ಜೂನ್ 30ಕ್ಕೆ ತೆರೆಗೆ ಬರಲಿದೆ ‘ಬೆಂಗಳೂರು ಬಾಯ್ಸ್’
Team Udayavani, Jun 26, 2023, 11:46 AM IST
“ಬೆಂಗಳೂರು ಬಾಯ್ಸ್’ ಹೀಗೊಂದು ಚಿತ್ರ ಆರಂಭವಾಗಿ ಈಗ ಬಿಡುಗಡೆಯ ಹಂತಕ್ಕೆ ಬಂದಿದೆ. ಚಿತ್ರ ಜೂನ್ 30ರಂದು ತೆರೆಕಾಣುತ್ತಿದೆ. ಈಗಾಗಲೇ ಚಿತ್ರದ ಫಸ್ಟ್‌ಲುಕ್ ಹಾಗೂ ಹಾಡು ಬಿಡುಗಡೆಯಾಗಿ ಹಿಟ್‌ಲಿಸ್ಟ್ ಸೇರಿದೆ.
ವಿ ಮೇಕರ್ಸ್ ನಿರ್ಮಾಣದಲ್ಲಿ ಈ ಚಿತ್ರ ಮೂಡಿಬರುತ್ತಿದೆ. 90ರ ದಶಕದ ಸೂಪರ್ ಹಿಟ್ ಸಿನಿಮಾಗಳದ “ಅಂತ’, “ರಣಧೀರ’, “ಓಂ’ ಹಾಗೂ “ಎ’ ಸಿನಿಮಾಗಳ ನಾಯಕರ ರೀತಿಯಲ್ಲಿ ಸಚಿನ್ ಚೆಲುವರಾಯ ಸ್ವಾಮಿ, ಅಭಿಷೇಕ್‌ದಾಸ್, ರೋಹಿತ್ ಮಿಂಚಿದ್ದಾರೆ. ಇವರ ಜೊತೆ ವೈನಿಧಿ ಜಗದೀಶ್, ಸೋನಿ ಮುಖ್ಯಭೂಮಿಕೆಯಲ್ಲಿ ನಟಿಸಿದ್ದಾರೆ.
ಬೆಂಗಳೂರು ಬಾಯ್ಸ್ ರೋಮ್ಯಾಂಟಿಕ್ ಕಾಮಿಡಿ ಎಂಟರ್ ಟೈನರ್ ಚಿತ್ರವಾಗಿದ್ದು, ಕಾಲೇಜು ಕಥೆ, ಲವ್ ಸ್ಟೋರಿ, ಸೆಂಟಿಮೆಂಟ್‌ನ ಕಾಂಬಿನೇಷನ್ ಇದರಲ್ಲಿದೆ.
ಚಿತ್ರದ ಬಗ್ಗೆ ಮಾತನಾಡುವ ನಿರ್ಮಾಪಕ ವಿಕ್ರಮ್, “ಇದು ನಾಲ್ವರು ಹುಡುಗರ ಸುತ್ತ ನಡೆಯುವ ಕಥೆ. ಹೆಸರಿಗೆ ತಕ್ಕಂತೆ ಬೆಂಗಳೂರು ಸಿಟಿಯೇ ಈ ಸಿನಿಮಾದ ಹೈಲೈಟ್. ಜೀವಕ್ಕೆ ಜೀವ ಕೊಡುವಂತಿರುವ ಹುಡ್ರು ನಡುವೆ ಒಂದು ಟ್ವಿಸ್ಟ್ ಬಂದಾಗ ಮುಂದೇನಾಗುತ್ತದೆ ಎಂಬುದು ಸಿನಿಮಾದ ಹೈಲೈಟ್. ಇದು ಪಕ್ಕಾ ಇಂದಿನ ಯೂತ್ಸ್ ಅನ್ನು ಗಮನದಲ್ಲಿಟ್ಟುಕೊಂಡು ಮಾಡಿರುವ ಸಿನಿಮಾ. ಈಗಾಗಲೇ ಚಿತ್ರೀಕರಣ ಪೂರ್ಣಗೊಂಡು ಮೊದಲ ಪ್ರತಿ ಕೂಡಾ ಹೊರಬಂದಿದೆ. ಶೀಘ್ರದಲ್ಲಿ ಸಿನಿಮಾ ಬಿಡುಗಡೆ ಮಾಡಲಿದ್ದೇವೆ’ ಎನ್ನುವುದು ನಿರ್ಮಾಪಕ ವಿಕ್ರಮ್ ಮಾತು.
