಕನ್ನಡಿಗರಿಗೆ ಬೇರೆ ಭಾಷೆ ಸಿನಿಮಾ ನೋಡೋ ಹಾಗೆ ಮಾಡಿದ್ದೆ ನಾವುಗಳು
ವಿಕ್ರಂ ಗೌಡ ಎನ್ಕೌಂಟರ್ ಪ್ರಕರಣ: ಮನೆ ಯಜಮಾನ ಜಯಂತ್ ಗೌಡ ಹೇಳಿದ್ದೇನು?
ಮಣಿಪಾಲ | ವಾಗ್ಶಾದಲ್ಲಿ ಗಮನ ಸೆಳೆದ ವಾರ್ಷಿಕ ಫ್ರೂಟ್ಸ್ ಮಿಕ್ಸಿಂಗ್ |
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.