ಅಂದಹಾಗೆ, ಗುರುದತ್ ಗಾಣಿಗ ಈ ಸಿನಿಮಾದ ಕ್ರಿಯೇಟಿವ್ ಡೈರೆಕ್ಟರ್ ಆಗಿದ್ದಾರೆ. ಚಿತ್ರದಲ್ಲಿ “ಬೆಂಗಳೂರು ಬಾಯ್ಸ’ ಚಿತ್ರದಲ್ಲಿ ಚಿಕ್ಕಣ್ಣ ಪ್ರಮುಖ ಪಾತ್ರವೊಂದರಲ್ಲಿ ನಟಿಸುವ ಜೊತೆಗೆ ಚಿತ್ರದ ಹಾಡೊಂದನ್ನು ಹಾಡಿದ್ದಾರೆ. “ಟಪಾಸ್’ ಎಂಬ ಲಿರಿಕ್ಸ್ ಹೊಂದಿರುವ ಈ ಹಾಡು ಇತ್ತೀಚೆಗೆ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿದೆ.
ಚಿತ್ರಕ್ಕೆ ಧರ್ಮ ವಿಷ್ ಸಂಗೀತ ಸಂಯೋಜನೆ ಸಿನಿಮಾಕ್ಕಿದೆ. ವಿಕ್ರಮ್ ಕೆ ವೈ ಸಿನಿಮಾದ ಸಿನಿಮಾಗೆ ಬಂಡವಾಳ ಹೂಡಿದ್ದು, ಪ್ರಶಾಂತ್ ರಾವ್ ಪುರಂ ಸಹ ನಿರ್ಮಾಣದ ಜವಾಬ್ದಾರಿ ಹೊತ್ತಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Jai Hanuman: ತೆಲುಗು ನಿರ್ದೇಶಕನ ಸಿನಿಮಾದಲ್ಲಿ ʼಹನುಮಾನ್ʼ ಆದ ಕನ್ನಡದ ರಿಷಬ್ ಶೆಟ್ಟಿ
Darshan: ಜೈಲಿನಿಂದ ಹೊರಬರುತ್ತಿದ್ದಂತೆ ದರ್ಶನ್ ಕಾರು ಅಡ್ಡಗಟ್ಟಿ ಜೈಕಾರ ಕೂಗಿದ ಫ್ಯಾನ್ಸ್
ದರ್ಶನ್ ಗೆ ಜಾಮೀನು… ಕನಕ ದುರ್ಗಮ್ಮ ದೇವಿಗೆ ವಿಶೇಷ ಪೂಜೆ ಸಲ್ಲಿಸಿದ ಪತ್ನಿ ವಿಜಯಲಕ್ಷ್ಮೀ
Actor Darshan: ಬೇರೆ ಅವರನ್ನು ನಿಂದಿಸಬೇಡಿ.. ದರ್ಶನ್ ಅಭಿಮಾನಿಗಳಿಗೆ ʼಡಿ ಕಂಪನಿʼ ಮನವಿ
Actor Darshan: ‘ದಾಸʼನ ಜಾಮೀನಿಗೆ ಶ್ಯೂರಿಟಿ ನೀಡಲು ಮುಂದೆ ಬಂದ ಆ ನಟ ಯಾರು?
MUST WATCH
ಹೊಸ ಸೇರ್ಪಡೆ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.